ಈ ಬಾರಿಯ 2025-26ನೇ ಸಾಲಿನ ಬಜೆಟ್ ನಲ್ಲಿ (Budget 2025-26) ಸಾಂಸ್ಕೃತಿಕ ನಗರಿ, ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಇಂಟರ್ನ್ಯಾಷನಲ್ ಫಿಲಂ ಸಿಟಿ (International film city) ನಿರ್ಮಾಣಕ್ಕೆ ಸರ್ಕಾರ ಹಣ ಮೀಸಲಿಡುವುದಾಗಿ ಹೇಳಿದೆ.

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನ ಪಿಪಿಇ (PPE) ಮಾದರಿಯಲ್ಲಿ ನಿರ್ಮಾಣ ಮಾಡಲು ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಮೀಸಲಾಗಿಟ್ಟಿದೆ.

ಒಟ್ಟು ೫೦೦ ಕೋಟಿ ವೆಚ್ಚದಲ್ಲಿ ಈ ಅಂತರರಾಷ್ಟ್ರೀಯ ಫಿಲಂ ಸಿಟಿ ಸ್ಥಾಪಿಸಲು ಈಗಾಗಲೇ 150 ಎಕರೆ ಜಮೀನು ಕಾಯ್ದಿರಿಸಲಾಗಿದ್ದು, ಮುಂದಿನ ವರ್ಷಗಳಲ್ಲಿ ಚಿತ್ರನಗರಿ ಸ್ಥಾಪಿಸಲು ನಿರ್ಧಾರ ಮಾಡಿದೆ ಎಂದಿದ್ದಾರೆ.