ಮಾಜಿ ಸಚಿವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ವರಿಷ್ಠರಗೆ ಶಾಕ್ ನೀಡಿದ್ದಾರೆ. ಜಿಟಿಡಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ ಅದರ ಮೊದಲ ಭಾಗವಾಗಿ ಜಿಟಿಡಿ ಮಾಜಿ ಸಿಎಂ ಸಿದ್ದರಾಮಯ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶವನ್ನ ನಡೆಸಿದ್ದರು. ಈ ಸಮಾವೇಶಕ್ಕೆ ತಮ್ಮಗೆ ಆಹ್ವಾನ ನೀಡಿರಲಿಲ್ಲ ಎಂಬ ಕಾರಣಕ್ಕೆ ಸೇಢನ್ನು ತೀರಿಸಿಕೊಳ್ಳಲ್ಲು ನವೆಂಬರ್ 9ರಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಸಮಾವೇಶವನ್ನ ಹಮ್ಮಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿ.ಟಿ.ದೇವೇಗೌಡ ನಾನು ಜೆ.ಡಿ.ಎಸ್ ನಲ್ಲಿ ಇರಬೇಕಾ ಬೇಡ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ಹೇಳಿದ ಮಾತನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಜಿ.ಟಿ.ಡಿ ಕುಮಾರಸ್ವಾಮಿಯವರಿಗೆ ನನ್ನ ಬಗ್ಗೆ ಯಾವುದೇ ಅಭಿಪ್ರಾಯ ಇದ್ದರು ನನ್ನ ನಿರ್ಧಾರ ಬದಲಾಗುವುದಿಲ್ಲ. ನಾನು ಎಲ್ಲಿರಬೇಕು ಅಂತ ಜನರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಾಗ ನನಗೆ ಆಹ್ವಾನ ಇರಲಿಲ್ಲ. ಬೆಳವಾಡಿ ದೇವಾಲಯಕ್ಕೆ ನಾನು ಹಣವನ್ನು ನೀಡಿದ್ದೆ. ಆದ್ರು ನನ್ನ ದೇವಸ್ಥಾನದ ಉದ್ಘಾಟನೆಗೆ ನನ್ನನು ಆಹ್ವಾನ ಮಾಡಲಿಲ್ಲ ಅದೇ ರೀತಿ ರಮ್ಮನಹಳ್ಳಿಗೂ ಆಹ್ವಾನ ಮಾಡಲಿಲ್ಲ ಎಂದು ಬೇಸರವನ್ನ ವ್ಯಕ್ತಪಡಿಸಿದ್ದಾರೆ.
ಇದೀಗಾ ಕ್ಷೇತ್ರದಲ್ಲಿ ಕೆಲವು ಕಾಮಗಾರಿ ಉದ್ಘಾಟನೆ ನಡೆಯುತ್ತಿದೆ. ಅದಕ್ಕೆ ಸಿದ್ದರಾಮಯ್ಯ ಬರುತ್ತಿದ್ದಾರೆ. ಸ್ಥಳಿಯ ಶಾಸಕನಾಗಿ ನಾನು ಬಾಗಿಯಾಗುತ್ತಿದ್ದೇನೆ. ಕ್ಷೇತ್ರದ ಜನರು ಕರೆದಾಗ ನಾನು ಹೋಗಲೆ ಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಕೂಡ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಬೊಮ್ಮಾಯಿ ಅವರು ಬಂದಾಗಲು ಅವರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಆದ್ರೆ ನಾನು ಪಕ್ಷ ಸೇರುವುದು ಬಿಡುವುದು ಎಲ್ಲವು ಜನರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ನಾನು ಜೆಡಿಎಸ್ ಬಿಡುವ ಬಗ್ಗೆ ಕ್ಷೇತ್ರದ ಜನರ ಬಳಿ ಅಭಿಪ್ರಾಯ ಕೇಳಿಲ್ಲ. ಇನ್ನು ಚುನಾವಣೆಗೆ ಸಾಕಷ್ಟು ಸಮಯ ಇದೆ. ಎಲ್ಲವೂ ಮತದಾರನ ತೀರ್ಮಾನದಂತೆ ನಡೆಯುತ್ತದೆ ಎಂದು ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೆಗೌಡ ಹೇಳಿದ್ದಾರೆ.







