ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಸಮೀಪದ ಮಾಕೋಡು ಗ್ರಾಮದಲ್ಲಿ ಮಂಗಳವಾರ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣ ನಡೆದಿದ್ದು, ಈ ವಿಚಾರವಾಗಿ ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇವಾಲಯದ ಕಾರ್ಯಕ್ರಮವೊಂದರಲ್ಲಿ ತಮಟೆ ಬಾರಿಸಲು ನಿರಾಕರಿಸಿದಕ್ಕೆ ದಲಿತ ವ್ಯಕ್ತಿಯ ಮೇಲೆ ಸ್ಥಳೀಯ ನಿವಾಸಿ ಕುಮಾರ್ ಎಂಬುವವರು ಹಲ್ಲೆ ಮಾಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸರ ಪ್ರಕಾರ, ಕುಮಾರ್ ಎಂಬುವವರು ಪರಮಯ್ಯನವರಿಗೆ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಕಾರ್ಯಕ್ರಮವ ವೇಳೆ ತಮಟೆ ಬಾರಿಸುವಂತೆ ಕೇಳಿಕೊಂಡಿದ್ದರು. ಆದರೆ, ಡೋಲು ಬಾರಿಸುವುದನ್ನು ನಿಲ್ಲಿಸಿರುವುದಾಗಿ ಪರಮಯ್ಯ ಕುಮಾರ್‌ಗೆ ತಿಳಿಸಿದರು.
ಕುಮಾರ್ ಅವರ ಬಲವಂತಪಡಿಸಿದ್ದರಿಂದ ಪರಮಯ್ಯ ತನ್ನ ಮಗ ಬಸವರಾಜನನ್ನು ಕರೆಸಿಕೊಂಡು ತಮಟೆ ಬಾರಿಸಲು ಮುಂದಾಗಿದ್ದಾರೆ. ಆರಂಭದಲ್ಲಿ ಡೋಲು ಬಾರಿಸಲು ನಿರಾಕರಿಸಿದ್ದಕ್ಕಾಗಿ ಪರಮಯ್ಯನ ಮೇಲೆ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.

ಪರಮಯ್ಯ ಅವರನ್ನು ಪಿರಿಯಾಪಟ್ಟಣ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪುತ್ರ ಆರೋಪಿ ಕುಮಾರ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.