• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ
Share on WhatsAppShare on FacebookShare on Telegram

ಬೆಂಗಳೂರು: ಮೈಸೂರು ಮುಡಾದಲ್ಲಿ ಬರೋಬ್ಬರಿ ಹದಿನಾಲ್ಕು ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ.ಈಗ ಸಿಎಂ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ದೊರೆತಿರುವುದು ಅಧಿಕೃತವಾಗಿದ್ದು, ಪ್ರಕರಣ ದಾಖಲಾಗುವುದು ಖಚಿತವಾಗಿದೆ.

ADVERTISEMENT

ಈ ಮೂಲಕ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕುವುದು ಖಚಿತವಾಗಿದೆ. ರಾಜ್ಯಪಾಲರು ನೀಡಿರುವ ಆದೇಶ ಸರಿಯಾಗಿದೆ. ಯಾವುದೇ ಖಾಸಗಿ ವ್ಯಕ್ತಿ ಸಿಎಂ ವಿರುದ್ದ ತನಿಖೆಗೆ ಕೋರಲು ಅವಕಾಶವಿದೆ ಎನ್ನುವ ಮೂಲಕ ಹೈಕೋರ್ಟ್‌ ದೂರುದಾರರ ಮನವಿಗಳನ್ನು ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಕರ್ನಾಟಕದಲ್ಲಿ ಆಗುವ ಸಾಧ್ಯತೆಗಳಿವೆ.

ಮುಡಾ ನಿವೇಶನ ಹಂಚಿಕೆ ಹಗರಣ..ಸಿದ್ದರಾಮಯ್ಯ ಕುಟುಂಬಕ್ಕೆ ಲಾಭ ಆಗಿದೆ. ಹಾಗಾಗಿ ತನಿಖೆ ಅಗತ್ಯವಿದೆ ಎಂದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.:ಮುಡಾ ಹಗರಣ; ಅವರ ಮಕ್ಕಳ ರಕ್ಷಣೆಗಾಗಿ ಬಿಜೆಪಿ ಜೆಡಿಎಸ್‌ ಪಾದಯಾತ್ರೆ, ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಹೈಕಮಾಂಡ್‌- ವಿಡಿಯೋ.

17(ಎ) ಅಡಿಯಲ್ಲಿ ತನಿಖೆ ನಡೆಸಲು ನ್ಯಾಯಾಲಯದ ಆದೇಶ ನೀಡಿದ್ದು ರಾಜ್ಯಪಾಲರು ತರಾತುರಿಯ ನಿರ್ಣಯ ಕೈಗೊಂಡಿಲ್ಲ.ರಾಜ್ಯಪಾಲರ ಆದೇಶದಲ್ಲಿ ಯಾವುದೇ ತಪ್ಪಿಲ್ಲ ಎಂದು ನ್ಯಾಯಪೀಠವು ಸ್ಪಷ್ಟವಾಗಿ ಹೇಳಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕ್ರಿಯೆ ಮುಂದುವರೆಸಲು ಹೈಕೋರ್ಟ್ ಅನುಮತಿ ನೀಡಿದ್ದು. ಇದಕ್ಕೆ ಇದ್ದ ತಡೆಯಾಜ್ಞೆ ತೆರವುಗೊಂಡಂತಾಗಿದೆ.

ಸಿದ್ದರಾಮಯ್ಯ ಅವರ ವಿರುದ್ದ ಕೇಳಿ ಬಂದಿದ್ದ ಮುಡಾ ನಿವೇಶನ ಹಂಚಿಕೆ ಹಗರಣದ ವಿಚಾರದಲ್ಲಿ ಕಳೆದ ತಿಂಗಳು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ದೂರುಗಳನ್ನಾಧರಿಸಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಕುರಿತಾಗಿ ಒಂದು ತಿಂಗಳಿನಿಂದಲೂ ವಿಚಾರಣೆ ನಡೆದಿತ್ತು. ಅರ್ಜಿ ಸಲ್ಲಿಸಿದವರ ವಕೀಲರು, ಸಿದ್ದರಾಮಯ್ಯ ಪರ ವಕೀಲರು ಹಾಗೂ ರಾಜ್ಯಪಾಲರ ಪರ ವಕೀಲರ ವಾದವನ್ನು ನ್ಯಾಯಾಲಯ ಆಲಿಸಿತ್ತು. ಕಳೆದ ವಾರವೇ ವಾದ ಪ್ರತಿವಾದ ಅಂತಿಮಗೊಳಿಸಿ ತೀರ್ಪನ್ನು ಕಾಯ್ದಿರಿಸಲಾಗಿತ್ತು.

Mysore Muda Scam: ಮುಡಾ ಹಗರಣ, ಸಿಎಂಗೆ ರಾಜ್ಯಪಾಲರ ನೊಟೀಸ್‌, ಗರಿಗೆದರಿದ ರಾಜಕೀಯ, ಸಚಿವರ ಉಪಹಾರ, ಸಿಎಂ ಗೈರಿನಲ್ಲಿ ಸಂಪುಟ ಸಭೆಈ ಕುರಿತು ಮಂಗಳವಾರ ಮಧ್ಯಾಹ್ನ ತೀರ್ಪನ್ನು ಪ್ರಕಟಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿತು. ಈ ಮೂಲಕ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿದೆ ಎನ್ನುವುದನ್ನು ಸಮರ್ಥಿಸಿಕೊಂಡಿತು.

ತೀರ್ಪು ಪ್ರಕಟಗೊಂಡ ನಂತರ ಮಾತನಾಡಿದ ದೂರುದಾರರಾದ ಟಿ.ಜೆ.ಅಬ್ರಾಹಂ, ಸ್ನೇಹಮಯಿ ಕೃಷ್ಣ, ನಾವು ಯಾವ ಕಾಯಿದೆ ಅಡಿ ದೂರು ನೀಡಿದ್ದೆವೋ ಅದನ್ನೆಲ್ಲಾ ಪೀಠವು ಪರಿಶೀಲಿಸಿದೆ. ಅಲ್ಲದೇ ಆ ಪ್ರಕಾರವೇ ನಮ್ಮ ದೂರು ಪುರಸ್ಕರಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿದೆ. ನಾವು ನೀಡಿದ ದೂರಿನ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷ್‌ಗೆ ಕೊಟ್ಟ ಅನುಮತಿ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದೆ ಎಂದು ಹೇಳಿದರು.

ತೀರ್ಪು ಬಂದ ವಿಷಯ ತಿಳಿದು ಬೆಂಗಳೂರು ಹೊರ ವಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿದ್ದ ಸಿಎಂ ಸಿದ್ದರಾಮಯ್ಯ ಅಲ್ಲಿಂದ ತರಾತುರಿಯಲ್ಲಿಯೇ ಹೊರಟರು. ಮುಂದಿನ ಕಾನೂನು ಹೋರಾಟಗಳನ್ನು ಕೈಗೊಳ್ಳುವ ಕುರಿತು ನ್ಯಾಯವಾದಿಗಳೊಂದಿಗೆ ಚರ್ಚಿಸಲು ಮುಂದಾದರು. ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Mysore Muda Scam: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಹಿರಂಗವಾಗಿ ಕಾಣಿಸಿಕೊಳ್ಳುವುದೇ ಇಲ್ಲ ಏಕೆ?

ರಾಜೀನಾಮೆಗೆ ಅಶೋಕ್‌ ಆಗ್ರಹ ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ.

ಮೂಡಾದಲ್ಲಿ ಅಕ್ರಮವಾಗಿ 14 ಸೈಟುಗಳನ್ನು ಕಬಳಿಸಿದ್ದ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿರುವುದು ಸ್ವಾಗತಾರ್ಹ..

ಅಧಿಕಾರ ದುರ್ಬಳಕೆ, ಸ್ವಜನಪಕ್ಷಪಾತ ಎಸಗಿ ಮೂಡಾದಲ್ಲಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು @siddaramaiah ನಡೆಸಿದ್ದ ಕುತಂತ್ರಗಳಿಗೆ ಹೈಕೋರ್ಟ್ ಆದೇಶ ಕಪಾಳಮೋಕ್ಷ ಮಾಡಿದೆ.

ಮೂಡಾ… pic.twitter.com/ZNY3vkTj7i

— Janata Dal Secular (@JanataDal_S) September 24, 2024

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ @INCKarnataka ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ.ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ… pic.twitter.com/NebYp5eotp

— R. Ashoka (@RAshokaBJP) September 24, 2024

Tags: CM SiddaramaiahCongress Partymuda case cm siddaramaiahSiddaramaiah's application rejectedtrouble
Previous Post

ಹೈಕೋರ್ಟ್‌ʼನಲ್ಲಿ ಸಿಎಂಗೆ ಮುಜುಗರವಾದ್ರೆ ಎದುರಾಗೋ ಸವಾಲುಗಳೇನು

Next Post

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ಮರುಸ್ಥಾಪನೆ ;ರಾಹುಲ್‌ ಗಾಂಧಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ಮರುಸ್ಥಾಪನೆ ;ರಾಹುಲ್‌ ಗಾಂಧಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada