ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಉಪತಳಿ BF7 ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದ್ದು ಸಂಭಾವ್ಯ ನಾಲ್ಕನೇ ಅಲೆಯನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತರಲು ಚಿಂತನೆ ನಡೆಸಿದೆ.
ಸಂಭಾವ್ಯ ನಾಲ್ಕನೇ ಅಲೆ ಕುರಿತು ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಗಿದ್ದು ಕೋವಿಡ್ ಮಾರ್ಗಸೂಚಿ ಜಾರಿ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ರಾಜೇಂದ್ರ ಕೋವಿಡ್ ಮಾರ್ಗಸೂಚಿ ಜಾರಿ ಹಿನ್ನೆಲೆಯಲ್ಲಿ ಸಭೆ ಮಾಡಿದ್ದೇವೆ ಕೋವಿಡ್ ಟೆಸ್ಟಿಂಗ್ ಹೆಚ್ಚು ಮಾಡಲು ಸೂಚನೆ ನೀಡಲಾಗಿದೆ ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಒಟ್ಟು 100 ಬೆಡ್, ತಾಲೂಕು ಆಸ್ಪತ್ರೆಯಲ್ಲಿ 5 ಬೆಡ್ ಕಾಯ್ದಿರಿಸಲು ಸೂಚಿಸಲಾಗಿದೆ.
ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಒಟ್ಟು 100 ಬೆಡ್, ತಾಲೂಕು ಆಸ್ಪತ್ರೆಯಲ್ಲಿ 5 ಬೆಡ್ ಕಾಯ್ದಿರಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೊದಲ ಡೋಸ್ ಹಾಗೂ ಎರಡನೇ ಡೋಸ್ 27 ಲಕ್ಷ ಜನ ಮೂರನೇ ಡೋಸ್ ಅನ್ನು 6ಲಕ್ಷ ಜನ ಪಡೆದಿದ್ದಾರೆ. ಜಿಲ್ಲೆಯಲ್ಲಿ 59 ಸಾವಿರ ವ್ಯಾಕ್ಸಿನ್ ಲಭ್ಯವಿದೆ. ಪ್ರಮುಖ ಪ್ರವಾಸಿ ತಾಣಗಳಲ್ಲಿ ಸಾರ್ವಜನಕಿಕರು ಮಾಸ್ಕ್ ಹಾಕಬೇಕು ಸದ್ಯಕ್ಕೆ ಯಾವುದಕ್ಕೂ ನಿರ್ಬಂಧ ಮಾಡಲಾಗಿಲ್ಲ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.
ಕೋವಿಡ್ ಟೆಸ್ಟ್ ಗೆ ಹೆಚ್ಚಿನ ಒತ್ತು ನೀಡಲಾಗುವುದು ಪರೀಕ್ಷಾ ವರದಿಗಳನ್ನು ಮುಚ್ಚಿಡದಂತೆ ಸೂಚನೆ ನೀಡಲಾಗಿದೆ ಮುಂಜಾಗ್ರತಾ ಲಸಿಕೆ ಪಡೆಯಲು ಮನವಿ ಮಾಡುತ್ತೇವೆ ಜನರು ಭಯ, ಗಾಬರಿಯಾಗುವುದು ಬೇಡ ಎಂದು ಹೇಳಿದ್ದಾರೆ.
ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಬೇಕು ಆಸ್ಪತ್ರೆಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು ಕೋವಿಡ್ ಲಸಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸೂಚನೆ ನೀಡಲಾಗಿದೆ. ಬೇರೆ ಬೇರೆ ಕಾಯಿಲೆ ಇರುವವರು ಮಾಸ್ಕ್ ಹಾಕಿಕೊಂಡೇ ಮನೆಯಿಂದ ಹೊರ ಬರಬೇಕು ರೋಗದ ಲಕ್ಷಣ ಇರುವವರು ಮನೆಯಲ್ಲಿಯೇ ಇರುವಂತೆ ಮನವಿ ಮಾಡುತ್ತೇವೆ ಇನ್ನು ಮುಂದೆ ಪ್ರತಿನಿತ್ಯ 400 ಮಂದಿಗೆ ಟೆಸ್ಟ್ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಜಿಲ್ಲೆಯಲಿ ಚಿರತೆ ಹಾವಳಿ ಹೆಚ್ಚಾಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಉಪಟಳ ನೀಡುತ್ತಿರುವ ಚಿರತೆಗಳ ಸೆರೆಗೆ ಅರಣ್ಯ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ ಡ್ರೋಣ್ ಕ್ಯಾಮರಾ ಸೇರಿದಂತೆ ಅತ್ಯಾಧುನಿಕ ಉಪಕರಣಗಳನ್ನು ಬಳಸಿಕೊಂಡು ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಯಾವುದೇ ಪ್ರಾಣ ಹಾನಿಯಾಗದಂತೆ ಶ್ರಮಿಸಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.