• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಂಜನಗೂಡು ‘ಕೈ’ ಅಭ್ಯರ್ಥಿ ದರ್ಶನ್​ ಧ್ರುವ ನಾರಾಯಣ್ ನಾಮಪತ್ರ ಸಲ್ಲಿಕೆ : ಭಾರೀ ಜನಸ್ತೋಮ

ಪ್ರತಿಧ್ವನಿ by ಪ್ರತಿಧ್ವನಿ
April 17, 2023
in Top Story, ರಾಜಕೀಯ
0
ನಂಜನಗೂಡು ‘ಕೈ’ ಅಭ್ಯರ್ಥಿ ದರ್ಶನ್​ ಧ್ರುವ ನಾರಾಯಣ್ ನಾಮಪತ್ರ ಸಲ್ಲಿಕೆ : ಭಾರೀ ಜನಸ್ತೋಮ
Share on WhatsAppShare on FacebookShare on Telegram

ನಂಜನಗೂಡು : ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ದರ್ಶನ್​ ಧ್ರುವ ನಾರಾಯಣ್​ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿದ ದರ್ಶನ್​ ನಾಮಪತ್ರ ಸಲ್ಲಿಸಿದ್ರು.

ADVERTISEMENT

ನಂಜನಗೂಡು ಪಟ್ಟಣದ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು-ಗುಂಡ್ಲುಪೇಟೆ ಮುಖ್ಯ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ತಾಲೂಕು ಆಡಳಿತ ಭವನಕ್ಕೆ ಆಗಮಿಸಿ, ಚುನಾವಣಾ ಅಧಿಕಾರಿ ಕೃಷ್ಣಮೂರ್ತಿಗೆ ದರ್ಶನ್ ಧ್ರುವನಾರಾಯಣ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು.

ಅಪಾರ ಜನಸ್ತೋಮದೊಂದಿಗೆ ಹುಲ್ಲಹಳ್ಳಿ ವೃತದಿಂದ ತಾಲೂಕು ಆಡಳಿತ ಭವನದವರೆಗೆ ಕಾರ್ಯಕರ್ತರು ಜಯ ಘೋಷ ಕೂಗುತ್ತಾ ಸಾಗಿದರು.ಇದೇ ವೇಳೆ ದರ್ಶನ್ ಧ್ರುವನಾರಾಯಣ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕೇವಲ ಒಂದೇ ತಿಂಗಳಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನು ಕಳೆದುಕೊಂಡಿದ್ದೇನೆ. ಇನ್ನು ಆ ನೋವಿನ ದುಃಖದಿಂದ ಹೊರ ಬರಲು ಆಗುತ್ತಿಲ್ಲ. ನಮ್ಮ ತಂದೆ ಧ್ರುವನಾರಾಯಣ್ ಹಾದಿಯಲ್ಲಿ ಸಾಗುತ್ತೇನೆ. ರಾಜಕೀಯ ನನಗೆ ಬೇಡವಾಗಿತ್ತು. ಆದರೆ, ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಈ ಬಾರಿ ನನಗೊಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ದರ್ಶನ್ ಧ್ರುವನಾರಾಯಣ್ ನಾಮಪತ್ರ ಸಲ್ಲಿಸುವ ವೇಳೆ ಚಲನಚಿತ್ರ ನಿರ್ದೇಶಕ ಎಸ್ ನಾರಾಯಣ್ ಭಾಗವಹಿಸಿದರು.ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿರುವ ದರ್ಶನ್ ಅವರನ್ನು ನಾನು ಬೆಂಬಲಿಸುತ್ತಿದ್ದೇನೆ. ಕ್ಷೇತ್ರದ ಮತದಾರರು ಈ ಬಾರಿ ದರ್ಶನ್ ಅವರನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಬೇಕು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವೇ ಇಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಪಾದರಸದಂತೆ ಓಡಾಡಿ ರಾಜ್ಯದ ಜನರ ಮೆಚ್ಚುಗೆ ಗಳಿಸಿದ ಅಪ್ರತಿಮ ರಾಜಕಾರಣಿ ಎಂದರೆ ಅದು ಧ್ರುವನಾರಾಯಣ್ ಅವರು ಈ ಸಂದರ್ಭದಲ್ಲಿ ನಮ್ಮಲ್ಲಿಲ್ಲ ಎನ್ನುವುದಕ್ಕೆ ನಮಗೆ ಬಹಳ ನೋವಾಗುತ್ತದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿರುವ ರಾಜಕಾರಣಿ ಎಂದರೆ ಧ್ರುವನಾರಾಯಣ್. ಈಗ ನನಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಚಾಮರಾಜನಗರದ ನಾಲ್ಕು ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿದ್ದಾರೆಅದರ ಜೊತೆಗೆ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾನು ಕೂಡ ದರ್ಶನ್ ಧ್ರುವನಾರಾಯಣ್ ರವರ ಪರವಾಗಿ ಕ್ಷೇತ್ರದಾದ್ಯಂತ ತೆರಳಿ ಮತ ಪ್ರಚಾರವನ್ನು ನಡೆಸುತ್ತೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ಧರು.

Tags: Darshan Dhruvanarayannanjangudunomination papers
Previous Post

ನಿಖಿಲ್​ ಕುಮಾರಸ್ವಾಮಿಯನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್​ ಪ್ಲಾನ್​ : ಹೆಚ್​ಡಿಕೆ ಗಂಭೀರ ಆರೋಪ

Next Post

ಮತದಾರರ ಡೇಟಾ ಕಳ್ಳತನ: ಪ್ರತಿಧ್ವನಿ ಮತ್ತು TNM ವರದಿಯನ್ನು ಸಮರ್ಥಿಸಿದ ಚುನಾವಣಾ ಆಯೋಗದ ತನಿಖೆ.!

Related Posts

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ...

Read moreDetails
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಮತದಾರರ ಡೇಟಾ ಕಳ್ಳತನ: ಪ್ರತಿಧ್ವನಿ ಮತ್ತು TNM ವರದಿಯನ್ನು ಸಮರ್ಥಿಸಿದ ಚುನಾವಣಾ ಆಯೋಗದ ತನಿಖೆ.!

ಮತದಾರರ ಡೇಟಾ ಕಳ್ಳತನ: ಪ್ರತಿಧ್ವನಿ ಮತ್ತು TNM ವರದಿಯನ್ನು ಸಮರ್ಥಿಸಿದ ಚುನಾವಣಾ ಆಯೋಗದ ತನಿಖೆ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!