ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಸಹೋದರಿ ಅಂತ ಹೇಳಿಕೊಂಡು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಆರ್.ಆರ್ ನಗರದ ನಿವಾಸಿ ಐಶ್ವರ್ಯಗೌಡ ಹಾಗೂ ಪತಿ ಹರೀಶ್ ಬಂಧಿತ ಆರೋಪಿಗಳು. ಅಲ್ಲದೇ ನಟ ಧಮೇಂದ್ರ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸದ್ಯ ಬಂಧಿತ ಐಶ್ವರ್ಯ ಗೌಡ, ಪತಿ ಹರೀಶ್ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ಗೆ ಕರೆದೊಯ್ಯಲಾಗಿದೆ. ವೈದ್ಯಕೀಯ ಪರೀಕ್ಷೆ ಮುಕ್ತಾಯಗೊಂಡ ಬಳಿಕ 4ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಐಶ್ವರ್ಯಗೌಡರನ್ನ ಕಸ್ಟಡಿಗೆ ನೀಡುವಂತೆ ಕೇಳಲು ರಿಮಾಂಡ್ ಅಪ್ಲಿಕೇಷನ್ ಸಹ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದಳು.ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದರು.ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.
ಧರ್ಮೇಂದ್ರ ಡಿ.ಕೆ ಸುರೇಶ್ ವಾಯ್ಸ್ನಲ್ಲಿ ಕರೆ ಮಾಡಿದ್ದ ಧರ್ಮೇಂದ್ರ ಮಾಲೀಕರಾದ ವನಿತಾ ಐತಾಳ್ಗೆ ಕರೆ ಮಾಡಿ ಸಮಯ ಕೇಳಿದ್ದರು.ಕೊನೆಗೆ ತಾನೇ ಧರ್ಮೇಂದ್ರನನ್ನ ಕಳುಹಿಸಿ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು.ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.ಈ ಕುರಿತು ಜ್ಯುವೆಲರಿ ಮಾಲೀಕಾರದ ವನಿತಾ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ವನಿತಾ ಐತಾಳ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ಆರೋಪಿಗಳಿಬ್ಬರನ್ನ ಬಂಧಿಸಿದ್ದಾರೆ.