ಮುಂದಿನ ತಿಂಗಳು ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ನಿಮಿತ್ತ ಶುಕ್ರವಾರ ಪ್ರಮುಖ ನಾಯಕರ ಸಮ್ಮುಖದಲ್ಲಿ ಉಮೇದುವಾರಿಕೆ ಸಲ್ಲಿಸಿರುವ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ತಮ್ಮಗೆ ಬೆಂಬಲಿಸುವಂತೆ ಪ್ರಮುಖ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಯಾಚಿಸಿದ್ದಾರೆ.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಷ್ಟ್ರೀಯ ಕಾಂಗ್ರೆಸ್ ಮುಖ್ಯಸ್ಥ ಶರದ್ ಪವಾರ್, ಟಿಎಂಸಿ ಮುಖ್ತಸ್ಥೆ ಮತಾ ಬ್ಯಾನರ್ಜಿ ಸೇರಿದಂತೆ ಪ್ರಮುಖರಿಗೆ ಕರೆ ಮಾಡಿ ತಮ್ಮಗೆ ಬೆಂಬಲ ನೀಡುವಂತೆ ಮನವಿ ಮಾಡಿರುವುದು ತಿಳಿದು ಬಂದಿದೆ.
ಸುದ್ದಿ ಮೂಲಗಳ ಪ್ರಕಾರ ನಾಮಪತ್ರ ಸಲ್ಲಿಸುವುದಕ್ಕು ಮುನ್ನ ಕರೆ ಮಾಡಿ ಬೆಂಬಲ ಯಾಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ನಾಯಕರುಗಳು ಶುಭ ಹಾರೈಸಿದ್ದಾರೆ ಎಂದು ವರದಿಯಾಗಿದೆ.