ಮೈಸೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಜೆಪಿ ನಡುವಿನ ಜಟಾಪಟಿ ಮುಂದುವರೆದಿದ್ದು, ದಶಪಥ ರಸ್ತೆ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಎಚ್.ಸಿ ಮಹದೇವಪ್ಪ ಹಂಚಿಕೊಂಡಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿಪಿಆರ್ ಆಗಿ, ಇದೀಗ ಸಂಪೂರ್ಣಗೊಳ್ಳುತ್ತಿರುವ 118 ಕಿಲೋಮೀಟರ್‌ಗಳ ಮ್ಮ ಕನಸಿನ ಬೆಂಗಳೂರು ಮೈಸೂರು ದಶಪಥ ರಸ್ತೆ. ದೂರ ದೃಷ್ಟಿ ಮತ್ತು ಅಭಿವೃದ್ಧಿಗೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂಬ ಬರಹ ವಿಡಿಯೋದಲ್ಲಿದೆ. ಹೆಚ್ ಸಿ ಮಹದೇವಪ್ಪ ಭಾವಚಿತ್ರದ ಜೊತೆ ವಿಡಿಯೋ ಮೂಡಿಬಂದಿದೆ.
ಚುನಾವಣೆ ಹೊಸ್ತಿಲಲ್ಲಿ ಹೈವೇ ಕ್ರೆಡಿಟ್’ಗಾಗಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಿತ್ತಾಟ ನಡೆಸಿದ್ದು, ಇಂದು ಕಾಂಗ್ರೆಸ್’ನಿಂದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ನೇತೃತ್ವದಲ್ಲಿ ದಶಪಥ ರಸ್ತೆ ಕಾಮಗಾರಿ ವೀಕ್ಷಣೆ ಕಾರ್ಯ ಮಾಡಲಿದ್ದಾರೆ.
ಬಳಿಕ ಮೈಸೂರಿನ ಸಿದ್ದಲಿಂಗಪುರದ ಬಳಿ ಸುದ್ದಿಗೋಷ್ಠಿ ನಡೆಸಿ, ದಶಪಥ ರಸ್ತೆ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದಾರೆ. ದಶಪಥ ರಸ್ತೆ ಕಾಂಗ್ರೆಸ್ ಕೊಡುಗೆ ಎಂಬುದರ ಬಗ್ಗೆ ದಾಖಲೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಸೇರಿದಂತೆ ಬಿಜೆಪಿ ನಾಯಕರು ಹೇಳುತ್ತಿರುವುದೆಲ್ಲಾ ಸುಳ್ಳು. ಕಾಂಗ್ರೆಸ್ ಕೊಡುಗೆ ಎಷ್ಟಿದೆ ಎಂಬುದನ್ನು ತಿಳಿಸುವುದಾಗಿ ಕಾಂಗ್ರೆಸ್ ಹೇಳಿದೆ.