ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿರುವ ಅವರು, 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತ್ರ, ಮುಂದಿನ ಹೊಸ ಸರ್ಕಾರ ರಚನೆಯಾಗುವವರೆಗೂ ನೀವು ಹಾಗೂ ನಿಮ್ಮ ಸಚಿವ ಸಂಪುಟ ಮುಂದುವರೆಯಲಿ ಎಂದು ಮನವಿ ಮಾಡಿದ್ದಾರೆ.