• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ಅತ್ಯಾಚಾರ ಪ್ರಕರಣ: ಐವರು ಪಾತಕಿಗಳ ಬಂಧನ

Any Mind by Any Mind
August 28, 2021
in ಕರ್ನಾಟಕ
0
ಮೈಸೂರು ಅತ್ಯಾಚಾರ ಪ್ರಕರಣ: ಐವರು ಪಾತಕಿಗಳ ಬಂಧನ
Share on WhatsAppShare on FacebookShare on Telegram


ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದ ಮೈಸೂರು ಸಾಮೂಹಿಕ ಅತ್ಯಾಚಾರ ಆರೋಪಿಗಳನ್ನು ಹಡೆಮುರಿ ಕಟ್ಟುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ADVERTISEMENT

ಘಟನೆ ಬೆಳಕಿಗೆ ಬರುತ್ತಿದ್ದಂತೆ ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಶುಕ್ರವಾರ ರಾತ್ರಿಯೇ ವಶಕ್ಕೆ ಪಡೆಯಲಾಗಿದೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ಸಂಜೆ ಗೆಳೆಯನೊಂದಿಗೆ ವಿಹಾರ ಹೋಗಿದ್ದ ಯುವತಿನ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಮೈಸೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ತಮಿಳುನಾಡು ಮತ್ತು ಕೇರಳ ಮೂಲದವರು ಎನ್ನಲಾಗಿದೆ. ಘಟನೆ ನಡೆದು ಮೂರು ದಿನದ ಬಳಿಕ ಶಂಕಿತ ಪಾತಕಿಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಗಸ್ಟ್ 24ರಂದು ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಳು, ಈ ವೇಳೆ ಚಾಮುಂಡಿಬೆಟ್ಟದ ಬಳಿಯ ಲಲಿತಾದ್ರಿಪುರದಲ್ಲಿ ಐವರು ಯುವಕರ ತಂಡ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು.
ಘಟನೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು. ಅಲ್ಲದೇ ಇದು ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿತ್ತು. ಇದೀಗ ಅತ್ಯಾಚಾರ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ತಾಂತ್ರಿಕ ಸಾಕ್ಷ್ಯಧಾರಗಳ ಆಧಾರದ ಮೇಲೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸರ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಘಟನೆ ಕುರಿತು ಸಂತ್ರಸ್ತೆಯಾಗಲೀ, ಆಕೆಯ ಪೋಷಕರಾಗಲೀ ಈವರೆಗೆ ಪೊಲೀಸರಿಗೆ ಯಾವುದೇ ಹೇಳಿಕೆ ನೀಡಿಲ್ಲ. ಸಂತ್ರಸ್ತೆಯ ಸ್ನೇಹಿತನ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದರು. ಹಾಗಾಗಿ ಇದೀಗ ಬಂಧಿತರ ಕುರಿತು ಸಂತ್ರಸ್ತೆಯ ಹೇಳಿಕೆ ಮುಖ್ಯವಾಗಿದ್ದು, ಪೊಲೀಸರು ಹೇಳಿಕೆ ಪಡೆಯುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

Tags: BJPGang RapeMysuruMysuru BJPMysuru Dasaraಬಿಜೆಪಿಮೈಸೂರುಸಾಮೂಹಿಕ ಅತ್ಯಾಚಾರ
Previous Post

ಸದ್ಯದಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ; ಯಾರಿಗೆಲ್ಲಾ ಸ್ಥಾನ?

Next Post

ಕಲಬುರ್ಗಿ ಪಾಲಿಕೆ ಚುನಾವಣೆ: ಕಾಂಗ್ರೆಸ್‌ಗೆ ಮತ್ತೆ ಏಕೆ ಮುನ್ನಡೆ? ಹೈದರಾಬಾದ್ ಕರ್ನಾಟಕ ಪಾಲಿಟಿಕ್ಸ್!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಸ್ಥಳೀಯ ಸಂಸ್ಥೆ ಚುನಾವಣೆ: 7 ಕಡೆ ಗೆದ್ದು ಬೀಗಿದ ಕಾಂಗ್ರೆಸ್, ತೀರ್ಥಹಳ್ಳಿ ಪ.ಪಂ ನಲ್ಲಿ 25 ವರ್ಷದ ಬಿಜೆಪಿ ಆಡಳಿತಕ್ಕೆ ಬ್ರೇಕ್

ಕಲಬುರ್ಗಿ ಪಾಲಿಕೆ ಚುನಾವಣೆ: ಕಾಂಗ್ರೆಸ್‌ಗೆ ಮತ್ತೆ ಏಕೆ ಮುನ್ನಡೆ? ಹೈದರಾಬಾದ್ ಕರ್ನಾಟಕ ಪಾಲಿಟಿಕ್ಸ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada