ಬೆಂಗಳೂರು: ಬಹಳ ದಿನಗಳಿಂದ ಗೊಂದಲ ಹುಟ್ಟಿಸಿದ್ದ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಅಧೀನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಸ್ಪಷ್ಟನೆ ನೀಡಿದೆ. ಬೆಂಗಳೂರು ಮೆಟ್ರೊ ರೈಲು ನಿಗಮವು ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಡುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.

ಜೊತೆಗೆ ರಾಜ್ಯ ಸರ್ಕಾರ 2019ರಲ್ಲಿ ಬಿಎಂಆರ್‌ಸಿಎಲ್ ಸಾರ್ವಜನಿಕ ಉಪಯುಕ್ತವಾದ ಸೇವೆ ಎಂದು ಹೊರಡಿಸಿದ್ದ ಅಧಿಸೂಚನೆ ಮತ್ತು ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯಿದೆಯ(ಎಸ್ಮಾ) ಅಡಿಯಲ್ಲಿ ಬಿಎಂಆರ್‌ಸಿಎಲ್ ಸೇವೆಗಳನ್ನು ಅತ್ಯವಶ್ಯಕ ಸೇವೆಗಳೆಂದು 2017ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮದ ನಿಯಂತ್ರಣ ಕೇಂದ್ರ ಸರ್ಕಾರಕ್ಕಿರಲಿದ್ದು, ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿ ಸೀಮಿತವಾಗಿದೆ. ಅಲ್ಲದೇ ಕೈಗಾರಿಕಾ ವಿವಾದ ಕಾಯಿದೆ ಅಡಿಯಲ್ಲಿ ವ್ಯಾಜ್ಯಗಳ ಪರಿಹಾರದ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ರಾಜ್ಯ ಸರ್ಕಾರದ ಎಸ್ಮಾ ಅಧಿಸೂಚನೆಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ. ಈ ಮೂಲಕ ಬಿಎಂಆರ್‌ಸಿಎಲ್ ಅಧೀಕೃತವಾಗಿ ಕೇಂದ್ರ ಸರ್ಕಾರದ ಅಧೀನದಲ್ಲಿರುತ್ತದೆ ಎಂದು ಹೈಕೋರ್ಟ್ ವಿವರಿಸಿದೆ.

