• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

N Chaluvarayaswamy: ಶೀಘ್ರ 2.67 ಲಕ್ಷ ಮೆ.ಟನ್ ಯುರಿಯಾ ಪೂರೈಕೆಗೆ ಮನವಿ ಮಾಡಿದ ಎನ್.ಚಲುವರಾಯಸ್ವಾಮಿ:

ಪ್ರತಿಧ್ವನಿ by ಪ್ರತಿಧ್ವನಿ
August 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೇಂದ್ರವೇ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಹಿನ್ನಲೆ ಕರ್ನಾಟಕ ರಾಜ್ಯದಲ್ಲಿ ಯುರಿಯಾ ಕೊರತೆಯಾಗಿದ್ದು ಅತ್ಯಂತ ತ್ವರಿತವಾಗಿ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದರು..

ADVERTISEMENT

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚವ್ಹಾಣ್ ರವರು ಇಂದು ಮಧ್ಯಾಹ್ನ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಸರಬರಾಜು ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸವಿವರವಾಗಿ ಗಮನ ಸೆಳೆದು ಶೀಘ್ರ ಬಾಕಿ ಪೂರೈಕೆಗೆ ಬೇಡಿಕೆ ಸಲ್ಲಿಸಿದರು..

ಕರ್ನಾಟಕ ವಿಧಾನಸಭೆ ಹಾಗೂ ವಿಧಾನಪರಿಷತ್ತು ಕಲಾಪಗಳಲ್ಲಿ ಎರಡು ದಿನ ರಸಗೊಬ್ಬರ ಕೊರತೆ ಬಗ್ಗೆ ನಡೆದ ಗಂಭೀರ ಚರ್ಚೆಗಳ ವಿಚಾರ ಹಾಗೂ ರಾಜ್ಯದ ಬೇಡಿಕೆ ಕೇಂದ್ರದ ಹಂಚಿಕೆ ಮತ್ತು ಪೂರೈಕೆ ಪ್ರಮಾಣದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು..

ಕರ್ನಾಟಕದಲ್ಲಿ ಖರೀಫ್ ವಿಕಸಿತ ಕೃಷಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿ ಜುಲೈ ತಿಂಗಳಿಗೆ 1.27 ಲಕ್ಷ ಟನ್ ಯೂರಿಯಾ ಮತ್ತು ಆಗಸ್ಟ್ ತಿಂಗಳಿಗೆ 1.40 ಲಕ್ಷ ಟನ್ ಯೂರಿಯಾ ಕೊರತೆಯಿದೆ. ಒಟ್ಟಾರೆಯಾಗಿ 2.67 ಲಕ್ಷ ಟನ್ ಯೂರಿಯಾವನ್ನು ಆದಷ್ಟು ಬೇಗ ಕರ್ನಾಟಕಕ್ಕೆ ವಿತರಿಸಲು ಅಗತ್ಯವಿದೆ ಎಂದು ಕೃಷಿ ಸಚಿವರು ವಿವರ ಒದಗಿಸಿದರು..

ಆಗಸ್ಟ್-ಸೆಪ್ಟೆಂಬರ್ ಮಾಹೆಯಲ್ಲಿ ಬಿತ್ತನೆ ಕಾರ್ಯ ಹೆಚ್ಚಿನ ಪ್ರಮಾಣದಲ್ಲಿ ನಡೆಯುವುದರಿಂದ ರೈತರಿಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರವನ್ನು ಪೂರೈಸಬೇಕಿದೆ. ವಿಳಂಭವಾದಲ್ಲಿ ರೈತರ ಬೆಳೆಗೆ ಹಾನಿಯಾಗುವ ಸಂಭವವಿರುತ್ತದೆ. ಬಹುತೇಕ ಬೆಳೆಗಳಿಗೆ ಮೇಲುಗೊಬ್ಬರವಾಗಿ ಯುರಿಯಾ ಬಳಸುವುದರಿಂದ ತುರ್ತಾಗಿ ಮನವಿ ಮಾಡಿದರು..

ನಾವು ರಬಿ ಹಂಗಾಮಿನ ಗೊಬ್ಬರದ ಅವಶ್ಯಕತೆಗಳ ವಿವರ ಸಲ್ಲಿಸಿದ್ದು ಅದರಂತೆ ಹಂಚಿಕೆ ಮಾಡುವಂತೆಯೂ ಅವರು ವಿನಂತಿಸಿದರು..

ಇದೇ ವೇಳೆ ಇಂದೇ ತಾವು ರಸಗೊಬ್ಬರ ಇಲಾಖೆ ಕಾರ್ಯದರ್ಶಿಯವರೊಂದಿಗೆ ಮಾತನಾಡಿ ಆದಷ್ಟು ಬೇಗ ಕರ್ನಾಟಕಕ್ಕೆ ಬಾಕಿ ರಸಗೊಬ್ಬರ ಪೂರೈಕೆಯ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚವ್ಹಾಣ್ ಭರವಸೆ ನೀಡಿದರು..

ಇದೇ ಸಂದರ್ಭದಲ್ಲಿ ಉತ್ತರಪ್ರದೇಶ ರಾಜ್ಯ ಕೃಷಿ ಸಚಿವರಾದ ಶ್ರೀ ಸೂರ್ಯ ಪ್ರತಾಪ್ ಶಾಹಿ ಅವರು ಮಾತನಾಡಿ ರಾಜ್ಯಕ್ಕೆ 18 ಲಕ್ಷ ಮೆ.ಟನ್ ಯುರಿಯಾ ಹಂಚಿಕೆ ಮಾಡಲಾಗಿದ್ದು ಈ ವರೆಗೆ ಕೇವಲ 12 ಲಕ್ಷ ಮೆ.ಟನ್ ಪೂರೈಕೆಯಾಗಿದೆ. ಇನ್ನು 6 ಲಕ್ಷ ಮೆ.ಟನ್ ವ್ಯತ್ಯಾಸವಿದ್ದು ಸಮಸ್ಯೆ ತಲೆದೂರಿದೆ. ಆದಷ್ಟು ಬೇಗ ಬಾಕಿ ಪೂರೈಕೆ ಮಾಡುವಂತೆ ಮನವಿ ಮಾಡಿದರು.
ಬಿಹಾರ, ಉತ್ತರಖಾಂಡ, ಛತ್ತೀಸ್ಘಡ ಸೇರಿದಂತೆ ವಿವಿಧ ರಾಜ್ಯಗಳ ಕೃಷಿ ಸಚಿವರೂ ಸಹ ತಮ್ಮ ರಾಜ್ಯಗಳಲ್ಲಿ ಉಂಟಾಗಿರುವ ಯುರಿಯಾ ಮತ್ತು ಡಿ.ಎ.ಪಿ ರಸಗೊಬ್ಬರ ಕೊರತೆ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದರು..

ವಿಡಿಯೋ ಸಂವಾದದಲ್ಲಿ ರಾಜ್ಯದ ಕೃಷಿ ವಿಚಾರಗಳ ಕುರಿತು ಗಮನ ಸೆಳೆದ
ಎನ್.ಚಲುವರಾಯಸ್ವಾಮಿ:

ರಾಜ್ಯದಲ್ಲಿ ಯಶಸ್ವಿಯಾಗಿ ರಬಿ ವಿಕಸಿತ ಕೃಷಿ ಅಭಿಯಾನ ನಡೆಯುತ್ತಿದ್ದು ತಾವು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೆಪ್ಟೆಂಬರ್ 15 ಮತ್ತು 16 ರಂದು ನಡೆಯುವ ರಬಿ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಎನ್.ಚಲುವರಾಯಸ್ವಾಮಿ ಕೇಂದ್ರ ಸಚಿವರಿಗೆ ತಿಳಿಸಿದರು..

ಈ ಶೈಕ್ಷಣಿಕ ವರ್ಷದಿಂದಾಗಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದ್ದು ಕೇಂದ್ರ ಐ.ಸಿ.ಎ.ಆರ್ ಮಾನ್ಯತೆಗೆ ಒಳಪಡಿಸಿ ಅಭಿವೃದ್ಧಿ ಅನುದಾನಗಳನ್ನು ಬಿಡುಗಡೆ ಮಾಡಿ, ಐಸಿಎಆರ್ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿ ಮತ್ತು ಯುಎಎಸ್ ಬೆಂಗಳೂರು ನಿಂದ ಎಲ್ಲಾ ಕೆವಿಕೆ ಮತ್ತು ಎಐಸಿಆರ್ಪಿ ಕೇಂದ್ರಗಳನ್ನು ವರ್ಗಾಯಿಸುವಂತೆ ಮನವಿ ಮಾಡಿದರು..

Tags: agriculture minister n chaluvarayaswamyChaluvarayaswamychaluvarayaswamy mlaMinister N Chaluvarayaswamyn chaluvarayaswamyn chaluvarayaswamy ajit hanamakkamakkanavarn chaluvarayaswamy condoles youth familyn chaluvarayaswamy in suvarna newsn chaluvarayaswamy latest newsn chaluvarayaswamy on prajwal revannan chaluvarayaswamy on prajwal revanna pen drive casen chaluvarayaswamy slams r ashokan chaluvarayaswamy speechn chaluvarayaswamy vs jp naddaN Cheluvarayaswamyn. chaluvarayaswamy
Previous Post

ಹೊಂಬಾಳೆ ಫಿಲ್ಮ್ಸ್ ಮತ್ತು ಪಿವಿಆರ್ ಐನಾಕ್ಸ್ ಸಂಸ್ಥೆಗಳು ಈ ಸ್ವಾತಂತ್ರ್ಯ ದಿನಾಚರಣೆಯ ವಾರಾಂತ್ಯದಲ್ಲಿ ತಮ್ಮ ಲೋಗೋಗೆ ಕಾಂತಾರ ಚಿತ್ರದ ಅಗ್ನಿ ಸ್ಪರ್ಶ ನೀಡಿ,

Next Post

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮತದಾನದ ಹಕ್ಕು- ಬದುಕುವ ಹಕ್ಕು – ಪ್ರಜಾತಂತ್ರ

ಮತದಾನದ ಹಕ್ಕು- ಬದುಕುವ ಹಕ್ಕು – ಪ್ರಜಾತಂತ್ರ

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada