• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ರಾಮ ಅಂತಃಕರಣ ಸ್ವರೂಪಿ, ಬಿಜೆಪಿಗೆ ಚುನಾವಣಾ ಸರಕು : ಬಿಜೆಪಿ ಟೀಕೆಗೆ ಸಿದ್ದು ಖಡರ್ ರಿಪ್ಲೆ..!

Any Mind by Any Mind
March 30, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ನನ್ನ ರಾಮ ಅಂತಃಕರಣ ಸ್ವರೂಪಿ, ಬಿಜೆಪಿಗೆ ಚುನಾವಣಾ ಸರಕು : ಬಿಜೆಪಿ ಟೀಕೆಗೆ ಸಿದ್ದು ಖಡರ್ ರಿಪ್ಲೆ..!
Share on WhatsAppShare on FacebookShare on Telegram

ಬೆಂಗಳೂರು:ಮಾ.30: ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಹೀಗೆ ಹೇಳಲೂ ಕಾರಣವಿದೆ. ಶ್ರೀರಾಮ ನವಮಿಯ ಹಿನ್ನೆಲೆಯಲ್ಲಿ ಅವರು ಇಂದು ಬೆಳಗ್ಗೆ ಮಾಡಿದ್ದ ಶುಭಾಶಯದ ಟ್ವೀಟ್‌ಅನ್ನು ಬಿಜೆಪಿ ಗೇಲಿ ಮಾಡಿತ್ತು. ಅದಕ್ಕೆ, ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ADVERTISEMENT

ಪ್ರಭು ಶ್ರೀ ರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ..
ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರದ ವಿರುದ್ಧವೇ ಸಮರ ಸಾರಿದ…
ಪ್ರಭು ಶ್ರೀ ರಾಮಚಂದ್ರನ ರಾಮರಾಜ್ಯವನ್ನು ಟೀಕಿಸುವ…
ಅಲ್ಪರ ಗುಂಪಿನ ‘Poster Boy’ @siddaramaiahನವರು

ಇಂದು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ. https://t.co/dhFql6OY7k

— BJP Karnataka (@BJP4Karnataka) March 30, 2023

ಶುಭ ಕೋರಿದ್ದ ಸಿದ್ದರಾಮಯ್ಯ
‘ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು’ ಎಂದು ಸಿದ್ದರಾಮಯ್ಯ ತಮ್ಮ ಪೋಸ್ಟರ್‌ನಲ್ಲಿ ಬರೆದಿದ್ದರು.

ಸಿದ್ದು ಟ್ವೀಟ್‌ ಗೆ ವ್ಯಂಗ್ಯವಾಡಿದ್ದ ಬಿಜೆಪಿ

ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು.

ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು.

ನನ್ನ ರಾಮ ಅಂತಃಕರಣ ಸ್ವರೂಪಿ,
ನಿಮಗೆ ರಾಮ ಚುನಾವಣಾ ಸರಕು.

ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ @BJP4Karnataka . pic.twitter.com/Au0QxsGBpM

— Siddaramaiah (@siddaramaiah) March 30, 2023

ಸಿದ್ದರಾಮಯ್ಯ ಅವರ ಟ್ವೀಟ್‌ ರೀಟ್ವೀಟ್‌ ಮಾಡಿಕೊಂಡಿದ್ದ ಬಿಜೆಪಿ, ‘ಪ್ರಭು ರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ.. ಭವ್ಯ ಮಂದಿರದ ವಿರುದ್ಧವೇ ಸಮರ ಸಾರಿದ… ರಾಮರಾಜ್ಯವನ್ನು ಟೀಕಿಸುವ… ‘ಅಲ್ಪರ’ ಗುಂಪಿನ ‘Poster Boy’ ಸಿದ್ದರಾಮಯ್ಯ ಅವರು ಇಂದು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ‘ ಎಂದು ಕುಹಕವಾಡಿತ್ತು.

ಬಿಜೆಪಿ ಟ್ವೀಟ್‌ ಗೆ ಸಿದ್ದರಾಮಯ್ಯ ತಿರುಗೇಟು

ಬಿಜೆಪಿಯ ಟ್ವೀಟ್‌ಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು. ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು (ಬಿಜೆಪಿ). ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ’ ಎಂದು ಟ್ವೀಟ್‌ ಮಾಡಿದ್ದಾರೆ.

Tags: BJPBJP GovernmentbjpkarnatakabjpvscongressCongress PartyJai SriramasiddaramaiahSiddaramaihaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಂದಿನಿ ಮೊಸರು ಪ್ಯಾಕೆಟ್‌ ಮೇಲೆ ‘ದಹಿ’ ಮುದ್ರಣ ಆದೇಶ ಹಿಂಪಡೆದ FSSAI.. ಕನ್ನಡಿಗರು ಟೀಕೆ ಬೆನ್ನಲ್ಲೇ ನಿರ್ಧಾರ..!

Next Post

ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada