• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Bengaluru: ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ

ಪ್ರತಿಧ್ವನಿ by ಪ್ರತಿಧ್ವನಿ
December 19, 2025
in Top Story, ಕರ್ನಾಟಕ, ರಾಜಕೀಯ
0
Bengaluru: ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ
Share on WhatsAppShare on FacebookShare on Telegram

ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಇಂಧನ ಸಂರಕ್ಷಣಾ ದಿನಾಚರಣೆ ಆಯೋಜಿಸಲಾಗಿತ್ತು.

ADVERTISEMENT

ಕೇಂದ್ರದ ಇಂಧನ ಸಚಿವಾಲಯದ ‘ಇಂಧನ ದಕ್ಷತೆಯ ಬ್ಯೂರೋ’ (ಬಿಇಇ), ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸಾರುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಇಂಧನ ಇಲಾಖೆ ವತಿಯಿಂದ ಸಪ್ತಾಹದ ಆಚರಣೆಯನ್ನು ಕಡ್ಡಾಯಗೊಳಿಸಿದೆ. ಅದರ ಭಾಗವಾಗಿ, ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ಕ್ರೆಡಲ್‌ ಆಯೋಜಿಸಿದ್ದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆಯಲ್ಲಿ ಹಮ್ಮಿಕೊಂಡಿದ್ದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ನಗರದ ವಿವಿಧ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇಂಧನ ಸಂರಕ್ಷಣಾ ಸಪ್ತಾಹದ ಸಂದರ್ಭದಲ್ಲಿ ಇಂಧನ ಬಳಕೆಯ ಪ್ರಮಾಣ ತಗ್ಗಿಸುವುದು, ಇಂಧನದ ದಕ್ಷ ಬಳಕೆಯನ್ನು ಉತ್ತೇಜಿಸುವುದು ಮತ್ತು ರಾಜ್ಯದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಬೆಳೆಸುವ ಬಗ್ಗೆ ರಾಜ್ಯದ ನೋಡಲ್‌ ಏಜೆನ್ಸಿಯಾದ ಕ್ರೆಡಲ್‌ ಜಾಗೃತಿ ಮೂಡಿಸುವುದು.

Huli Kartik Exclusive Podcast : ದರ್ಶನ್ ಸರ್ ಎಷ್ಟು ಜನಕ್ಕೆ ಊಟ ಹಾಕಿದ್ದಾರೆ ಅಂತ ಯಾರಿಗೂ ಗೊತ್ತಿಲ್ಲ.?

ಚಿತ್ರ ಸ್ಪರ್ಧೆಯಲ್ಲಿ ತೀರ್ಪುಗಾರರು ಆಯ್ಕೆ ಮಾಡಿದ ಅತ್ಯುತ್ತಮ ಚಿತ್ರಕ್ಕೆ ಮೊದಲ ಬಹುಮಾನವಾಗಿ 3,000 ಎರಡನೇ ಬಹುಮಾನ 2,000, ಮೂರನೇ ಬಹುಮಾನವಾಗಿ 1,500 ಸಾವಿರ ಹಾಗೂ 11 ಸಮಾಧಾನಕರ ಚಿತ್ರಗಳಿಗೆ ತಲಾ 500 ರೂ. ನೀಡಲಾಯಿತು. ಇಂಧನ ದಕ್ಷತೆಗಾಗಿ ಎಲ್‌ಇಡಿ ಬಲ್ಬ್‌ ಗಳನ್ನು ಬಳಸಬೇಕು ಎಂಬ ಸಂದೇಶ ಸಾರಲು ವಿದ್ಯಾರ್ಥಿಗಳಿಗೆ ಬಲ್ಬ್‌ ವಿತರಿಸಲಾಯಿತು.

ಚಿತ್ರ ಬಿಡಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಕ್ರೆಡಲ್‌ನ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ಅಮರನಾಥ್‌, ʼಇಂಧನ ಸಂರಕ್ಷಣೆ ಹಾಗೂ ಇಂಧನ ದಕ್ಷತೆಯ ಪಾಠ ಸಣ್ಣವಯಸ್ಸಿನಿಂದಲೇ ಆರಂಭವಾಗಬೇಕು. ಬಲ್ಬ್‌, ಫ್ಯಾನ್‌ ಮುಂತಾದ ವಿದ್ಯುತ್‌ ಉಪಕರಣನ್ನು ಅಗತ್ಯ ಇರುವಡೆ ಮಾತ್ರ ಬಳಸಬೇಕು. ಬಿಎಸ್‌ಇ 5 ಸ್ಟಾರ್‌ ರೇಟೆಡ್‌ನ ಎಸಿ, ಫ್ರಿಡ್ಜ್‌, ಫ್ಯಾನ್‌ ಹಾಗೂ ಇತರ ವಿದ್ಯುತ್‌ ಉಪಕರಣಗಳನ್ನು ಬಳಸಿದಾಗ ವಿದ್ಯುತ್‌ ಉಳಿತಾಯ ಸಾಧ್ಯ. ಮನೆಯಲ್ಲಿ ಮಕ್ಕಳು ಜಾಗೃತರಾದರೆ, ಮನೆಯ ಎಲ್ಲರಿಗೂ ಅರಿವು ಮೂಡಿಸಿದಂತೆ ಆಗುವುದುʼ ಎಂದರು.

ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ʼಡಿಸೆಂಬರ್ 14 ರಿಂದ 20 ರವರೆಗೆ ಇಂಧನ ಸಂರಕ್ಷಣೆ ಸಪ್ತಾಹ ಆಚರಿಸಲಾಗುತ್ತದೆ. ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆಯ ಕುರಿತು ಅರಿವು ಮೂಡಿಸುವ ಅಭಿಯಾನ ಇದಾಗಿದ್ದು, ಶಾಲಾ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಂಗಳೂರು ಅಲ್ಲದೇ, ಕ್ರೆಡಲ್‌ನ ಕಲಬುರಗಿ, ಹುಬ್ಬಳ್ಳಿಯ ಕಚೇರಿಗಳಲ್ಲೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಸ್ಪರ್ಧೆಗಳು ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗಿದೆ. ಈ ಮೂಲಕ ಭವಿಷ್ಯದ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು ಪ್ರೇರೇಪಿಸಲಾಗುತ್ತದೆʼ ಎಂದರು.

ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕರು ಕೆ.ಪಿ. ರುದ್ರಪ್ಪಯ್ಯ ಮಾತನಾಡಿ, ʼಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ನೇತೃತ್ವ ಹಾಗೂ ಕ್ರೆಡಲ್‌ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಇಂಧನ ಸಂರಕ್ಷಣಾ ದಿನ ಆಚರಿಸಲಾಗುತ್ತಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರ ಪ್ರೋತ್ಸಾಹದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಚಿತ್ರ ಬಿಡಿಸುವ ಸ್ಪರ್ಧೆಯ ಅತ್ಯುತ್ತಮ ಚಿತ್ರವನ್ನು ಇಂಧನ ಸಚಿವರಿಗೆ ಕೊಡುಗೆಯಾಗಿ ನೀಡಲಾಗುತ್ತದೆʼ ಎಂದರು.

B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?  #pratidhvani

 

Tags: bengaluruEnergy Development CorporationKarnatakaKREDL
Previous Post

ನನ್ನ ಹಾಗೂ ಸಿಎಂ ನಡುವೆ ಒಪ್ಪಂದವಾಗಿದೆ: ಸತ್ಯ ಬಾಯ್ಬಿಟ್ಟ ಡಿ.ಕೆ ಶಿವಕುಮಾರ್

Next Post

ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ

ಉತ್ತರ ಕರ್ನಾಟಕದ ಚರ್ಚೆ ಮೇಲೆ ಮುಖ್ಯಮಂತ್ರಿಗಳ ಉತ್ತರ

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada