ಮೈಸೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಹೀಗಾಗಿ 50 ಸಾವಿರಕ್ಕಿಂತ ಅಧಿಕ ಹಣವನ್ನು ಕೊಂಡೊಯ್ಯುವ ಮುನ್ನ ಸೂಕ್ತ ದಾಖಲೆಗಳನ್ನು ಹೊಂದಿರುವುದು ಅವಶ್ಯವಾಗಿದೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಮ್ಮನಹಳ್ಳಿ ಚೆಕ್ಪೋಸ್ಟ್ನಲ್ಲಿ ಅಧಿಕಾರಿಗಳು ಹಣ ವಶಕ್ಕೆ ಪಡೆದಿದ್ದಾರೆ. ಬೈಕ್ನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಳಿಯಲ್ಲಿ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಆತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.