• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ʼಲೋ ನವೀನʼ ಚಿತ್ರದ ದೇಸಿ ಹಾಡಿಗೆ ತಲೆದೂಗಿದ ಕರುನಾಡು‌‌

ಪ್ರತಿಧ್ವನಿ by ಪ್ರತಿಧ್ವನಿ
November 29, 2025
in Top Story, ಸಿನಿಮಾ
0
ʼಲೋ ನವೀನʼ ಚಿತ್ರದ ದೇಸಿ ಹಾಡಿಗೆ ತಲೆದೂಗಿದ ಕರುನಾಡು‌‌
Share on WhatsAppShare on FacebookShare on Telegram

ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ ʼಲೋ ನವೀನʼ. ಇತ್ತೀಚೆಗೆ ಈ ಚಿತ್ರದ ಕೋಣಾಣೆ ಹಾಡಿನ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಮಾಜಿ ಶಾಸಕರಾದ ಎ.ಮಂಜು, ಪುಟ್ಟರಾಜು, ಅಮರನಾಥ ಗೌಡ, ವಿಶ್ವಾಮಿತ್ರ, ಜಿ.ಟಿ‌.ಮಾಲ್ ನ ಆನಂದ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಹಾಡು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ADVERTISEMENT
DK Suresh on Power Tussle: ಬಣ ರಾಜಕಾರಣಕ್ಕೆ ಇನ್ನಾದ್ರೂ ಬ್ರೇಕ್ ಬೀಳುತ್ತಾ? ಡಿಕೆ ಸುರೇಶ್ ಏನಂತಾರೆ?

ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್ ಡಿ ಕೋಟೆಯ ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನಕ್ಕೆ ಜೊತೆಯಾಗಿದ್ದಾರೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಅರ್ಪಿಸುವ , ಕೀರ್ತಿಸ್ವಾಮಿ ನಿರ್ಮಿಸಿರುವ ಹಾಗೂ ಧನುರ್ಧಾರಿ ಪವನ್ ನಿರ್ದೇಶನದ “ಲೋ ನವೀನ” ಚಿತ್ರದ ಮೊದಲ ಹಾಡು ಇದ್ದಾಗಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಲಭ್ಯವಿದೆ. ಹಾಡು ಬಿಡುಗಡೆ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ಗುರುತಿಸಿದ್ದ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ನಿರ್ದೇಶಕ ಪವನ್ ಕುಮಾರ್ “ಲೂಸಿಯಾ” ಚಿತ್ರದಲ್ಲಿ ಅವಕಾಶ ಕೊಟ್ಟರು. ಅಲ್ಲಿಂದ ನನ್ನ ಜರ್ನಿ ಆರಂಭವಾಯಿತು. ಆನಂತರ ಸಾಕಷ್ಟು ಚಿತ್ರಗಳಲ್ಲಿ ಹಾಡಿದ್ದೇನೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಅಮೇರಿಕಾಗೆ ಒಮ್ಮೆ ಹೋಗಿದ್ದಾಗ ಬೆನ್ ಚಿಕ್ಕಸ್ವಾಮಿ ಹಾಗೂ ಕೀರ್ತಿಸ್ವಾಮಿ ಅವರನ್ನು ಭೇಟಿ ಮಾಡಿದೆ. ಅವರ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ಅವರು ನಾವೇ ಚಿತ್ರಕ್ಕೆ ಬಂಡವಾಳ ಹೂಡುತ್ತೇವೆ ಎಂದರು.

Siddaramaiah-DKS: ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದ ಸಿದ್ದರಾಮಯ್ಯ #pratidhvani

ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ನಾನೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳು ಈ ಚಿತ್ರದಲ್ಲಿದ್ದು, ಮೊದಲ ಹಾಡಾಗಿ “ಕೋಣಾಣೆ” ಬಿಡುಗಡೆಯಾಗಿದೆ. ಚಿತ್ರದ ಲೊಕೇಶನ್ ಹುಡುಕಾಟದ ಸಲುವಾಗಿ ಎಚ್ ಡಿ ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ. ಇವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ ಅವರಿಂದಲೇ ಈ ಹಾಡು ಹಾಡಿಸಿದ್ದೇನೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರತಂಡದ ಸದಸ್ಯರಿಗೆ ಧನ್ಯವಾದ ಎಂದರು ಚಿತ್ರದ ನಾಯಕ ಹಾಗೂ ಸಂಗೀತ ನಿರ್ದೇಶಕ ನವೀನ್ ಸಜ್ಜು.

ನಾನು ಬೆಂಗಳೂರಿನವಳು. ನನ್ನ ಪತಿ ಮಳವಳ್ಳಿಯವರು. ಮೂವತ್ತೈದು ವರ್ಷಗಳಿಂದ ಅಮೇರಿಕಾದಲ್ಲಿದ್ದೇವೆ. ಅಲ್ಲೂ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ‌‌. ನಮಗೆ ಕನ್ನಡ ಎಂದರೆ ಬಹಳ ಪ್ರೀತಿ. ಹೀಗೆ ಕಾರ್ಯಕ್ರಮವೊಂದರಲ್ಲಿ ನವೀನ್ ಸಜ್ಜು ಅವರನ್ನು ಭೇಟಿಯಾದಾಗ ಈ ಚಿತ್ರದ ಕುರಿತು ಹೇಳಿದರು. ಹಳ್ಳಿಯ ಸೊಗಡಿನ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು ಎಂದು ನಿರ್ಮಾಪಕಿ ಕೀರ್ತಿ ಸ್ವಾಮಿ ತಿಳಿಸಿದರು.

ನಾನು ಮಳವಳ್ಳಿಯವನು. ಚಿಕ್ಕವಯಸ್ಸಿನಲ್ಲೇ ಇದೇ ತರಹದ ಗ್ರಾಮೀಣ ಜನಪದ ಹಾಡುಗಳನ್ನು ಕೇಳುತ್ತಾ ಬೆಳೆದವನು. ನಲವತ್ತು ವರ್ಷಗಳಿಂದ ಅಮೇರಿಕಾದಲ್ಲಿದ್ದರೂ ಕನ್ನಡವನ್ನೇ ಮಾತನಾಡುತ್ತೇನೆ. ದಿನ ಮುದ್ದೆ , ಉಪ್ಸಾರು ತಿನ್ನುತ್ತೇನೆ. ನಮ್ಮ ಮನೆಗೆ‌ ಬಂದವರಿಗೂ ನಾನೇ ಮಾಡಿ ಕೊಡುತ್ತೇನೆ. ಹಾಗಾಗಿ ನವೀನ್ ಸಜ್ಜು ಹಳ್ಳಿಯ ಸೊಗಡಿನ ಕಥೆ ಹೇಳಿದಾಗ ಬಹಳ ಖುಷಿಯಾಯಿತು ಎಂದು ನಿರ್ಮಾಪಕ ಬೆನ್ ಚಿಕ್ಕಸ್ವಾಮಿ ಹೇಳಿದರು.

Siddaramaiah-DKS: ಸುಳ್ಳು ಆರೋಪ ಆರೋಪ ಮಾಡುವುದು ಬಿಜೆಪಿ, ಜೆಡಿಎಸ್ ಚಾಳಿ ಸಿದ್ದು ವಾಗ್ದಾಳಿ #pratidhvani

ಮೊದಲ ನಿರ್ದೇಶನದ ಚಿತ್ರ‌. ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ಧನುರ್ಧಾರಿ ಪವನ್ ತಿಳಿಸಿದರು. ಛಾಯಾಗ್ರಾಹಕ ರಿಷಿಕೇಶ್ ಸೇರಿದಂತೆ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಮಾರಂಭಕ್ಕೂ ಮುನ್ನ ನವೀನ್ ಸಜ್ಜು ಅನೇಕ ಜನಪ್ರಿಯ ಗೀತೆಗಳನ್ನು ಹಾಡಿ ನೆರೆದಿದವರನ್ನು ರಂಜಿಸಿದರು.

Tags: KannadaKannada moviesandalwood
Previous Post

ಸಿಎಂ ಕೊಟ್ಟ ಮಾತಿನಂತೆ ನಡೆಯಬೇಕು ಎಂದು ನಾನು ಹೇಳಿಲ್ಲ-ಡಿ.ಕೆ‌. ಸುರೇಶ್..!

Next Post

ಧರ್ಮಾಧಿಕಾರಿಗಳು ರಾಜಕೀಯ ವ್ಯಾಮೋಹ ಬಿಡಬೇಕು- ಹೆಚ್.ಡಿ ಕುಮಾರಸ್ವಾಮಿ

Related Posts

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ಆಸ್ತಿ ವಿಷಯದಲ್ಲಿ ಎಚ್ಚರವಹಿಸುವುದು ಸೂಕ್ತವಾಗಿದೆ. ದಿಢೀರ್‌ ಧನ ಲಾಭದಿಂದ ಆರ್ಥಿಕ ಕೊರತೆ ನೀಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ....

Read moreDetails
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

December 2, 2025
Next Post
ಧರ್ಮಾಧಿಕಾರಿಗಳು ರಾಜಕೀಯ ವ್ಯಾಮೋಹ ಬಿಡಬೇಕು- ಹೆಚ್.ಡಿ ಕುಮಾರಸ್ವಾಮಿ

ಧರ್ಮಾಧಿಕಾರಿಗಳು ರಾಜಕೀಯ ವ್ಯಾಮೋಹ ಬಿಡಬೇಕು- ಹೆಚ್.ಡಿ ಕುಮಾರಸ್ವಾಮಿ

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!