
ಬೆಂಗಳೂರಿನ ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.


ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ʼವಿಶ್ವಗುರು ಬಸವಣ್ಣʼ ಅವನ್ನು ರಾಜ್ಯದ ಸಾಂಸ್ಕೃತಿಕ ನಾಯಕನಾಗಿ ಘೊಷಣೆ ಮಾಡಿದ್ದೇವೆ. ಈಗ ಬಸವಣ್ಣ ಅವರ ಹೆಸರನ್ನು ನಮ್ಮ ಮೆಟ್ರೋಗೆ ಮರು ನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬಸವ ತತ್ವಗಳ ಸಂವಿಧಾನದ ಆಶಯಗಳೊಂದಿಗೆ ಹೊಂದಿಕೊಂಡಿವೆ. ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಭರವಸೆ ನೀಡಿದರು.

ಇನ್ನೂ ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಹೇಳಿದರು.






