• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿಸೆಂಬರ್ 14–20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹ

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಇಂಧನ ದಕ್ಷತೆ ಮತ್ತು ಸಂರಕ್ಷಣೆಗೆ ರಾಜ್ಯ ನಿಯೋಜಿತ ಸಂಸ್ಥೆಆಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಇದೇ ಡಿಸೆಂಬರ್ 14 ರಿಂದ 20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹವನ್ನು ಆಚರಿಸಲಿದೆ.

ADVERTISEMENT
Eco light bulb with green leaf icon vector. Natural energy icon isolated on a white background. Energy Conservation Day Poster, December 14. Important day

ಪ್ರತಿ ವರ್ಷ ಡಿಸೆಂಬರ್ 14 ರಂದು ದೇಶಾದ್ಯಂತ ಆಚರಿಸುವ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ’ ಸಂದರ್ಭದಲ್ಲಿ ಇಂಧನ ದಕ್ಷತೆ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ರಾಜ್ಯದ ಬದ್ಧತೆಯನ್ನು ಒತ್ತಿ ಹೇಳಲು ಈ ಸಪ್ತಾಹದ ಆಚರಣೆ ಮಾಡಲಾಗುತ್ತಿದೆ.

ಕೇಂದ್ರದ ಇಂಧನ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುವ ‘ಇಂಧನ ದಕ್ಷತೆಯ ಬ್ಯೂರೋ’ (ಬಿಇಇ), ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸಾರುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಇಂಧನ ಇಲಾಖೆ ವತಿಯಿಂದ ಸಪ್ತಾಹದ ಆಚರಣೆಯನ್ನು ಕಡ್ಡಾಯಗೊಳಿಸಿದೆ.ಪರಿಸರ ಹಾನಿ ಮತ್ತು ಹವಾಮಾನ ಬದಲಾವಣೆಯ ತುರ್ತು ಸವಾಲುಗಳನ್ನು ಎದುರಿಸುವ ದೇಶದ ಪ್ರಮುಖ ಧ್ಯೇಯದ ಭಾಗ ಈ ಆಚರಣೆ.

Yatnal Vs Zameer In Session: ಜಮೀರ್‌ನ ಕೆಕ್ಕರಿಸಿ ನೋಡಿ ಸಿಟ್ಟು ಹೊರಹಾಕಿದ ಯತ್ನಾಳ್‌ #pratidhvani

ಇಂಧನ ಸಂರಕ್ಷಣಾ ಸಪ್ತಾಹದ ಸಂದರ್ಭದಲ್ಲಿ ಇಂಧನ ಬಳಕೆಯ ಪ್ರಮಾಣ ತಗ್ಗಿಸುವುದು, ಇಂಧನದ ದಕ್ಷ ಬಳಕೆಯನ್ನು ಉತ್ತೇಜಿಸುವುದು ಮತ್ತು ರಾಜ್ಯದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಬೆಳೆಸುವ ಬಗ್ಗೆ ಕ್ರೆಡಲ್‌ ಜಾಗೃತಿ ಮೂಡಿಸಲಿದೆ.

ಇಂಧನ ಸಂರಕ್ಷಣಾ ಸಪ್ತಾಹದ ಕುರಿತು ಮಾತನಾಡಿರುವ ಇಂಧನ ಸಚಿವ ಶ್ರೀ ಕೆ.ಜೆ. ಜಾರ್ಜ್, “ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದಲ್ಲಿ ನಮ್ಮ ಇಲಾಖೆ ವತಿಯಿಂದ ವಾಕಥಾನ್‌ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಸ್ಪರ್ಧೆಗಳು ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಪ್ರಯತ್ನದ ಮೂಲಕ ಭವಿಷ್ಯದ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು ಪ್ರೇರೇಪಿಸಲಾಗುತ್ತದೆ” ಎಂದಿದ್ದಾರೆ.

“ಹವಾಮಾನ ಬದಲಾವಣೆ ಇಂದಿನ ಕಾಲಮಾನದ ಅತ್ಯಂತ ಗಂಭೀರ ಸವಾಲುಗಳಲ್ಲಿ ಒಂದಾಗಿದೆ. ಪರಿಸರ ವ್ಯವಸ್ಥೆ, ಆರ್ಥಿಕತೆ ಮತ್ತು ನಮ್ಮ ಜೀವನೋಪಾಯದ ಮೇಲೆ ಇದು ಪರಿಣಾಮ ಬೀರುವುದರಿಂದ ಇಂಧನ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ಗುರುತರ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖವಾಗಿಸಲು ಈ ಸಪ್ತಾಹವು ಉತ್ತೇಜಿಸುತ್ತದೆ,”ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.

ಹಸಿರುಮನೆ ಅನಿಲ ಹೊರಸೂಸುವಿಕೆ, ಅರಣ್ಯನಾಶ ಮತ್ತು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸಲು ರಾಜ್ಯವ್ಯಾಪಿ ಆಂದೋಲನ ನಡೆಸುವ ಅಗತ್ಯವನ್ನು ಒತ್ತಿ ಹೇಳಿದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಇಂಧನ ಸಂರಕ್ಷಣಾ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಖಾತ್ರಿಗಾಗಿ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳು ಸೂಕ್ತವಾದ ಕ್ರಿಯಾ ಯೋಜನೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.

Tags: BangaloreCongress PartyEnergy Minister Shri K.J.George.from December 14-20Karnataka Renewable Energy Development CorporationNational Energy Conservation Week
Previous Post

ಡಿಜಿಟಲ್‌ ಬಂಧನಗಳೂ ಸೈಬರ್‌ ವಂಚನೆಯ ಜಾಲವೂ

Next Post

ಕೋವಿಡ್‌ ಅಕ್ರಮ.. FIR ದಾಖಲು.. SIT ರಚನೆಗೆ ಸಿದ್ಧತೆ

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಕೋವಿಡ್‌ ಅಕ್ರಮ.. FIR ದಾಖಲು.. SIT ರಚನೆಗೆ ಸಿದ್ಧತೆ

ಕೋವಿಡ್‌ ಅಕ್ರಮ.. FIR ದಾಖಲು.. SIT ರಚನೆಗೆ ಸಿದ್ಧತೆ

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada