ಆರಂಭಿಕ ನಮನ್ ಓಜಾ ಮತ್ತು ಇರ್ಫಾನ್ ಪಠಾಣ್ ಸಾಹಸದಿಂದ ಭಾರತ ಲೆಜೆಂಡ್ಸ್ ತಂಡ 5 ವಿಕೆಟ್ ಗಳಿಂದ ಆಸ್ಟ್ರೇಲಿಯಾ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಫೈನಲ್ ಪ್ರವೇಶಿಸಿದೆ.
ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಲೆಜೆಂಡ್ಸ್ ತಂಡ ೫ ವಿಕೆಟ್ ಗೆ 171 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಭಾರತ ಲೆಜೆಂಡ್ಸ್ 4 ಎಸೆತಗಳು ಬಾಕಿ ಇರುವಂತೆಯೇ ಜಯಭೇರಿ ಬಾರಿಸಿತು.
ನಮನ್ ಓಜಾ 62 ಎಸೆತಗಳಲ್ಲಿ 7 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ 90 ರನ್ ಬಾರಿಸಿ ಅಜೇಯರಾಗಿ ಉಳಿದರೆ, ಇರ್ಫಾನ್ ಪಠಾಣ್ 12 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 32 ರನ್ ಚಚ್ಚಿ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಬೆನ್ ಡಂಕ್ 26 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 46 ರನ್ ಬಾರಿಸಿ ತಂಡವನ್ನು ಆಧರಿಸಿದರು. ಕೆಮರೂನ್ ವೈಟ್ (30), ಅಲೆಕ್ಸ್ ಡೂಲನ್ (35) ಮತ್ತು ನಾಯಕ ಶೇನ್ ವ್ಯಾಟ್ಸನ್ (30) ತಂಡಕ್ಕೆ ಉತ್ತಮ ಆರಂಭ ನೀಡಿದರು.