• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರೀಯ ಇಂಧನ ಸಂರಕ್ಷಣೆ 2024′: ಕರ್ನಾಟಕಕ್ಕೆ 2ನೇ ಸ್ಥಾನ

ಪ್ರತಿಧ್ವನಿ by ಪ್ರತಿಧ್ವನಿ
December 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು.

ADVERTISEMENT

ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ.ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿ ಎರಡನೇ ಸ್ಥಾನ ದೊರೆತಿದೆ.

ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್‌, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ.

ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌:

ಇಂಧನ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ರಾಷ್ಟ್ರಮಟ್ಟದಲ್ಲಿ ಎರಡನೇ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನದ ಉಪಕ್ರಮಗಳಿಗೆ ನಮ್ಮ ಸರ್ಕಾರ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು,” ಎಂದು ಸಚಿವರು ತಿಳಿಸಿದ್ದಾರೆ.

“ಇಂಧನ ದಕ್ಷತೆಯ ನೀತಿಗಳ ಅನುಷ್ಠಾನದಲ್ಲಿ ರಾಜ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟನಿಲ್ಲಿ ಸರಿಯಾದ ಪದ್ಧತಿಗಳನ್ನು ಅನುಸರಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ರಾಜ್ಯ ಬದ್ಧವಾಗಿದೆ”,” ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.

ಪ್ರಶಸ್ತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, “ಇಂಧನ ಸಂರಕ್ಷಣೆಗೆ ಬದ್ಧವಾಗಿರುವ ಕ್ರೆಡಲ್‌ಗೆ ಈ ಮನ್ನಣೆ ದೊರೆತಿರುವುದು ಹೆಮ್ಮೆಯ ವಿಷಯ. ಮುಂದಿನ ಐದು ವರ್ಷಗಳಲ್ಲಿ 5 ಪ್ರಮುಖ ವಲಯಗಳಲ್ಲಿ ಸರಿಸುಮಾರು 744 ಮಿಲಿಯನ್‌ ಯೂನಿಟ್‌ ಇಂಧನ ಉಳಿತಾಯದ ಗುರಿಯನ್ನು ಸಾಧಿಸಲು ಸರ್ಕಾರಿ ಮತ್ತು ಖಾಸಗಿ ಪಾಲುದಾರರೊಂದಿಗೆ ಕೆಲಸ ಮಾಡಲಿದ್ದೇವೆ,” ಎಂದರು.

ಕರ್ನಾಟಕವು ಹಿಂದಿನ ಮೂರು ವರ್ಷಗಳಿಂದ, ಅಂದರೆ ಎಸ್‌.ಇ.ಇ.ಐ 2020 ಮತ್ತು ಎಸ್‌.ಇ.ಇ.ಐ 2021-2022, 2023ರ ಅವಧಿಯಲ್ಲಿ “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿತ್ತು. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರಲ್ಲಿ ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿತ್ತು. ಈ ಬಾರಿ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.

Tags: Development Corporation Achievement Award.Energy Minister KJ GeorgeKarnataka ranks 2ndKarnataka Renewable EnergyNational Energy Conservation 2024Union Ministry of Energy
Previous Post

ಗೃಹಲಕ್ಷ್ಮೀ” ಹಣದಿಂದ ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ

Next Post

ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ – ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ – ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ - ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada