• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎನ್ ಡಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಕೇವಲ ರೂ.6,498 ಕೋಟಿ :ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕೇಂದ್ರದ ಎನ್ ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ. 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ. ಈ ಅನ್ಯಾಯದ ವಿರುದ್ದ ಜಾತಿ-ಧರ್ಮ, ಪಕ್ಷ – ಪಂಥದ ಭೇದವಿಲ್ಲದೆ ದನಿ ಎತ್ತುವ ಶಪಥವನ್ನು ಪ್ರತಿಯೊಬ್ಬ ಕನ್ನಡಿಗನು ಮಾಡಬೇಕಾಗಿದೆ. ಇಂತಹದ್ದೊಂದು ಪ್ರಮಾಣ ವಚನ ಸ್ವೀಕಾರಕ್ಕೆ ಅನ್ಯಾಯದ ವಿರುದ್ಧ ನ್ಯಾಯದ ಗೆಲುವಿನ ಸಂಕೇತವಾದ ವಿಜಯದಶಮಿಯ ಶುಭ ದಿನ ಸಾಕ್ಷಿಯಾಗಲಿ.

ADVERTISEMENT

ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನು ಕೇಂದ್ರ ಸರ್ಕಾರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31,962 ಕೋಟಿ, ಬಿಹಾರಕ್ಕೆ ರೂ.17,921 ಕೋಟಿ, ಮಧ್ಯಪ್ರದೇಶಕ್ಕೆ ರೂ.13,987 ಕೋಟಿ ಮತ್ತು ರಾಜಸ್ತಾನಕ್ಕೆ ರೂ.10,737 ಕೋಟಿಯಷ್ಟು ತೆರಿಗೆ ಪಾಲನ್ನು ನೀಡಲಾಗಿದೆ.

ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಅಭಿವೃದ್ದಿ ಪಥದಲ್ಲಿ ಹಿಮ್ಮುಖವಾಗಿ ಸಾಗುತ್ತಿರುವ ಈ ರಾಜ್ಯಗಳಿಗಾಗಿ ಕನ್ನಡಿಗನ ಬೆವರ ಗಳಿಕೆ ಯಾಕೆ ಪೋಲಾಗಬೇಕು ಎನ್ನುವುದು ನಮ್ಮ ಪ್ರಶ್ನೆಯಾಗಿದೆ?

ರಾಜ್ಯಗಳಿಂದ ಸಂಗ್ರಹಿಸುವ ತೆರಿಗೆ ಹಣದಲ್ಲಿ ಉತ್ತರಪ್ರದೇಶಕ್ಕೆ ಶೇ.17.93, ಬಿಹಾರಕ್ಕೆ 10.05, ರಾಜಸ್ತಾನಕ್ಕೆ 6.02 ಮತ್ತು ಮಧ್ಯಪ್ರದೇಶಕ್ಕೆ 7.85ರಷ್ಟು ಪಾಲು ನೀಡಿದರೆ, ಕರ್ನಾಟಕಕ್ಕೆ ನೀಡುತ್ತಿರುವ ತೆರಿಗೆ ಪಾಲು ಕೇವಲ ಶೇ.3.64 ಮಾತ್ರ. ತೆರಿಗೆ ಹಂಚಿಕೆಗಾಗಿ ನಿಗದಿ ಪಡಿಸಲಾಗಿರುವ ಮಾನದಂಡದಲ್ಲಿಯೇ ಕೇಂದ್ರ ಸರ್ಕಾರದ ಪ್ರಗತಿ ವಿರೋಧಿ ಧೋರಣೆ ಸ್ಪಷ್ಟವಾಗಿದೆ. ಅಭಿವೃದ್ಧಿಶೀಲ ರಾಜ್ಯವನ್ನು ಶಿಕ್ಷಿಸಿ, ದುರಾಡಳಿತ ನಡೆಸುತ್ತಿರುವ ರಾಜ್ಯಗಳನ್ನು ಪುರಸ್ಕರಿಸುವ ತೆರಿಗೆ ಹಂಚಿಕೆ ಮಾನದಂಡವನ್ನೇ ಬದಲಾಯಿಸಬೇಕೆಂದು ನಾವು ಒತ್ತಾಯಿಸುತ್ತಲೇ ಬಂದಿದ್ದರೂ ಕೇಂದ್ರ ಸರ್ಕಾರ ಕಿವುಡಾಗಿದೆ.

ಹದಿನಾಲ್ಕನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ 4.713 ಎಂದು ನಿಗದಿಪಡಿಸಿತ್ತು, ಈಗಿನ 15ನೇ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ 3.647ಕ್ಕೆ ಇಳಿಸಿತು. ಇದರಿಂದ 2021-26 ರವರೆಗಿನ ಐದು ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು ರೂ ₹62,275 ಕೋಟಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯವನ್ನು ಪರಿಗಣಿಸಿದ್ದ ಹಣಕಾಸು ಆಯೋಗ ವಿಶೇಷ ಅನುದಾನದ ರೂಪದಲ್ಲಿ ರೂ.5,495 ಕೋಟಿ ನೀಡುವಂತೆ ಶಿಫಾರಸು ಮಾಡಿತ್ತು. ಇದನ್ನು ಕೂಡಾ ಕೇಂದ್ರ ಸರ್ಕಾರ ನೀಡದೆ ಅನ್ಯಾಯ ಎಸಗಿದೆ. ಈ ಎಲ್ಲ ನಷ್ಟಗಳನ್ನು ಸೇರಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರೂ.79,770 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ.

ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಪಾಲು ಕೇವಲ ಶೇಕಡಾ 5ರಷ್ಟಿದ್ದರೂ ದೇಶದ ಜಿಡಿಪಿಗೆ ಕರ್ನಾಟಕದ ಶೇಕಡಾ 8.4ರಷ್ಟು ಕೊಡುಗೆ ನೀಡುತ್ತಿದೆ.ಜಿಎಸ್‌ಟಿ ಸಂಗ್ರಹದಲ್ಲಿ ಸತತವಾಗಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‌ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು 2017-18ರಿಂದ 2023-24ರ ವರೆಗೆ ಸುಮಾರು ರೂ. 59,274 ಕೋಟಿ ಹಣವನ್ನು ಕಳೆದುಕೊಂಡಿದೆ.

ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಇದರ ಜೊತೆಗೆ ಅನುದಾನದ ರೂಪದಲ್ಲಿ ಅಂದಾಜು ₹15,000 ಕೋಟಿ ಸೇರಿರುತ್ತದೆ. ಇವೆಲ್ಲ ಕೂಡಿದರೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಈ ಅನ್ಯಾಯವನ್ನು ಎಷ್ಟು ದಿನ ಸಹಿಸಿಕೊಂಡಿರಲು ಸಾಧ್ಯ?

ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್‌ ದುಪ್ಪಟ್ಟಿಗಿಂತಲೂ ಹೆಚ್ಚಾಗಿದೆ. 2018-19ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. ₹24,42,213 ಕೋಟಿ ಇತ್ತು. ಆಗ ಕೇಂದ್ರದಿಂದ ರಾಜ್ಯಕ್ಕೆ ದೊರೆಯುತ್ತಿದ್ದ ತೆರಿಗೆ ಪಾಲು ರೂ.35,895 ಕೋಟಿ ಹಾಗೂ ರೂ.16,082 ಕೋಟಿ ಸೇರಿ ಒಟ್ಟು ರೂ.46,288 ಕೋಟಿ ಲಭ್ಯವಾಗಿತ್ತು. 2024-25ರಲ್ಲಿ ಕೇಂದ್ರದ ಬಜೆಟ್‌ ಗಾತ್ರ ರೂ.48,20,514 ಕೋಟಿಗೆ ಏರಿಕೆಯಾಗಿದೆ. ಆದರೆ 2024-25ರ ಸಾಲಿನಲ್ಲಿ ಕರ್ನಾಟಕಕ್ಕೆ ನಿಗದಿ ಪಡಿಸಿರುವ ತೆರಿಗೆ ಪಾಲು ರೂ.44,485 ಕೋಟಿ. ಅಂದಾಜು ಅನುದಾನ ರೂ.15,299 ಕೋಟಿ. ಈ ರೀತಿ ತೆರಿಗೆ ಪಾಲು ಮತ್ತು ಅನುದಾನಗಳೆರಡೂ ಸೇರಿ ಕೇಂದ್ರದಿಂದ ರಾಜ್ಯಕ್ಕೆ ಸಿಗಲಿರುವ ಒಟ್ಟು ಹಣ ರೂ,59,784 ಕೋಟಿ ಮಾತ್ರ.ಅಂದರೆ ಕಳೆದ 8 ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಿಗಿಂತ ಹೆಚ್ಚಾದರೂ ಕರ್ನಾಟಕಕ್ಕೆ ಸಿಗುವ ಕೇಂದ್ರದ ತೆರಿಗೆ ಪಾಲಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸಕ್ತ ಬಜೆಟ್‌ ಗಾತ್ರದ ಹೋಲಿಕೆಯಲ್ಲಿ ಕರ್ನಾಟಕಕ್ಕೆ ವಾರ್ಷಿಕ ಕನಿಷ್ಠ ರೂ.1 ಲಕ್ಷ ಕೋಟಿಯಷ್ಟು ಹಣ ತೆರಿಗೆಯ ಪಾಲು ಹಾಗೂ ಅನುದಾನದ ಮುಖೇನ ದೊರೆಯಬೇಕಿತ್ತು, ಆದರೆ ದೊರೆತಿಲ್ಲ.

ಕರ್ನಾಟಕಕ್ಕೆ ಈ ಪರಿಯ ದೊಡ್ಡ ಮಟ್ಟದ ಅನ್ಯಾಯ ಆಗಿರುವುದು ಮನವರಿಕೆಯಾದ ನಂತರವೇ ಹದಿನೈದನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹5,495 ಕೋಟಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಕನ್ನಡಿಗರ ಜನಪ್ರತಿನಿಧಿಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಈ ಶಿಫಾರಸನ್ನು ನಿರಾಕರಿಸಿರುವ ಕಾರಣ ಆ ದುಡ್ಡು ಕೂಡಾ ಬರಲಿಲ್ಲ.ಇದಲ್ಲದೆ, ಹದಿನೈದನೇ ಹಣಕಾಸು ಆಯೋಗವು ಬೆಂಗಳೂರಿನ ಫೆರಿಫೆರಲ್‌ ರಿಂಗ್‌ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ವಿತ್ತ ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ದ್ರೋಹ ಮಾಡಿದ್ದಾರೆ.

ದೇಶವು ಇಂದು ಐದು ಟ್ರಿಲಿಯನ್‌ ಅರ್ಥ ವ್ಯವಸ್ಥೆಯಾಗುವ ಕನಸನ್ನು ಕಾಣುತ್ತಿದೆ ಎಂದರೆ ಅದರ ಹಿಂದೆ ದೇಶದ ಪ್ರಗತಿಗೆ ಅನನ್ಯವಾದ ಕೊಡುಗೆಯನ್ನು ನೀಡುತ್ತಿರುವ, ದೇಶದ ಸಂಪತ್ತಿಗೆ ಅಗಾಧವಾದ ಸಂಪನ್ಮೂಲವನ್ನು ಒದಗಿಸುತ್ತಿರುವ ಕರ್ನಾಟಕದ ಸಹಿತ ದಕ್ಷಿಣ ಭಾರತದ ರಾಜ್ಯಗಳ ವಿಶೇಷ ಕೊಡುಗೆಯಿದೆ ಎನ್ನುವುದನ್ನು ಮರೆಯಬಾರದಲ್ಲವೇ?

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲು ಯೋಜನಾ ಆಯೋಗವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರಗಳಿಗೆ ದನಿಯೇ ಇಲ್ಲದ ರೀತಿಯಲ್ಲಿ ನೀತಿ ಆಯೋಗವನ್ನು ರಚಿಸಲಾಯಿತು. ಅದರ ಬೆನ್ನಲ್ಲಿಯೇ ಹದಿನೈದನೇ ಹಣಕಾಸು ಆಯೋಗವನ್ನು ರಚಿಸಿ ಅದರ ಕಾರ್ಯೋದ್ದೇಶಗಳನ್ನು ನಿಗದಿಗೊಳಿಸುವ ಮಾರ್ಗಸೂಚಿ ಅಂಶಗಳಲ್ಲಿ ಬದಲಾವಣೆ ಮಾಡಲಾಯಿತು. ಈ ಬದಲಾವಣೆಗಳು ಸಹಜವಾಗಿ ಕರ್ನಾಟಕವೂ ಸೇರಿದಂತೆ ಅಭಿವೃದ್ಧಿಯ ಪಥದಲ್ಲಿರುವ ದಕ್ಷಿಣದ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಿದೆ.

ಕರ್ನಾಟಕದಿಂದ ಕ್ರೋಢೀಕರಿಸಲ್ಪಟ್ಟ ತೆರಿಗೆ ಕನ್ನಡಿಗರ ಕಷ್ಟನಷ್ಟಗಳಿಗೆ ಒದಗದೆ ಹೋದರೆ, ಕನ್ನಡಿಗರ ಕಣ್ಣೀರು ಒರೆಸಲು ಬಳಕೆಯಾಗದೆ ಹೋದರೆ ಅಂತಹ ತೆರಿಗೆಯನ್ನು ಸಂಗ್ರಹಿಸಿ ಏನು ಪ್ರಯೋಜನ? ದೇಶದ ಅಭಿವೃದ್ದಿಗೆ ವರ್ಷಂಪ್ರತಿ ಲಕ್ಷೋಪಲಕ್ಷ ಕೋಟಿ ರೂಪಾಯಿ ಹಣವನ್ನು ತೆರಿಗೆಯಾಗಿ ನೀಡಿದ ನಂತರವೂ ಅಪರೂಪಕ್ಕೊಮ್ಮೆ ಬರುವಂತಹ ಅತಿವೃಷ್ಟಿ, ಅನಾವೃಷ್ಟಿಗಳ ಸಂದರ್ಭದಲ್ಲಿ ಕೆಲ ಸಾವಿರ ಕೋಟಿ ರೂ. ಹಣವನ್ನು ಕೇಂದ್ರ ನಮ್ಮವರ ಕಣ್ಣೀರು ಒರೆಸಲು ನೀಡದೆ ಹೋದರೆ ಒಕ್ಕೂಟ ವ್ಯವಸ್ಥೆಗೆ ಅರ್ಥವಿದೆಯೇ? ಈ ಪ್ರಶ್ನೆಗಳು ಇಂದು ನಮ್ಮ ಮುಂದಿವೆ.

ಕರ್ನಾಟಕವು ಒಕ್ಕೂಟ ವ್ಯವಸ್ಥೆಯೆಡೆಗೆ ತನಗಿರುವ ಎಲ್ಲ ಗೌರವವನ್ನು ಉಳಿಸಿಕೊಂಡೇ, ತನ್ನ ನ್ಯಾಯಯುತ ಪಾಲನ್ನು ಪಡೆಯಲು ಹೇಗೆ ಮುಂದುವರೆಯಬೇಕು ಎನ್ನುವ ಚರ್ಚೆಗಳು ಮುಂದಿನ ದಿನಗಳಲ್ಲಿ ಸಾರ್ವಜನಿಕವಾಗಿ ನಡೆಯಬೇಕಿದೆ. ಇಂತಹ ಒಂದು ರಚನಾತ್ಮಕ ಚರ್ಚೆ ವಿಜಯದಶಮಿಯ ಶುಭದಿನದಿಂದಲೇ ಶುರುವಾಗಲಿ ಎನ್ನುವುದು ನನ್ನ ಹಾರೈಕೆ.

Tags: 6498crore:BJPCM Siddaramaiah‌Congress PartyNDA government has done injustice to Karnataka only Rs.6PM Modi
Previous Post

ಮಾರ್ಟಿನ್‌ ಸಿನಿಮಾ ನೋಡಿದ ಪಾಕ್‌ ಕ್ರಿಕೆಟಿಗ ಬಾಬರ್‌ ಅಜಂ!

Next Post

ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ :ಸಚಿವ ಎಂ.ಬಿ.ಪಾಟೀಲ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ :ಸಚಿವ ಎಂ.ಬಿ.ಪಾಟೀಲ್

ಅಮೆರಿಕದಲ್ಲಿ 'ಕ್ವಿನ್ ಸಿಟಿ' ಕೇಂದ್ರಿತ ಹೂಡಿಕೆ ಚರ್ಚೆ :ಸಚಿವ ಎಂ.ಬಿ.ಪಾಟೀಲ್

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada