ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂತ್ರಿ ಆಗಲು ನಾಲಾಯಕ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಪಠ್ಯಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಬಳಿಕ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದ್ದಾರೆ. ಬಿ.ಸಿ.ನಾಗೇಶ್ ಮಂತ್ರಿ ಆಗಲು ನಾಲಾಯಕ್ ಎಂದು ಕಿಡಿಕಾರಿದರು.

ಬಿಜೆಪಿಯವರಿಗೆ ನಿಜವಾದ ಇತಿಹಾಸ ಗೊತ್ತಿಲ್ಲ. ಆದರೆ ಇತಿಹಾಸ ತಿರುಚುವುದು ಗೊತ್ತು. ಇತಿಹಾಸ ತಿರುಚಿ ಪಠ್ಯ ಪರಿಷ್ಕರಣೆ ಮಾಡಲಾಗಿತ್ತು. ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮಿತಿಯನ್ನು ಬಿಟ್ಟರು ಎಂದು ವಾಗ್ದಾಳಿ ನಡೆಸಿದ್ದಾರೆ.