• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮೂಲಭೂತ ಸೌಕರ್ಯವಿಲ್ಲದ ನಂಜನಗೂಡು ಮಿನಿ ವಿಧಾನಸೌಧ!

ಪ್ರತಿಧ್ವನಿ by ಪ್ರತಿಧ್ವನಿ
July 13, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಮೂಲಭೂತ ಸೌಕರ್ಯವಿಲ್ಲದ ನಂಜನಗೂಡು ಮಿನಿ ವಿಧಾನಸೌಧ!
Share on WhatsAppShare on FacebookShare on Telegram

ದಕ್ಷಿಣಕಾಶಿ ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ.
ಹೌದು, ನಂಜನಗೂಡು ನಗರದ ಊಟಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾಲ್ಲೂಕು ಮಿನಿ ವಿಧಾನಸೌಧ (ತಾಲ್ಲೂಕು ಆಡಳಿತ ಭವನ) ವನ್ನು 2013ರಲ್ಲಿ ಹಾಲಿ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಕಂದಾಯ ಸಚಿವರಾಗಿದ್ದ ಅವಧಿಯಲ್ಲಿ ನಿರ್ಮಾಣ ಮಾಡಲಾಗಿತ್ತು.

ADVERTISEMENT


ಆದರೆ ಸುಸಜ್ಜಿತವಾಗಿ ಎಲ್ಲ ಇಲಾಖೆಗಳನ್ನು ಒಳಗೊಂಡಂತೆ ಇರುವ ಕಟ್ಟಡದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳೇ ಇಲ್ಲದಿರುವುದು, ನಾಚಿಕೆಗೇಡಿನ ಸಂಗತಿಯಾಗಿದೆ. ಗಬ್ಬೆದ್ದು ನಾರುವ ಶೌಚಾಲಯ, ಕುಡಿಯುವ ನೀರಿಲ್ಲದೇ ಪರದಾಡುವ ಸಾರ್ವಜನಿಕರು, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದೆ ನಿಂತಲ್ಲೇ ನಿಂತು, ನೆಲದ ಮೇಲೆ ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಆದರೆ ಕಟ್ಟಡ ಉದ್ಘಾಟನೆಯಾಗಿ ಇಲ್ಲಿಯ ತನಕ ಲಿಫ್ಟ್ ಸೌಲಭ್ಯವಿಲ್ಲದೇ ವಯಸ್ಸಾದ ವೃದ್ಧರು ಮೆಟ್ಟಿಲುಗಳನ್ನು ಹತ್ತಿಳಿಯಲು ಹರಸಾಹಸ ಪಡುವಂತಾಗಿದೆ. ಎಸಿ ರೂಮಲ್ಲಿ ಕುಳಿತು ಆಡಳಿತ ನಡೆಸುವ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕು ಮಿನಿ ವಿಧಾನಸೌಧಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಹಾಲಿ ಶಾಸಕ ದರ್ಶನ್ ಧ್ರುವನಾರಾಯಣ್ ಸರ್ಜರಿ ಮಾಡಬೇಕಿದೆ. ಉಪ ನೋಂದಣಾಧಿಕಾರಿಗಳ ಕಚೇರಿ ಎರಡನೇ ಮಹಡಿಯಲ್ಲಿದೆ, ಆಸ್ತಿ ನೋಂದಣಿ ಮಾಡಲು ಹೆಚ್ಚು ಜನರು ಬರುತ್ತಾರೆ. ಆಸ್ತಿ ಬದಲಾವಣೆಗೆ ಹೆಚ್ಚು ವಯಸ್ಸಾದ ಮತ್ತು ಅಂಗವಿಕಲರು ಬರುತ್ತಾರೆ. ಆದರೆ ಲಿಫ್ಟ್ ಇದ್ದರೂ ಉಪಯೋಗಕ್ಕೆ ಬರುತ್ತಿಲ್ಲ. ಇಲ್ಲಿವರೆಗೂ ಯಾವುದೇ ತಹಶೀಲ್ದಾರ್ ರವರು ಕ್ರಮವಹಿಸಿಲ್ಲ. ವಯಸ್ಸಾದ ನಾಗರಿಕರು ಮೆಟ್ಟಿಲನ್ನು ಮೇಲತ್ತಿ ಮತ್ತು ಇಳಿಯುವ ಸಂದರ್ಭದಲ್ಲಿ ಜಾರಿ ಬಿದ್ದರೆ ಯಾರು ಜವಾಬ್ದಾರರು?


ಈ ತಾಲ್ಲೂಕ ಕಛೇರಿಯಲ್ಲಿ ಲಿಫ್ಟ್ ಇದ್ದರೂ ಇಲ್ಲದಂತಾಗಿದೆ. ಹಿರಿಯ ನಾಗರಿಕರು ಕೂರಲು ಆಸನ ವ್ಯವಸ್ಥೆ ಇಲ್ಲ. ಕುಡಿಯಲು ನೀರಿನ ವ್ಯವಸ್ಥೆ ಸರಿ ಇಲ್ಲ. ಶಾಸಕರು ಈ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ ಮತ್ತು ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿಬೇಕಾಗಿದೆ ಎಂದು ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ಹಾಗು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಪುಟ್ಟಸ್ವಾಮಿ ಒತ್ತಾಯ

Tags: Darshan Dhruva Narayanmini vidhana soudhaNanjanaguduSrinivas Prasad
Previous Post

ರಂಗಾಯಣಕ್ಕೆ ರಂಗ ಸ್ಪರ್ಶ ನೀಡಬೇಕಿದೆ

Next Post

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇಲ್ಲ..!

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಗೃಹಜೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ 76 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇಲ್ಲ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada