ವಾಲ್ಮಿಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಖುದ್ದು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕಾಗುವ ಮುಖಭಂಗ ತಪ್ಪಿಸಿಕೊಳ್ಳಲು ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅಲ್ಲದೇ ಪ್ರಕರಣವನ್ನ ಸಿಬಿಐಗೆ ವಹಿಸುವ ಸಾಧ್ಯತೆ ಇದೆ.ನಿನ್ನೆ ರಾತ್ರಿವರೆಗೂ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೀಗ ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅಥವಾ ನಾಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ಸಾಧ್ಯತೆ ಇದೆ