ಸಿಎಂ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಅವರು ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿದ್ದು, ಶೆಟ್ಟರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ.
ಹುಬ್ಬಳ್ಳಿಯ ಶೆಟ್ಟರ್ ನಿವಾಸದಲ್ಲಿ ನಡೆದ ಮಹತ್ವದ ಸಂಧಾನ ಸಭೆ ವಿಫಲವಾಗಿದೆ. ಹೀಗಾಗಿ ಜಗದೀಶ್ ಶೆಟ್ಟರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ನಾಳೆ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ.