• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಟ್ಲರ್ ಸಿದ್ಧಾಂತದಲ್ಲಿ ಬಿಜೆಪಿಗೆ ನಂಬಿಕೆ.. PM ಮೋದಿ ಸರ್ವಾಧಿಕಾರಿ : ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಿಟ್ಲರ್ ಸಿದ್ಧಾಂತದಲ್ಲಿ ಬಿಜೆಪಿಗೆ ನಂಬಿಕೆ.. PM ಮೋದಿ ಸರ್ವಾಧಿಕಾರಿ : ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
Share on WhatsAppShare on FacebookShare on Telegram

ADVERTISEMENT

ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಕೊಳ್ಳೇಗಾಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ಪರ ಪ್ರಜಾಧ್ವನಿ -02 ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಲೇಬೇಕು. ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆ ಮತ ಹಾಕಬೇಕು. ಮುಸಲೋನಿ, ಹಿಟ್ಲರ್ ಸಿದ್ಧಾಂತದಲ್ಲಿ ಬಿಜೆಪಿ ನಂಬಿಕೆ ಇಟ್ಟಿದ್ದಾರೆ. ಈ ದೇಶದಲ್ಲಿ ಸಂವಿಧಾನ ಜಾರಿಯಾದಾಗ ಅದನ್ನು ವಿರೋಧಿಸಿದ್ದು ಆರ್.ಎಸ್.ಎಸ್. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ 43 % ಮತಗಳನ್ನು ಪಡೆದು 136 ಸ್ಥಾನಗಳನ್ನು ಪಡೆದಿದ್ದೇವೆ. ಅಧಿಕಾರದಲ್ಲಿದ್ದ ವಿರೋಧ ಪಕ್ಷ ಕೇವಲ 66 ಸ್ಥಾನಗಳನ್ನು ಪಡೆಯಿತು. ಜಾತ್ಯಾತೀತ ಎಂದು ಹೇಳಿಕೊಳ್ಳುವ ಪಕ್ಷ 19 ಸ್ಥಾನಗಳನ್ನು ಪಡೆಯಿತು. ಈಗ ಅವರಿಬ್ಬರಿಗೂ ಈ ಚುನಾವಣೆಯಲ್ಲಿ ಭಯ ಬಂದಿದೆ. ಒಟ್ಟುಗೂಡಿ ಕಾಂಗ್ರೆಸ್ ಪಕ್ಷವನ್ನು ಎದುರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಸಿದ್ಧಾಂತ, ಕಾರ್ಯಕ್ರಮ ಇಲ್ಲದೇ, ಕಾಂಗ್ರೆಸ್ ಸೋಲಿಸಬೇಕು ಎನ್ನುವುದೊಂದೇ ಗುರಿ. ¨ಬಡವರು, ರೈತರು, ದಲಿತರು, ಹಿಂದುಳಿದವರ, ಅಲ್ಪಸಂಖ್ಯಾತರ ಪರವಾಗಿ ಏನು ಮಾಡಿದ್ದೇವೆ ಎಂದು ಹೇಳಿಕೊಳ್ಳಲು ಅವರು ಯಾವ ಸಾಧನೆಯನ್ನೂ ಮಾಡಿಲ್ಲ.

ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಒಂದು ವರ್ಷ ಮುಖ್ಯಮಂತ್ರಿಯಾಗಿದ್ದರು. ನಂತರ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. 5 ವರ್ಷಗಳ ಅವಧಿಯಲ್ಲಿ ಏನೂ ಕೆಲಸ ಮಾಡಿಲ್ಲ. ಅವರು ಕೇಳುತ್ತಿರುವುದು ಮೋದಿಗೆ ಮತ ಹಾಕಿ ಎಂದು ಕೆಲಸದ ಆಧಾರದ ಮೇಲೆ ಅಲ್ಲ. ಇವರ್ಯಾರಿಗೂ ಮತ ಕೇಳಲು ಮುಖವೂ ಇಲ್ಲ, ನೈತಿಕತೆಯೂ ಇಲ್ಲ ಎಂದು ಕಿಡಿಕಾರಿದರು.

2014 ರಲ್ಲಿ ಡೀಸೆಲ್ ಬೆಲೆ ಒಂದು ಲೀಟರ್‍ ಗೆ 49 ರೂ.ಗಳಿತ್ತು ಇಂದು 95 ರೂ.ಆಗಿದೆ. ಪೆಟ್ರೋಲ್ ಬೆಲೆ 71 ರೂ.ಗಳಿತ್ತು ಈಗ 110 ರೂ.ಗಳಾಗಿದೆ. ಸಿಲಿಂಡರ್ ಬೆಲೆ 410 ರೂ ಇದ್ದರೆ ಈಗ 950 ರೂ.ಗಳಾಗಿದೆ. ಇಡೀ ದೇಶದ ಜನರಿಗೆ ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಒಳ್ಳೇ ದಿನಗಳು ಬಂದವೇ ಎಂದು ಪ್ರಶ್ನಿಸಿದರು. ಮೇಕ್ ಇನ್ ಇಂಡಿಯಾ ಎಂದರು. ಇಂದಿನವರೆಗೆ ಮೇಕ್ ಇನ್ ಇಂಡಿಯಾ ಆಗಲಿಲ್ಲ. ಇಂದಿಗೂ ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಲೇ ಇದ್ದಾರೆ. ನರೇಂದ್ರ ಮೋದಿಯವರು ಪ್ರಧಾನಮಂತ್ರಿಗಳಾಗಿ ಸಂಪೂರ್ಣ ವಿಫಲರಾಗಿದ್ದಾರೆ. ಎನ್‍ಡಿಎ ಸರ್ಕಾರದ ವೈಫಲ್ಯಗಳಿವು ಎಂದರು

Tags: BJPಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಲ್ಲಿ ಬಾಂಬ್‌ ಇಟ್ಟವರು ಪಶ್ಚಿಮ ಬಂಗಾಳದಲ್ಲಿ ಬಂಧನ..!

Next Post

ಬೆಂಗಳೂರು ಬಾಂಬರ್‌ ಸಿಕ್ಕಿಬಿದ್ದಿದ್ದು ಹೇಗೆ..? NIAಗೆ ಸಿಕ್ಕ ಸುಳಿವು ಏನು..?

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಬೆಂಗಳೂರು ಬಾಂಬರ್‌ ಸಿಕ್ಕಿಬಿದ್ದಿದ್ದು ಹೇಗೆ..? NIAಗೆ ಸಿಕ್ಕ ಸುಳಿವು ಏನು..?

ಬೆಂಗಳೂರು ಬಾಂಬರ್‌ ಸಿಕ್ಕಿಬಿದ್ದಿದ್ದು ಹೇಗೆ..? NIAಗೆ ಸಿಕ್ಕ ಸುಳಿವು ಏನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada