• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ಅರ್ಹ ಮತದಾರರ ಹೆಸರನ್ನು ಮತದಾರರಪಟ್ಟಿಯಿಂದ ಕೈಬಿಡಲಾಗುತ್ತಿದೆ : ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ | BK HARIPRASAD

ಪ್ರತಿಧ್ವನಿ by ಪ್ರತಿಧ್ವನಿ
September 26, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
Names of eligible voters are being dropped from the electoral roll in Karnataka BK Hariprasad
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕದಲ್ಲಿ (Karnataka) ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ರಾಷ್ಟ್ರದ ಸಾಂವಿಧಾನಿಕ ಪದವಿಯಲ್ಲಿರುವ ಚುನಾವಣಾಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದರ ವಿರುದ್ಧ ರಾಹುಲ್ ಗಾಂಧಿ ಅವರು ಈ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂದು ತಿಳಿಸಿದರು. ನಾವು ಮಾಡುತ್ತಿರುವ ಹೋರಾಟ ಸಂವಿಧಾನ ರಕ್ಷಣೆಗಾಗಿ ಹಾಗೂ ಇದು ನಮ್ಮ ಕರ್ತವ್ಯವಾಗಿದೆ ಎಂದರು.

2024ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ನಡೆದ ಆರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಬಿಹಾರದಲ್ಲಿ 64 ಲಕ್ಷ ಹಾಗೂ ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತಗಳನ್ನು ಕೈಬಿಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ 38 ಲಕ್ಷ ಮತದಾರರ ಹೆಸರನ್ನು ನೋಟೀಸ್ ಕೊಟ್ಟು ತಡೆಹಿಡಿಯಲಾಗಿದ್ದು, ಮತದಾನದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗಿದೆ. ಈ ದೇಶದಲ್ಲಿ ಹುಟ್ಟಿರುವ ನಾಗರಿಕರ ಹಕ್ಕನ್ನು ಕಸಿಯಲು ಯಾರಿಗೂ ಅಧಿಕಾರವಿಲ್ಲ. ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಅರ್ಹ ಮತದಾರರನ್ನು ಕೈಬಿಡಲಾಗಿದೆ. ನಮ್ಮ ರಾಜ್ಯದಲ್ಲೂ 1.07 ಕೋಟಿ ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದ್ದು, ನಕಲಿ ಮತದಾರರ ನೋಂದಣಿ 70 ಲಕ್ಷ ಮತ್ತು ಇತರೆ 38 ಲಕ್ಷ ಎಂದು ವರ್ಗೀಕರಣ ಮಾಡಿದ್ದಾರೆ. ಕರ್ನಾಟಕದಲ್ಲಿ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ದೂರಿದರು.

Deputy Lokayukta B Veerappa : ನಾನು ರೆಡಿಯಾಗಿದ್ದೀನಿ, ನನ್ನ ಜೊತೆ ಬನ್ನಿ – ಉಪಲೋಕಾಯುಕ್ತರ ಕರೆ.! #pratidhvani

ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಧ್ವನಿ

ರಾಹುಲ್ ಗಾಂಧಿ ಅವರು 2024ರಿಂದಲೂ ಮತಗಳ್ಳತನದ ವಿಚಾರವಾಗಿ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇದೇ ಫ್ರೀಡಂ ಪಾರ್ಕ್‌ನಲ್ಲಿ ಮಹದೇವಪುರ, ಆಳಂದ ಹಾಗೂ ಮಹಾರಾಷ್ಟ್ರದಲ್ಲಿ ನಡೆದ ಮತಗಳ್ಳತನದ ವಿರುದ್ಧ ಧ್ವನಿ ಎತ್ತಿದ್ದರು. ಚುನಾವಣಾ ಆಯುಕ್ತರು ಯಾವ ರೀತಿ ಅಕ್ರಮಗಳ ಮೂಲಕ ಬಿಜೆಪಿಗೆ ನೆರವಾಗುತ್ತಿದ್ದಾರೆ ಎಂಬುದನ್ನು ವಿವರಿಸಿದ್ದರು. ಆರಂಭದಲ್ಲಿ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ; ನಂತರ ಚುನಾವಣಾ ಆಯೋಗದ ಆಯುಕ್ತರು ರಾಹುಲ್ ಗಾಂಧಿ ಅವರೇ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು ಎಂದು ನೆನಪಿಸಿದರು.

ಪ್ರಜಾಪ್ರಭುತ್ವದ ಭದ್ರ ಬುನಾದಿ ಮತದಾರರ ಪಟ್ಟಿ. ದೇಶದ ನಾಗರಿಕರಿಗೆ ಮತ ಚಲಾಯಿಸುವ ಹಕ್ಕಿದ್ದು, ಐದು ವರ್ಷಕ್ಕೊಮ್ಮೆ ಬೇಕಾದ ಸರ್ಕಾರ ಆರಿಸುವ ಶಕ್ತಿಯನ್ನು ಸಂವಿಧಾನ ನೀಡಿದೆ. ಇದನ್ನು ಬಿಜೆಪಿ ಬುಡಮೇಲು ಮಾಡಲು ಯತ್ನಿಸುತ್ತಿದೆ. ರಾಜೀವ್ ಗಾಂಧಿ ಅವರು ಹೊಸದಾಗಿ ಮತಪಟ್ಟಿ ಸೇರುವ ವಯೋಮಿತಿಯನ್ನು 21 ವರ್ಷಗಳಿಂದ 18 ವರ್ಷಕ್ಕೆ ಇಳಿಸಿದ್ದರು. ಜೆನ್ ಜಿ ಮತದಾರರ ಹೆಸರು ಮತಪಟ್ಟಿಯಲ್ಲಿ ಸೇರಬೇಕಿದೆ. ಈ ತಲೆಮಾರಿನವರು ಮೋದಿ ಸರ್ಕಾರದ ವಿರುದ್ಧ ನಿಂತಿದ್ದು, ಅವರ ಮತಗಳನ್ನು ತೆಗೆದುಹಾಕಲು ಷಡ್ಯಂತ್ರ ನಡೆಯುತ್ತಿದೆ. ದೇಶದಲ್ಲಿ ಹುಟ್ಟಿ, ಇಲ್ಲೇ ವ್ಯಾಸಂಗ ಮಾಡಿರುವ ಯುವ ಪೀಳಿಗೆಯ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ.

‘ಚಾಣಕ್ಯತನವಲ್ಲ, ಮತಗಳ್ಳತನ’

ಚುನಾವಣೆ ಗೆದ್ದ ನಂತರ ದೇಶದಲ್ಲಿ ಮೋದಿ ಅವರ ಬಿರುಗಾಳಿ ಹಾಗೂ ಅಮಿತ್ ಶಾ ಅವರ ಚಾಣಕ್ಯತನವಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇಲ್ಲಿ ಯಾವುದೇ ಬಿರುಗಾಳಿಯೂ ಇಲ್ಲ, ಚಾಣಕ್ಯತನವೂ ಇಲ್ಲ. ಚುನಾವಣಾ ಆಯೋಗದ ಮೂಲಕ ಮತಗಳ್ಳತನ ಮಾಡುವುದು ಚಾಣಕ್ಯತನವಲ್ಲ. ಚುನಾವಣಾ ಆಯೋಗದ ಈ ಕುತಂತ್ರ ಮತ್ತು ಅವ್ಯವಹಾರಗಳಿಗೆ ಕಡಿವಾಣ ಹಾಕಲು ನ್ಯಾಯಾಂಗವು ಮಧ್ಯಪ್ರವೇಶಿಸಿ ಪಾತ್ರ ವಹಿಸಬೇಕು. ಇಲ್ಲವಾದರೆ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಬುಡಮೇಲಾಗುತ್ತದೆ, ಹೀಗಾಗಿ ಯಾವುದೇ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಬಾರದು ಎಂದು ಆಗ್ರಹಿಸಿದರು.

ಆಯೋಗದ ಕಾರ್ಯವೈಖರಿ ಮತ್ತು ನೇಮಕಾತಿ ತಿದ್ದುಪಡಿಗೆ ಆಕ್ಷೇಪ

ಚುನಾವಣಾ ಆಯೋಗದಲ್ಲಿ ಮೂವರು ಆಯುಕ್ತರಿದ್ದು, ಯಾವುದೇ ನಿರ್ಧಾರವನ್ನು ಬಹುಮತದ ಆಧಾರದ ಮೇಲೆ ಕೈಗೊಳ್ಳಬೇಕು. ಆದರೆ ಕಳೆದ 10 ತಿಂಗಳಲ್ಲಿ 14 ಬಾರಿ ಇಬ್ಬರು ಆಯುಕ್ತರು ಭಿನ್ನಮತ ವ್ಯಕ್ತಪಡಿಸಿದ್ದರೂ, ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡು ಫಾರಂ 6ಕ್ಕೆ ತಿದ್ದುಪಡಿ ತಂದಿದ್ದಾರೆ. ಜ್ಞಾನೇಶ್ ಕುಮಾರ್ ಅವರು ಇತರ ಆಯುಕ್ತರ ಭಿನ್ನಮತಕ್ಕೆ ಮನ್ನಣೆ ನೀಡುತ್ತಿಲ್ಲ. ನೈಜ ಮತದಾರರ ಹಕ್ಕುಗಳನ್ನು ಕಸಿಯುವ ಕೆಲಸವನ್ನು ಮೋದಿ ಹಾಗೂ ಶಾ ಮಾಡುತ್ತಿದ್ದಾರೆ. ಜ್ಞಾನೇಶ್ ಕುಮಾರ್ ಅವರ ಜತೆಗೆ ಇರುವ ಇನ್ನಿಬ್ಬರು ಗೌಪ್ಯ ಆಯುಕ್ತರೆಂದರೆ ಅಮಿತ್ ಶಾ ಹಾಗೂ ನರೇಂದ್ರ ಮೋದಿ. ಇವರ ಮಾತುಗಳನ್ನು ಕೇಳಿಕೊಂಡು ದೇಶದಲ್ಲಿ 13 ಕೋಟಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ದೇಶ ಸ್ವತಂತ್ರವಾಗಿರಲು ಸುಸ್ಥಿರ ಪ್ರಜಾಪ್ರಭುತ್ವದ ಅಗತ್ಯವಿದೆ, ಅದಕ್ಕಾಗಿಯೇ ಚುನಾವಣಾ ಆಯೋಗವನ್ನು ರಚಿಸಲಾಯಿತು. ಕಳೆದ 75 ವರ್ಷಗಳ ಕಾಲ ಚುನಾವಣಾಧಿಕಾರಿಗಳು ಯಾವುದೇ ಅಕ್ರಮ ಮಾಡಿರಲಿಲ್ಲ. ಆದರೆ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆಯೋಗದ ಮೂಲಕವೇ ಚುನಾವಣೆಯಲ್ಲಿ ಅಕ್ರಮಗಳನ್ನು ನಡೆಸಲಾಗುತ್ತಿದೆ. ನಮ್ಮ ಪೂರ್ವಜರು ತಂದುಕೊಟ್ಟ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ನಡೆಸಬೇಕು ಎಂದರು.

High drama in J&K Assembly : J&K ವಿಧಾನಸಭೆಯಲ್ಲಿ BJP ಶಾಸಕನ ರಣಕಹಳೆ..! #bjpmla #jammukashmir

2023ರಲ್ಲಿ ಕಾನೂನಿಗೆ ತಿದ್ದುಪಡಿ ತಂದು ಚುನಾವಣಾ ಆಯೋಗದ ಆಯುಕ್ತರ ಆಯ್ಕೆ ಸಮಿತಿಯಿಂದ ಮುಖ್ಯ ನ್ಯಾಯಾಧೀಶರನ್ನು ಕೈಬಿಟ್ಟು ಕೇಂದ್ರ ಮಂತ್ರಿಯನ್ನು ಸೇರಿಸಲಾಗಿದೆ. ಇದರಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದ್ದು, ಸೋಮವಾರದಿಂದ ಈ ಹೋರಾಟವನ್ನು ಜಿಲ್ಲಾ ಮಟ್ಟದಲ್ಲೂ ವಿಸ್ತರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

 

Tags: BK HariprasadKarnatakaVoters
Previous Post

ಒಂದೇ ಬೈಕ್ ನಲ್ಲಿ 6 ವಿದ್ಯಾರ್ಥಿಗಳ ಡೆಡ್ಲಿ ಸವಾರಿ : ವಿಡಿಯೋ ವೈರಲ್ | BIKE RIDE

Next Post

ಚುನಾವಣಾ ಆಯೋಗ ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ | SIDDARAMAIAH

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
The Election Commission is acting according to the tunes of the Central Government says Siddaramaiah

ಚುನಾವಣಾ ಆಯೋಗ ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ | SIDDARAMAIAH

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada