ಇಂದಿನಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ (Mysuru dasara 2024) ಆರಂಭವಾಗಿದೆ. ನಾಡ ಅಧಿದೇವತೆ ಚಾಮುಂಡಿ ತಾಯಿಯ (Chamundi temple) ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಕಾರ್ಯಕ್ರಮಕ್ಕೆ ಸಾಹಿತಿ ಹಂಪ ನಾಗರಾಜಯ್ಯ (Hampa nagarajayya) ದಸರಾ ಉದ್ಘಾಟನೆ ಮಾಡಿದ್ದಾರೆ.

ಇಂದು ಬೆಳಗ್ಗಿನ ಜಾವದಿಂದಲೇ ತಾಯಿ ಚಾಮುಂಡಿ ಉತ್ಸವ ಮೂರ್ತಿಯನ್ನ ಶುದ್ದಿಕರಣ ಮಾಡಿ, ಬೆಳಿಗ್ಗೆ ವಿವಿಧ ಅಭಿಷೇಕಗಳನ್ನು ನೆರವೇರಿಸಿ, ಬಳಿಕ ವಿಶೇಷ ಅಲಂಕಾರಗಳಿಂದ ಸಿಂಗರಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯ್ತು.
ಈ ಮೂಲಕ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ದಸರಾದ ಧಾರ್ಮಿಕ ಕಾರ್ಯಗಳು ಆರಂಭವಾದವು. ಇಂದು ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (Dcm dk shivakumar), ಸಚಿವರು ಭಾಗಿಯಾಗಿದ್ದಾರೆ.