ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದಸರಾ ಸಂಭ್ರಮ ಜೋರಾಗಿದೆ. ಇಂದು ಶರನ್ನವರಾತ್ರಿಯ ಒಂಬತ್ತನೇ ದಿನ. ಅಂಬಾವಿಲಾಸ ಅರಮನೆಯಲ್ಲಿ ಸಂಭ್ರಮ ಕಳೆಗಟ್ಟಿದ್ದು, ಆಯುಧ ಪೂಜೆಯ ಸಡಗರ ಜೋರಾಗಿದೆ. ಇಂದು ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಲಿದೆ.

ಇಂದು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (yaduveer odeyar), ಪೂಜಾ ಕೈಂಕರ್ಯಗಳನ್ನ ನೆರವೇರಿಸಲಿದೆ. ಇಂದು ಬೆಳಗ್ಗೆ 6ಕ್ಕೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾ ಹೋಮ ನಡೆಯುತ್ತಿದೆ
ಬೆಳಗ್ಗೆ 9.05ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ ಆದ ಬಳಿಕ ಮಧ್ಯಾಹ್ನ 12.20ರಿಂದ 12.45ರ ವರೆಗೆ ಕಲ್ಯಾಣ ಮಂಟಪದಲ್ಲಿ ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ ಸಲ್ಲಿಸ್ತಾರೆ. ಬಳಿಕ ಆನೆ ತೊಟ್ಟಿಯಲ್ಲಿ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಆನೆ, ಪಲ್ಲಕ್ಕಿ ಹಾಗೂ ರಾಜರು ಬಳಸುವ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಕೆ ಆಗಲಿದೆ.