ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಗುಜರಾತ್ನಲ್ಲಿ ಎನ್ಸಿಪಿ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಘೋಷಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೋರ್ 2017ರ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿ ಸ್ಪರ್ಧಿಸಿದ್ದೇವು ಮುಂಬರುವ ಚುನಾವನೆಗಳಲ್ಲಿ ಕಾಂಗ್ರೆಸ್ ಜೊತೆಗೆ ಎನ್ಸಿಪಿ ಮೈತ್ರಿ ಮುಂದುವರೆಸಲಿದೆ. 125ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಮರಳಿ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಅಹಮದಬಾದ್ನ ನರೋಡಾ, ದಾಹೋಡ್ ಜಿಲ್ಲೆಯ ದೇವಗಢ ಹಾಘು ಆನಂದ್ ಜಿಲ್ಲೆಯ ಉಮ್ರೇತ್ನಲ್ಲಿ ಸ್ಪರ್ದಿಸಲಿದೆ. ಈ ಮೂರು ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಶಾಸಕರಿದ್ದಾರೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು ಡಿಸೆಂಬರ್ 1ರಂದು 89 ಹಾಗೂ 5ರಂದು 93 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.









