• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಈ ವರ್ಷ ‘ನಾದ ಬ್ರಹ್ಮ’ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ಕರ್ನಾಟಕ, ರಾಜಕೀಯ
0
ಹಂಸಲೇಖ
Share on WhatsAppShare on FacebookShare on Telegram

ವಿಶ್ವಪ್ರಸಿದ್ಧ ಮೈಸೂರು ದಸರಾವನ್ನು(Mysuru Dasara) ಈ ವರ್ಷ ʼನಾದಬ್ರಹ್ಮʼ ಎಂದು ಹೆಸರಾದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಆಗಸ್ಟ್ 29) ತಿಳಿಸಿದ್ದಾರೆ.

ADVERTISEMENT

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ಘೋಷಿಸಿದರು.

ದಸಾರ ಅಕ್ಟೋಬರ್ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್ಹೌಸ್ ವೃತ್ತ, ಎಲ್ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.

ಬುಧವಾರ (ಆಗಸ್ಟ್ 30) ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಜತೆಗಿನ ತಮ್ಮ ಸಂಬಂಧದ ಬಗ್ಗೆ ವಿರೋಧ ಪಕ್ಷಗಳ ನಾಯಕರು ನೀಡುವ ಹೇಳಿಕೆಗಳು, ಮಾಧ್ಯಮಗಳಲ್ಲಿ ಆಗಾಗ ಬರುವ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ವಿರೋಧ ಪಕ್ಷಗಳು ನಮ್ಮನ್ನು ದೂರ ಮಾಡಲು ಎಷ್ಟೇ ಪ್ರಯತ್ನ ಮಾಡಿದರೂ ನಾವಿಬ್ಬರು ಇನ್ನಷ್ಟು ಹತ್ತಿರವಾಗುತ್ತಿದ್ದೇವೆ ಎಂದರು.

ನಾಳೆ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಅದು ಯಶಸ್ವಿಯಾಗಬೇಕೆಂದು ಆಶಿಸಿ ಸಿಎಂ, ಡಿಸಿಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವರು ಇಂದು ಬೆಳಗ್ಗೆಯೇ ಚಾಮುಂಡಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿ ದೇವಿಯ ಗರ್ಭಗುಡಿ ಮುಂದೆ ಗೃಹಲಕ್ಷ್ಮಿ ಗ್ಯಾರಂಟಿ ಕಾರ್ಡನ್ನಿಟ್ಟು, ಸೀರೆ ಜತೆಗೆ ಕನಕಾಂಬರ, ಮಲ್ಲಿಗೆ ಹಾಗೂ ಗುಲಾಬಿ ಹೂವಿನ ಹಾರವನ್ನು ಸಲ್ಲಿಸಿದರು. ಬಾಳೆಹಣ್ಣು ಮತ್ತು ದಾಳಿಂಬೆ ಹಣ್ಣನ್ನೂ ಸಮರ್ಪಿಸಿದರು. ಗ್ಯಾರಂಟಿ ಕಾರ್ಡ್ ಜತೆಗೆ ಸಿಎಂ ಮತ್ತು ಡಿಸಿಎಂ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು.

Tags: CM SiddaramaiahHamsalekhaMysuru DussehraNada Brahma Hamsalekhaನಾದಬ್ರಹ್ಮ ಹಂಸಲೇಖಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು ದಸರಾಹಂಸಲೇಖ
Previous Post

ಗಡಿ ವಿಚಾರದಲ್ಲಿ ಚೀನಾ ಮತ್ತೆ ತಗಾದೆ | ಅರುಣಾಚಲ ಪ್ರದೇಶ ಸೇರಿಸಿ ನಕ್ಷೆ ಬಿಡುಗಡೆ

Next Post

ಚಾಮುಂಡೇಶ್ವರಿಗೆ ಹರಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಂ ಡಿ.ಕೆ.ಶಿವಕುಮಾರ್

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಸಿಎಂ ಸಿದ್ದರಾಮಯ್ಯ

ಚಾಮುಂಡೇಶ್ವರಿಗೆ ಹರಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಂ ಡಿ.ಕೆ.ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada