ಬೆಂಗಳೂರಿನ (Bengaluru) ನಾಗರಿಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿರುವ ನಮ್ಮ ಮೆಟ್ರೋ (Namma metro) ಹಳದಿ ಮಾರ್ಗದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಬೆಂಗಳೂರಿನ ಆರ್.ವಿ.ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗಿನ ಮಾರ್ಗದ 19.5 ಕಿಮೀ ಉದ್ದದ ಹಳದಿ ಮಾರ್ಗದ ಮೆಟ್ರೋ ಸಂಚಾರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಆಗಸ್ಟ್ 10 ರಂದು ಬೆಂಗಳೂರಿಗೆ ನರೇಂದ್ರ ಮೋದಿ (Pm modi) ಆಗಮಿಸಲಿದ್ದಾರೆ.

ಈ ನಿಟ್ಟಿನಲ್ಲಿ ಬಿಜೆಪಿ ನಾಯಕರುಗಳು ಕಾರ್ಯಕ್ರಮದ ಪೂರ್ವಭಾವಿ ತಯಾರಿ ಆರಂಭಿಸಿದ್ದಾರೆ. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಸಭೆ ಸೇರಿದ್ದ ಬಿಜೆಪಿ ನಾಯಕರುಗಳು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿ.ವೈ.ವಿಜಯೇಂದ್ರ, ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರುಗಳು ಪೂರ್ವಭಾವಿ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರುಗಳಾದ ಉದಯ್ ಗರುಡಾಚಾರ್, ರವಿಸುಬ್ರಮಣ್ಯ, ಸತೀಶ್ ರೆಡ್ಡಿ, ಸಿ. ಕೆ.ರಾಮಮೂರ್ತಿ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಹಾಗೂ ಬಿಜೆಪಿ ಮುಖಂಡ ಹೆಚ್.ರವೀಂದ್ರ ಭಾಗಿಯಾಗಿದ್ದರು.