ನಟ ಡಾಲಿ ಧನಂಜಯ್ ತಮ್ಮ ನಿರ್ಮಾಣ ಸಂಸ್ಥೆ ಡಾಲಿ ಪಿಕ್ಚರ್ಸ್ ಮೂಲಕ ನಿರ್ಮಾಣ ಮಾಡುತ್ತಿರುವ ಟಗರು ಪಲ್ಯ ಸಿನಿಮಾ ಈಗಾಗಲೇ ಟೈಟಲ್ ಹಾಗೂ ತಾರಾಗಣದ ಆಯ್ಕೆ ವಿಚಾರದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಟಗರು ಪಲ್ಯದ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿರುವ ಧನಂಜಯ್ ನಿರ್ಮಾಣದ ಚಿತ್ರದಲ್ಲಿ ನಾಯಕನಾಗಿ ಇಕ್ಕಟ್ ಖ್ಯಾತಿಯ ಡಾ || ನಾಗಭೂಷಣ್ ನಾಯಕನಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ.
ಈಗಾಗಲೇ ಈ ಚಿತ್ರದ ನಾಯಕಿಯಾಗಿ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು ಸ್ಕ್ರಿಪ್ಟ್ ಕೆಲಸ ಮುಗಿಸಿರುವ ಚಿತ್ರತಂಡ ಡಿಸೆಂಬರ್ನಲ್ಲಿ ಶೂಟಿಂಗ್ ಆರಂಭಿಸುವ ಬಗ್ಗೆ ಯೋಜನೆ ಹಾಕಿಕೊಂಡಿದೆ.
ಚಿತ್ರದಲ್ಲಿ ನಾಗಭೂಷಣ್, ಅಮೃತ ಪ್ರೇಮ್, ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ಅನೇಕರು ನಟಿಸುತ್ತಿದ್ದು. ಚಿತ್ರಕ್ಕೆ ನವ ಪ್ರತಿಭೆ ಉಮೇಶ್ ಕೃಪ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕೆ ಡಾಲಿ ಧನಂಜಯ್ ಬಂಡವಾಳ ಹೂಡುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜಿಸುತ್ತಿದ್ದಾರೆ ಎಸ್. ಕೆ. ರಾವ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ಧೇಶನ ಈ ಚಿತ್ರಕ್ಕಿರಲಿದೆ.