ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿ ಟೋಲ್ ಏರಿಕೆ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನೇ ‘ಅಧಿಕೃತ ವ್ಯವಹಾರ’ ಮಾಡಿಕೊಂಡಿವೆ. ಇನ್ನೂ ರಾಜ್ಯದ ಸರಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ ಎಂದು ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು @NHAI_Official ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. @BJP4India & @INCKarnataka ಸರಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ.1/6#ಹೆದ್ದಾರಿಯಲ್ಲಿ_ಹಗಲು_ದರೋಡೆ'
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2023
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ ಎಂದು ಕಿಡಿಕಾರಿದ್ದಾರೆ.
ಸರಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ .ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ‘ಹೆದ್ದಾರಿಯಲ್ಲಿ ಹಗಲು ದರೋಡೆ’ಯಷ್ಟೇ.ಎಕ್ಸ್ ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ 20% ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂಧು ಗುಡುಗಿದ್ದಾರೆ.