• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಸಿನಿಮಾ
0
ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!
Share on WhatsAppShare on FacebookShare on Telegram

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ʼನಾಯಿ ಇದೆ ಎಚ್ಚರಿಕೆʼ. ಈಗ ಇದೇ ಚಿತ್ರದ ಶೀರ್ಷಿಕೆಯಾಗಿದೆ. ಚಿತ್ರಕ್ಕೆ ಈ ಶೀರ್ಷಿಕೆ ಏಕೆ? ಎಂಬದನ್ನು ಸಿನಿಮಾದಲ್ಲೇ ನೋಡಬೇಕು. ಲಾವಣ್ಯ ಗದೆ ಅವರು ನಿರ್ಮಾಣ ಮಾಡಿರುವ ಈ ಚಿತ್ರದ ನಾಯಕನಾಗಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಲಿಲಾ ಮೋಹನ್ ಪಿವಿಆರ್ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಕಲಿ ಗೌಡ ಅವರು ನಿರ್ದೇಶಿಸಿದ್ದಾರೆ.

ADVERTISEMENT
Kadlekai Parishe 2025 Basavanagudi  ಹೂವಿನ ಬಾಣದಂತೆ ಹಾಡನ್ನು ಬೇಲ್ ಪುರಿಗೆ ಬದಲಾಯಿಸಿದ ಪವನ್  !

ನನಗೂ ಚಿತ್ರರಂಗಕ್ಕೂ ಹದಿನೈದು ವರ್ಷಗಳ ನಂಟು. ಈ ಹಿಂದೆ ʼತನಿಖೆʼ ಎಂಬ ಚಿತ್ರ ನಿರ್ದೇಶನ ಮಾಡಿದ್ದ ನನಗೆ ಇದು ಎರಡನೇ ನಿರ್ದೇಶನದ ಚಿತ್ರ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ʼನಾಯಿ ಇದೆ ಎಚ್ಚರಿಕೆʼ ಚಿತ್ರ ಶೀರ್ಷಿಕೆಯಲ್ಲಿ ಎಷ್ಟು ಕುತೂಹಲ ಮೂಡಿಸಿದೆಯೊ, ಅಷ್ಟೇ ಕುತೂಹಲ ಸಿನಿಮಾದಲ್ಲೂ ಇರುತ್ತದೆ. ಯಾರು ಊಹಿಸದ ರೋಚಕ ಸನ್ನಿವೇಶಗಳು ಈ ಚಿತ್ರದ ಹೈಲೆಟ್. ನಾಯಿ ನೀಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದಾಗಷ್ಟೇ ಅಲ್ಲ. ಸತ್ತ ಮೇಲೂ ಅದರ ನೀಯತ್ತು ಕಡಿಮೆ ಆಗಲ್ಲ ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ. ಟೀಸರ್, ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಜನರ ಮನ ಗೆದ್ದಿದೆ. ಚಿತ್ರ ಕೂಡ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವ ಭರವಸೆ ಇದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನವೆಂಬರ್ 28 ರಂದು ನಿಮ್ಮ ಮುಂದೆ ಬರಲಿದೆ. ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಕಲಿ ಗೌಡ ಹೇಳಿದ್ದಾರೆ.

ಇನ್ನು ಚಿತ್ರದ ನಾಯಕ ಲೀಲಾ ಮೋಹನ್ ಮಾತನಾಡಿ, ʼನಾನು ವೃತ್ತಿಯಲ್ಲೂ ವೈದ್ಯ. ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ ಅಂತಲೇ.. ಇನ್ನೂ ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ನಾಯಿ ಕಚ್ಚುವುದರಿಂದ ಆಗುವ ದುಷ್ಪರಿಣಾಮಗಳನ್ನು ತೋರಿಸಿರುವ ಸಿನಿಮಾ ಕೂಡ ಹೌದು. ಇದರ ಜೊತೆಗೆ ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಜೊಂಬಿ(zombie) ಚಿತ್ರ. ಎಲ್ಲರೂ ಈ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿʼ ಎಂದು ಸಿನಿ ಪ್ರೇಕ್ಷಕರಲ್ಲಿ ಮನವಿ ಮಾಡಿಕೊಂಡರು.

Satish Jarkiholi: ನಾನೇ 5 ವರ್ಷ ಸಿಎಂ ಎಂದ ಸಿದ್ದು.. ಸಾಹುಕಾರ್ ಖಡಕ್ ರಿಯಾಕ್ಷನ್  #pratidhvani

ಡಾ.ಲೀಲಾಮೋಹನ್ ಪಿವಿಆರ್, ಪ್ರಮೋದ್ ಶೆಟ್ಟಿ, ಬಲ ರಾಜ್ ವಾಡಿ, ದಿವ್ಯಶ್ರೀ, ಮಾನಸ ಗೌಡ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಜಗಪ್ಪ, ಅನಿರುದ್ಧ್ ಮಹೇಶ್, ಪ್ರಬಿಕ್ ಮೊಗವೀರ್, ಚಂದನ, ರಿಷಿ, ಸೀನು ಮುಂತಾದವರು ತಾರಾಬಳಗದಲ್ಲಿದ್ದಾರೆ‌. ಉತ್ತರ ಕರ್ನಾಟಕದ ಪ್ರತಿಭೆ ಯುವ ಗಂಗಾಧರ್ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ‌ ಕಾಣಿಸಿಕೊಂಡಿದ್ದಾರೆ. ಕೆಲವು ಕಿರುಚಿತ್ರಗಳು ಹಾಗೂ ಶ್ರೀರಸ್ತು ಶುಭಮಸ್ತು, ನನ್ನರಸಿ ರಾಧೆ ಸೇರಿದಂತೆ ಅನೇಕ ಧಾರಾವಾಹಿಗಳ ಮೂಲಕ ಯುವ ಗಂಗಾಧರ್ ಜನಪ್ರಿಯರಾಗಿದ್ದಾರೆ. ಎ.ಜೆ.ಕುಮಾರ್ ಛಾಯಾಗ್ರಹಣ ಹಾಗೂ ರವೀಶ್ ಆತ್ಮರಾಮ್ ಅವರ ಸಂಕಲನ ಈ ಚಿತ್ರಕ್ಕಿದೆ.

Tags: Kannadakannada moviesMoviessandalwood
Previous Post

ರಾಹುಲ್‌ ಅಂಗಳಕ್ಕೆ ಪಟ್ಟದ ಫೈಟ್‌ : ಸಿಎಂ ಭೇಟಿಯಲ್ಲಿ ಖರ್ಗೆ ಏನಂದ್ರು..?ಕುತೂಹಲ ಮೂಡಿಸಿದ ಡಿಕೆಶಿ ನಡೆ..!

Next Post

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada