• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
February 28, 2023
in Top Story, ಇದೀಗ
0
ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ
Share on WhatsAppShare on FacebookShare on Telegram

ಮೈಸೂರು: ಜಿಲ್ಲೆಯ ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ, ಮೈಸೂರಿನ ಗನ್ ಹೌಸ್ ವೃತ್ತದಿಂದ ಮೆರವಣಿಗೆ ಆರಂಭಿಸಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ರೈತರು ಯತ್ನಿಸಿದರು.

ADVERTISEMENT

ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ ತಡೆದ, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಬಂದ ಅಪಾರ ಜಿಲ್ಲಾಧಿಕಾರಿ ಕವಿತಾ ರಾಜರಾವ್ ಒತ್ತಾಯ ಪತ್ರ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಮೂರು ದಿನದೊಳಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ ನಂತರ ಚಳುವಳಿಯನ್ನು  ರೈತರು ಕೈ ಬಿಟ್ಟರು.

ರೈತರು ಎಂದಿಗೂ ಯಾರಿಗೂ ಹೆದರಬಾರದು

ಚಳುವಳಿಯ ನೇತೃತ್ವ ವಹಿಸಿದ ರಾಜ್ಯಅಧ್ಯಕ್ಷ ಕುರುಬೂರ್ ಶಾಂತಕುಮಾರ್ ಮಾತನಾಡಿ, ಎಲ್ಲಾ ಸರ್ಕಾರಗಳು ರೈತರನ್ನ ಗುಲಾಮರಂತ್ತೆ ನಡೆಸಿಕೊಳ್ಳುತ್ತಿದ್ದಾರೆ, ತಿನ್ನುವ ಅನ್ನಕ್ಕೆ ಕಷ್ಟ ಬಂದಾಗ ರೈತರ ಬಗ್ಗೆ ಗೌರವ ಬರುತ್ತದೆ, ರೈತರು ಎಂದಿಗೂ ಯಾರಿಗೂ ಹೆದರಬಾರದು ರೈತರ ಮೇಲೆ ದಬ್ಬಾಳಿಕೆ ನಡೆಸುವ ಯಾರೇ ಆದರೂ ಅವರನ್ನು ಮಟ್ಟ ಹಾಕಲು ಸಂಘಟಿತರಾಗಬೇಕು, ಸರ್ಕಾರ ಮಾಡಿದ ಆದೇಶವನ್ನು ಗಾಳಿಗೆ ತೂರಿ ರೈತರನ್ನು ವಂಚಿಸುವ ಸಕ್ಕರೆ ಕಾರ್ಖಾನೆ ಮಾಲೀಕರ ಷಡ್ಯಂತರ ಮಟ್ಟ ಹಾಕಲು ಹೋರಾಟದ ಅವಶ್ಯಕತೆ ಎಂದರು.

ಕಬ್ಬಿನ ಹೆಚ್ಚುವರಿ 150 ರೂ  ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಅರಿಶಿಣ ಬೆಳೆಗೆ ಬೆಲೆ ಕುಸಿತವಾಗಿದ್ದು, ಎಂಇಎಸ್ ಯೋಜನೆಯಲ್ಲಿ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾವೇರಿ – ಕಬಿನಿ  ಅಚ್ಚುಕಟ್ಟು ನಾಲೆಗಳ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಕಬ್ಬು ಬಾಳೆ ಇನ್ನಿತರ ಬೆಳೆಗಳ ರಕ್ಷಣೆಗಾಗಿ ಬೇಸಿಗೆಯಲ್ಲಿ ದನ ಕರುಗಳ ಕುಡಿಯುವ ನೀರಿಗಾಗಿ  ಕೆರೆ ಕಟ್ಟೆಗಳನ್ನು ತುಂಬಿಸಲು, ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದ ರೈತರಿಗೆ ನಾಳೆಯಿಂದಲೇ ನೀರು ಹರಿಸುವುದಾಗಿ ಕಬಿನಿ ಅಧಿಕ್ಷಕ ಅಭಿಯಂತರರು ಭರವಸೆ ನೀಡಿದರು.

 ಕೃಷಿ ಪಂಪ್ ಸೆಟ್’ಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 6 ರವರಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ನೀಡಬೇಕು. ಕನಿಷ್ಠ ಬೆಂಬಲ ಬೆಲೆ ಭತ್ತ ರಾಗಿ ಇತರೆ ಉತ್ಪನ್ನಗಳ ಖರೀದಿ ಕೇಂದ್ರಗಳಲ್ಲಿ, ರೈತರಿಂದ ಖರೀದಿ ಮಿತಿ ವಿಧಿಸಿರುವುದನ್ನು ರದ್ದುಗೊಳಿಸಬೇಕು. ಪ್ರತಿ ರೈತನ ಹೊಲದ ವಿಮೆ ಜಾರಿ ಆಗಬೇಕು. ಬ್ಯಾಂಕ್ ಗಳಲ್ಲಿ ಕೃಷಿ ಸಾಲಕ್ಕೆ  ಸಿಬಿಲ್ ಸ್ಕೋರ್ ಮಾನದಂಡ ನೀತಿ ಕೈ ಬಿಡಬೇಕು. ಕೃಷಿ ಸಾಲ ನೀತಿ ಬದಲಾಗಬೇಕು ರೈತನ ಭೂಮಿ ಮೌಲ್ಯಕ್ಕೆ ಅನುಗುಣವಾಗಿ ಶೇ 75 ರಷ್ಟು ಸಾಲ ನೀಡಬೇಕು, ಕೃಷಿ ಉತ್ಪಾದನೆಗೆ ಬಡ್ಡಿ ರಹಿತ ಸಾಲ ನೀಡಬೇಕು. ಕಳಪೆ ರಸಗೊಬ್ಬರ ಕೀಟನಾಶಕ ಮಾರಾಟ ಮಾಡುವುದನ್ನು ತಡೆಗಟ್ಟಬೇಕು. ಅಡಿಗೆ ಅನಿಲ (ಗ್ಯಾಸ್) ವಿತರಕರು ಪ್ರತಿ ಸಿಲಿಂಡರ್ ಗೆ ನಿಗದಿತ ದರಕ್ಕಿಂತ ಹೆಚ್ಚು ಹಣವನ್ನು ಗ್ರಾಮೀಣ ಭಾಗದಲ್ಲಿ ಸುಲಿಗೆ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ರಾಜ್ಯದಲ್ಲಿ ಜಾರಿಗೆ ಬಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಬೇಕು. ಜಿಲ್ಲೆಯಲ್ಲಿ ಸಾವಿರಾರು ರೈತರು ಹತ್ತಾರು ವರ್ಷಗಳಿಂದಲೂ ಸಾಗುವಳಿ ಮಾಡಿಕೊಂಡು ಹೋಗುತ್ತಿರುವ ಜಮೀನುಗಳಿಗೆ ಸಾಗುವಳಿ ಪತ್ರವನ್ನು ನೀಡದೆ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ನಾಶವಾಗುವ ಪರಿಹಾರ ಧನ ಸಂಪೂರ್ಣ ನಷ್ಟ ಭರಿಸಬೇಕು, ಜೀವ ಹಾನಿಗೆ ಕನಿಷ್ಠ 50 ಲಕ್ಷ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

Tags: Farmers protestMysore
Previous Post

ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ: ಚುನಾವಣೆ ಬಳಿಕ ಟೋಲ್ ಶುಲ್ಕ ಬದಲಾಗಲಿದೆ- ಎಂ.ಲಕ್ಷ್ಮಣ್

Next Post

WATER PROBLEM | ನೀರಿಗಾಗಿ ಹಾಡಿ ಜನರ ಅಲೆದಾಟ, ತಿಂಗಳ ನೀರಿನ ಸಮಸ್ಯೆ ಒಂದೇ ದಿನಕ್ಕೆ ಪರಿಹಾರ #PRATIDHVANI

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post
WATER PROBLEM | ನೀರಿಗಾಗಿ ಹಾಡಿ ಜನರ ಅಲೆದಾಟ, ತಿಂಗಳ ನೀರಿನ ಸಮಸ್ಯೆ ಒಂದೇ ದಿನಕ್ಕೆ ಪರಿಹಾರ #PRATIDHVANI

WATER PROBLEM | ನೀರಿಗಾಗಿ ಹಾಡಿ ಜನರ ಅಲೆದಾಟ, ತಿಂಗಳ ನೀರಿನ ಸಮಸ್ಯೆ ಒಂದೇ ದಿನಕ್ಕೆ ಪರಿಹಾರ #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada