• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ – ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 5, 2023
in Top Story, ಇದೀಗ, ಕರ್ನಾಟಕ
0
ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ – ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 5 : ಪೂರ್ವಿಕರಿಗೆ ನಮ್ಮ ಪರಿಸರ ಮತ್ತು ಪ್ರಕೃತಿಯ (environment and nature) ಬಗ್ಗೆ ಇದ್ದ ಕಾಳಜಿ ಅನನ್ಯ. ಒಂದು ಮರ ಕಡಿದರೆ ಮತ್ತೊಂದು ಗಿಡ ನೆಡುತ್ತಿದ್ದರು. ಆದರೆ ಈಗ ಕೇವಲ ಮರ ಕಡಿಯುವುದಾಗಿದೆ. ಇದೇ ನಮ್ಮ ಪೂರ್ವಿಕರಿಗೂ ನಮಗೂ ಇರುವ ವ್ಯತ್ಯಾಸ. ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಇಂದು ವಿಶ್ವ ಪರಿಸರ ದಿನಾಚರಣೆ 2023 (World Environment Day 2023) ಉದ್ಘಾಟಿಸಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ (Environment Award) ಮಾಡಿ ಮಾತನಾಡಿದ ಅವರು,

ADVERTISEMENT

ಪ್ರಕೃತಿಯ ಜೊತೆಗೆ ಮನುಷ್ಯ ಬದುಕಬೇಕು. ಕಾಡು ಚೆನ್ನಾಗಿದ್ದರೆ ಒಳ್ಳೆಯ ಮಳೆ, ಬೆಳೆಯಾಗಿ ಜೀವನ ಸುಗಮವಾಗುತ್ತದೆ. ನಾವು ಪ್ರಕೃತಿಯನ್ನೂ, ಭೂಮಿತಾಯಿಯನ್ನು ಪ್ರೀತಿಸಬೇಕು. ನಾವು ಅದನ್ನು ನಮ್ಮ ಕರ್ತವ್ಯ ಎಂದು ಭಾವಿಸಬೇಕು. ಪರಿಸರ ಉತ್ತಮವಾಗಿದ್ದರೆ, ಆರೋಗ್ಯಕರ ಜೀವನ ಸಾಧ್ಯ ಎಂದರು.

ಪ್ರಕೃತಿ,ಭೂಮಿ ಆರೋಗ್ಯಕರವಾಗಿದ್ದರೆ ಬದುಕು ಹಸನಾಗುತ್ತದೆ :

ಪರಿಸರದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಇಂದು ವಿಶ್ವ ಪರಿಸರ ದಿನಾಚರಣೆಯನ್ನು (World Environment Day 2023) ಆಚರಿಸಲಾಗುತ್ತಿದೆ. ನಮ್ಮ ಪರಿಸರವನ್ನು ಚೊಕ್ಕಟವಾಗಿಡುವಂತಹ ಜಾಗೃತಿ ಎಲ್ಲರಲ್ಲೂ ಮೂಡಬೇಕು. ಪ್ರಕೃತಿ,, ಭೂಮಿ ಆರೋಗ್ಯಕರವಾಗಿದ್ದರೆ ಮಾತ್ರ ನಮ್ಮ ಬದುಕು ಹಸನಾಗಿರುತ್ತದೆ . ಪ್ರಕೃತಿಯ ವಿಕೋಪಕ್ಕೆ ನಾವು ಒಳಗಾಗುತ್ತಿದ್ದೇವೆ. ಪ್ರಕೃತಿಯಲ್ಲಿ ಅನೇಕ ಬದಲಾವಣೆ ಕಾಣುತ್ತಿದ್ದೇವೆ. ಪ್ರಕೃತಿಯಲ್ಲಾಗುವ ಅನಾಹುತಗಳನ್ನು ತಪ್ಪಿಸಬೇಕಿದೆ ಎಂದರು.

ನೈಸರ್ಗಿಕ ಸಂಪನ್ಮೂಲಗಳ ಹಿತಮಿತ ಬಳಕೆ ಅಗತ್ಯ

2016 ರಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಲಾಗಿತ್ತು. ಪ್ಲಾಸ್ಟಿಕ್ ನಿಂದ ಪ್ರಕೃತಿಗೆ ಹಾನಿಯಾಗುತ್ತದೆ. ಕೈಗಾರಿಕೆ ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಬಳಕೆ, ಕಾಡು ಕಡಿಯುವುದು, ನೀರಿನ ಬಳಕೆಯನ್ನು ಪ್ರಕೃತಿಯ ಹಿತದೃಷ್ಟಿಯಿಂದ ಬಳಸುವುದನ್ನು ಕಲಿತರೆ, ನಮಗೆ ಹಾಗೂ ಪ್ರಕೃತಿಗೆ ಒಳಿತು ಎಂದರು.

ಮುಂದಿನ ಪೀಳಿಗೆಗೆ ಮಾರ್ಗದರ್ಶನ

ಮಕ್ಕಳಲ್ಲಿ ಪ್ರಕೃತಿಯನ್ನು ಕಾಪಾಡುವ ಮನೋಭಾವ ಬಂದರೆ ಅದು ಮುಂದಿನ ಪೀಳಿಗೆಗೆ ಅನುಕೂಲವಾಗುತ್ತದೆ. ನಾವು ಮಾಡುವುದನ್ನೇ ಮಕ್ಕಳು ಕಲಿಯುತ್ತಾರೆ. ಎಳೇ ಮನಸ್ಸಿನ ಮೇಲೆ ಒಳ್ಳೆಯದರ ಪರಿಣಾಮವನ್ನು ಉಂಟು ಮಾಡಬೇಕು. ಒಳ್ಳೆಯದನ್ನು ಅನುಸರಿಸಿ ಜೀವನ ನಡೆಸಿದರೆ ಮುಂದಿನ ಪೀಳಿಗೆಗೆ ಅನುಕೂಲ ಹಾಗೂ ಮಾರ್ಗದರ್ಶನವಾಗುತ್ತದೆ ಎಂದರು. ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ದಕ್ಷಿಣ ವಲಯದಿಂದ ಮಂಜುನಾಥ್ ಹೆಚ್, ಮಲೆನಾಡು ಮತ್ತು ಕರಾವಳಿ ವಲಯದ ಡಾ. ಎಂ.ಡಿ. ಸುಭಾಷ್ ಚಂದ್ರನ್, ಉತ್ತರ ವಲಯದ ಡಾ. ಎಂ.ಆರ್.ದೇಸಾಯಿ ಅವರುಗಳು ಭಾಜನರಾಗಿದ್ದಾರೆ.

ಸಂಸ್ಥೆಗಳ ಪೈಕಿ ದಕ್ಷಿಣ ವಲಯದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು, ಮಲೆನಾಡು ಮತ್ತು ಕರಾವಳಿ ವಲಯದ ಶ್ರೀ ದೇವಿರಮ್ಮ ವನಸಿರಿ ಟ್ರಸ್ಟ್ , ಹಾಸನ ಜಿಲ್ಲೆ, ಉತ್ತರ ವಲಯದ ವನಸಿರಿ ಪ್ರತಿಷ್ಠಾನ, ಸಿಂಧನೂರು ತಾಲ್ಲೂಕು, ರಾಯಚೂರು ಜಿಲ್ಲೆ ಪ್ರಶಸ್ತಿ ಪಡೆದಿವೆ. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: BJPChief Minister SiddaramaiahcmsiddaramiahCongress PartyDCM DK ShivakumardcmdkshivakuamrdifferenceEnvironmentEnvironment AwardlatestnewsLivenewsTodayNatureWorld Environment Day 2023
Previous Post

ಯುಪಿ ಸಿಎಂ ಯೋಗಿ ‌ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್

Next Post

ಪ್ರತಿಭಟನೆಯಿಂದ ಹಿಂದೆ ಸರಿದಿದ್ದೇನೆಂಬುದು ಕೇವಲ ವದಂತಿ : ಸಾಕ್ಷಿ ಮಲಿಕ್​ ಸ್ಪಷ್ಟನೆ

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
Next Post
ಪ್ರತಿಭಟನೆಯಿಂದ ಹಿಂದೆ ಸರಿದಿದ್ದೇನೆಂಬುದು ಕೇವಲ ವದಂತಿ : ಸಾಕ್ಷಿ ಮಲಿಕ್​ ಸ್ಪಷ್ಟನೆ

ಪ್ರತಿಭಟನೆಯಿಂದ ಹಿಂದೆ ಸರಿದಿದ್ದೇನೆಂಬುದು ಕೇವಲ ವದಂತಿ : ಸಾಕ್ಷಿ ಮಲಿಕ್​ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada