ಮೈಸೂರು: ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. 4 ರಿಂದ 5 ಜನರಿಂದ ಗ್ಯಾಂಗ್ರೇಪ್ ಆಗಿದೆ ಎಂದು ಎಫ್ಐಆರ್ ದಾಖಲಾಗಿದೆ. ಇದೀಗ ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು ಕಾರ್ಯಚರಣೆ ಮುಂದುವರೆಸಿದ್ದಾರೆ.
ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿ ಮಂಗಳವಾರ ಸಂಜೆ ತನ್ನ ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ಬೆಟ್ಟಕ್ಕೆ ತೆರಳಿದ್ದಳು.ಈ ವೇಳೆ ಅಲ್ಲಿಗೆ ಆಗಮಿಸಿದ ನಾಲ್ವರು ಯುವಕರ ತಂಡ ವಿದ್ಯಾರ್ಥಿಗೆ ಹಲ್ಲೆ ನಡೆಸಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸಂತ್ರಸ್ತೆ ಸ್ನೇಹಿತನಿಂದ ಮಾಹಿತಿ ಪಡೆದ ಅವರು, ಹುಡುಗಿಯನ್ನು ಸಮೂಹಿಕವಾಗಿ ಅತ್ಯಚಾರ ಮಾಡಿ ಜೊತೆಯಲ್ಲಿದ್ದ ಸ್ಬೇಹಿತನಿಗೆ ಹಲ್ಲೆ ಮಾಡಿದ್ದಾರೆ. ಅಪರಾಧಿಗಳು ಕುಡಿದ ಸ್ಥಿತಿಯಲ್ಲಿ ಇದ್ದರು ಎಂದು ಹೇಳಿದ್ದಾರೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ
ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಜ್ಞಾನೇಂದ್ರ, ನಾಳೆ ಮೈಸೂರಿಗೆ ಹೋಗುತ್ತಿದ್ದೇನೆ. ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಜ್ಞಾನೇಂದ್ರ, ನಾಳೆ ಮೈಸೂರಿಗೆ ಹೋಗುತ್ತಿದ್ದೇನೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಂದು ಉನ್ನತ ಮಟ್ಟದ ಅಧಿಕಾರಿಗಳು ಮೈಸೂರಿಗೆ ತೆರಳುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಕರಣದ ಸಂಪೂರ್ಣ ವರದಿ ಕೊಡುವಂತೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಿಎಂ ಬಿಮ್ಮಾಯಿ ಪ್ರತಿಕ್ರಿಯೆ
ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ ಶಿಕ್ಷೆ ಸಿಗುವುದು ಖಂಡಿತ, ಈ ನಿಟ್ಟಿನಲ್ಲಿ ಕೂಡಲೇ ಪೊಲೀಸರು ಕಾರ್ಯತತ್ಪರರಾಗಬೇಕೆಂದು ಸೂಚಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.