ಮೈಸೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಗಂಡನನ್ನು ಪ್ರಿಯಕರನ ಜತೆ ಸೇರಿ ಪತ್ನಿ ಕೊಲೆ ಮಾಡಿರುವ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರಿನ ಹೂಟಗಳ್ಳಿ ನಿವಾಸಿ ಮಂಜು ಕೊಲೆಯಾದ ದುರ್ದೈವಿ. ಆತನ ಪತ್ನಿ ಲಿಖಿತಾ ಕೊಲೆ ಮಾಡಿದಾಕೆ.
12 ವರ್ಷಗಳ ಹಿಂದೆ ಮೈಸೂರಿನ ಬೋಗಾದಿ ನಿವಾಸಿ ಲಿಖಿತಾ ಜೊತೆ ಮಂಜು ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ.
ಆದರೆ ಲಿಖಿತಾ ಪ್ರಿಯಕರನ ಜೊತೆ ಮನೆಬಿಟ್ಟು ಹೋಗಿದ್ದು, ರಾಜಿ ಪಂಚಾಯಿತಿ ಮೂಲಕ ಮತ್ತೆ ಪತಿ ಮನೆ ಸೇರಿಸಿಕೊಂಡಿದ್ದಳು. ಈ ವೇಳೆ ಹೆಂಡತಿಯ ನಡವಳಿಕೆ ಬಗ್ಗೆ ಗಂಡ ಆಗಾಗ್ಗೆ ಪ್ರಶ್ನೆ ಮಾಡಿದ್ದಾನೆ. ಇದರಿಂದ ಕುಪಿತಗೊಂಡ ಲಿಖಿತ ತಡರಾತ್ರಿ ಪ್ರಿಯಕರನ ಜೊತೆ ಸೇರಿ ತನ್ನ ಗಂಡ ಮಂಜು ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

ಪ್ರಕರಣದ ತನಿಖೆ ಕೈಗೊಂಡ ಮೈಸೂರಿನ ವಿಜಯನಗರ ಪೋಲೀಸರು ಲಿಖಿತಾಳನ್ನು ವಶಕ್ಕೆ ಪಡೆದಿದ್ದಾರೆ.
ತಲೆಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ
ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ತಾವರಕಟ್ಟೆ ಬಳಿ ನಡೆದಿದೆ.
ಬುಧವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಕೆ.ಆರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಂತಕರಿಗಾಗಿ ಬಲೆ ಬೀಸಿದ್ದಾರೆ.
ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.