• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನರೇಂದ್ರ ಮೋದಿ ಅವರೇ ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸನ್ಸ್ ಕೊಡುವುದಲ್ಲ : ಸಿದ್ದರಾಮಯ್ಯ

Any Mind by Any Mind
April 9, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ನರೇಂದ್ರ ಮೋದಿ ಅವರೇ ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸನ್ಸ್ ಕೊಡುವುದಲ್ಲ :  ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು :ಏ.೦9: ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಲು ಕನ್ನಡಿಗರು ಕಟ್ಟಿ ಬೆಳೆಸಿರುವ, ರಾಜ್ಯದ ಗ್ರಾಮೀಣ ಜನರ ಜೀವನಾಧಾರದಂತಿರುವ ಕೆಎಂಎಫ್ ಅನ್ನು ಮುಳಗಿಸಲು ಹೊರಟಿರುವ ಬಿಜೆಪಿ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ, ಈ ಬಗ್ಗೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿ, ರಾಜ್ಯದ ಮಾರುಕಟ್ಟೆಯಿಂದ ಗೌರವಯುತವಾಗಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ, ಪರಿಣಾಮ ನೆಟ್ಟಗಾಗದು..!

ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು, ಬಂದರು, ಏರ್ ಪೋರ್ಟ್ ನುಂಗಿದ್ದ ಅದಾನಿ ಗುಜರಾತ್ ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್ ನದ್ದು. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ? ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ, ಪರಿಣಾಮ ನೆಟ್ಟಗಾಗದು..!

ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು? ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ. ಗುಜರಾತ್ ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ? ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ?

ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿ ಜೀ? ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ.ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು.
ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ. ನಿಮ್ಮದೇನು?

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್ ಶಾ ಕೂಡಿ ಕೆಎಂಎಫ್ ವಿರುದ್ಧ ಮಾಡಿರುವ ಷಡ್ಯಂತ್ರವೇ? ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ. ಇದೇನಾ ನಿಮ್ಮ ರೈತರ ಆದಾಯ ದುಪ್ಟಟ್ಟುಗೊಳಿಸುವ ಯೋಜನೆ?

ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ? ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಬರ್ವಾಲ್‌ಗಳು, ಬಿಂದ್ರಾಗಳು, ಜೈನ್‌ಗಳು, ಶರ್ಮಾಗಳ ಬೀಫ್ ರಫ್ತು ಪ್ರಮಾಣ ಸಾವಿರಾರು ಕೋಟಿಗಳಿಗೆ ಏರಿಕೆಯಾಗಿರುವುದಾಗಿ ವರದಿಗಳಿವೆ. ಇವರ ಮೇಲಿರುವ ಕೃಪಕಟಾಕ್ಷ ಯಾರದ್ದು?

ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1,200 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಿ ಅನ್ಯಾಯ ಮಾಡಿದೆ. ಕಳೆದ 5 ವರ್ಷಗಳಲ್ಲಿ ಪಶು ಆಹಾರದ ಬೆಲೆಗಳು ಮೂರು ಪಟ್ಟು ಹೆಚ್ಚಾಗಿವೆ. 2017-18ರಲ್ಲಿ 49 ಕೆ.ಜಿ ಬೂಸಾದ ಬೆಲೆ 450 ರೂ. ಇದ್ದದ್ದು ಈಗ 1,350 ರೂ.ಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ.ಗಳಿಂದ 1,500 ಕ್ಕೇ ಏರಿದೆ. ಏನಿದು?

ರಾಜ್ಯದ ಬಿಜೆಪಿ ಸರ್ಕಾರ ಸರ್ಕಾರಿ ಕಾವಲು ಜಮೀನುಗಳನ್ನು, ಡಿನೋಟಿಫೈ ಮಾಡಿ ಉಳ್ಳವರಿಗೆ, ಆರ್‌ಎಸ್‌ಎಸ್ ನವರಿಗೆ, ಬಂಡವಾಳಿಗರಿಗೆ ಹಂಚಲು ಪ್ರಾರಂಭಿಸಿದೆ. ಟಿಪ್ಪುಸುಲ್ತಾನನ ದೂರದೃಷ್ಟಿಯ ಫಲವಾದ ಲಕ್ಷಾಂತರ ಎಕರೆ ವಿಸ್ತೀರ್ಣದ ಅಮೃತ್ ಮಹಲ್ ಕಾವಲು ಪ್ರದೇಶ ಮಾಯವಾಗುತ್ತಿರುವುದು ಯಾರಿಂದ?
ಆರ್‌ಎಸ್‌ಎಸ್ ಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡಲಾಗುತ್ತಿದೆ. ನಮ್ಮ ರೈತರ ಜಾನುವಾರುಗಳಿಗೆ ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು.

Tags: 2023 election2023 Election ResultadaniAdani GroupamithshahamulAmulyaassembly electionBJPBJP GovernmentbjpkarnatakaBOMMAIBSYCMCmIbrahimCongress PartyctraviDKShivakumarElection Commissionelection resultFarmers protestgiving license to sell beefGobhaktiGujarathHDDHDKJanasankalpa YatreJDSKannadaKannadigasKarnataka ElectionKarnataka PoliticskarnatakaelectionKMFkumaraswamylatestnewsModiNalin Kumar KateelNandini KMFNewsPancharatna YatrePMModiPratidhvaniRSSsiddaramaiahState ElectionvijayabankVijayasankalpaನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ.. ಶನಿವಾರದ ಮುಹೂರ್ತ ಮಿಸ್​..!

Next Post

ಮಾಲೂರಿನಲ್ಲಿ ಈ ಬಾರಿ ಕಾಂಗ್ರೆಸ್​ ಇತಿಹಾಸ ಬರೆಯುತ್ತೆ : ಶಾಸಕ ಕೆ.ವೈ ನಂಜೇಗೌಡ ವಿಶ್ವಾಸ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ಮಾಲೂರಿನಲ್ಲಿ ಈ ಬಾರಿ ಕಾಂಗ್ರೆಸ್​ ಇತಿಹಾಸ ಬರೆಯುತ್ತೆ : ಶಾಸಕ ಕೆ.ವೈ ನಂಜೇಗೌಡ ವಿಶ್ವಾಸ

ಮಾಲೂರಿನಲ್ಲಿ ಈ ಬಾರಿ ಕಾಂಗ್ರೆಸ್​ ಇತಿಹಾಸ ಬರೆಯುತ್ತೆ : ಶಾಸಕ ಕೆ.ವೈ ನಂಜೇಗೌಡ ವಿಶ್ವಾಸ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada