• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಧಾರವಾಡದಲ್ಲಿ ಎನ್‌ಡಿಎ ಮಾದರಿ ಪೊಲೀಸ್ ತರಬೇತಿ ಕೇಂದ್ರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 5, 2022
in ಕರ್ನಾಟಕ, ರಾಜಕೀಯ
0
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್
Share on WhatsAppShare on FacebookShare on Telegram

ಧಾರವಾಡದಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪುಣೆಯ ಖಡಕ್‌ವಾಸ್ಲಾದ ಎನ್.ಡಿ.ಎ.ಮಾದರಿಯ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು.ತಂತ್ರಜ್ಞಾನ,ವಿಜ್ಞಾನ ಆಧರಿಸಿ ಸೈಬರ್ ಅಪರಾಧಗಳ ತ್ವರಿತ ಪತ್ತೆ ಮಾಡುವ ಕೌಶಲ್ಯವನ್ನು ಪೊಲೀಸರು ಬೆಳೆಸಿಕೊಳ್ಳಬೇಕು.ಈ ನಿಟ್ಟಿನಲ್ಲಿ ಸುಧಾರಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಮಧ್ಯಮ ಕ್ರಮಾಂಕದ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲು ಪುಣೆಯ ಖಡಕ್‌ವಾಸ್ಲಾದಲ್ಲಿರುವ ಎನ್ ಡಿ ಎ ಮಾದರಿಯ ತರಬೇತಿ ಕೇಂದ್ರವನ್ನು ಧಾರವಾಡದಲ್ಲಿ ಸ್ಥಾಪಿಸಲಾಗುವುದು.ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪನೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಹಣ ಒದಗಿಸಬಹುದು.ಸೂಕ್ತ ಪ್ರಸ್ತಾವನೆ ಬಂದರೆ ರಾಜ್ಯ ಸರ್ಕಾರದಿಂದ ಹಣ ಒದಗಿಸಲಿದೆ .ತಂತ್ರಜ್ಞಾನದ ದುರುಪಯೋಗ ತಡೆಯಬೇಕು.ಡಿಜಿಟಲ್ ಹಾಗೂ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿ ಇನ್ನೂ ಸುಧಾರಣೆ ತರಲಾಗುವುದು.ಪೊಲೀಸ್ ಠಾಣೆಗಳು ಸಮಾಜದ ಭದ್ರತೆಗೆ ಅತ್ಯಗತ್ಯ.ದಕ್ಷವಾದ ಸೇನೆ ಹಾಗೂ ಪೊಲೀಸರು ಇರುವಲ್ಲಿ ಶಾಂತಿ ನೆಲೆಸಿರುತ್ತದೆ.ಶಾಂತಿ ಇದ್ದಲ್ಲಿ ಅಭಿವೃದ್ಧಿಯಾಗುತ್ತದೆ.ಕರ್ನಾಟಕ ಪೊಲೀಸರು ದಕ್ಷತೆಗೆ ಹೆಸರಾಗಿದ್ದಾರೆ.ಹುಬ್ಬಳ್ಳಿಯ ಜನದಟ್ಟಣೆ ಹಾಗೂ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಂಚಾರ ಪೊಲೀಸ್ ಠಾಣೆಗಳ ಅಗತ್ಯತೆ ಮನಗಂಡು ಅಲ್ಲಿ ಠಾಣೆ ಸ್ಥಾಪಿಸಲಾಗಿದೆ.ಅಭಿವೃದ್ಧಿಯ ವಿಷಯದಲ್ಲಿ ಅಧಿಕಾರಿಗಳು ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಬೇಕು.ಕಾನೂನು ಚೌಕಟ್ಟಿನಲ್ಲಿ ಜನರಿಗೆ ನೆರವು ನೀಡಲು ಅಧಿಕಾರಿಗಳು ಹಿಂದೇಟು ಹಾಕಬಾರದು. 2025 ರೊಳಗೆ 11 ಸಾವಿರ ಪೊಲೀಸ್ ವಸತಿ ಗೃಹಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 2 ಸಾವಿರ ವಸತಿ ಗೃಹಗಳು ತಲೆ ಎತ್ತಲಿವೆ.ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ಒಂದೇ ವರ್ಷದ ಅವಧಿಯಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗಿದೆ. 8101 ಶಾಲೆಗಳ ಕಟ್ಟಡಗಳನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಲಾಗಿದೆ. ತಲಾ 7 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 81 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ.ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳೂ ಸೇರಿ ಎರಡನೇ ಹಂತದ ಒಟ್ಟು ಆರು ನಗರಗಳಿಗೆ ಹೊಂದಿಕೊಂಡು ವಿಸ್ತೃತ ಹೊಸ ನಗರಗಳನ್ನು ನಿರ್ಮಿಸಲಾಗುವುದು.ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಸ್ಥಾಪನೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ ಮಾತನಾಡಿ,ವರ್ಷದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಿರುವುದು ದಾಖಲೆಯ ಕಾರ್ಯವಾಗಿದೆ.ಈ ಬಾರಿ ಬಜೆಟ್‌ನಲ್ಲಿ ಮುಖ್ಯಮಂತ್ರಿಯವರು ಪೊಲೀಸ್ ವಸತಿ ಗೃಹ ಹಾಗೂ ಠಾಣೆಗಳಿಗೆ ಸುಮಾರು ಒಂದು ಸಾವಿರ ಕೋಟಿ ರೂ.ನೀಡಿರುವುದು.ಪೊಲೀಸ್ ವಿದ್ಯಾನಿಧಿ ಮೂಲಕ ಪೊಲೀಸರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುತ್ತಿರುವುದು ಸ್ವಾಗತಾರ್ಹವಾಗಿದೆ.ತಂತ್ರಜ್ಞಾನ ಮತ್ತು ವಿಜ್ಞಾನ ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಅಳವಡಿಕೆಯಾಗಬೇಕು ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಿ,ಎಲ್ಲೆಡೆ ಸುಲಭವಾಗಿ ಹಂಚಿಕೆ ಮಾಡಿಕೊಳ್ಳಬಹುದಾದಂತಹ ವ್ಯವಸ್ಥೆ ಜಾರಿಗೊಳ್ಳಬೇಕು.ಆಧುನಿಕತೆ ಮತ್ತು ಪೊಲೀಸರ ಮಾನವೀಯತೆ ಜೊತೆ ಜೊತೆಯಾಗಿ ಸಾಗಬೇಕು ಎಂದು ಹೇಳಿದ್ದಾರೆ.

ಗೃಹಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ.ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು.ಈಗ ವಾರ್ಷಿಕ‌ 100 ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ.ಶೇ.35 ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇ.12 ಕ್ಕೆ ಇಳಿಕೆ ಮಾಡಲಾಗಿದೆ.ಶೀಘ್ರದಲ್ಲಿಯೇ 900 ಪಿಎಸ್‌ಐಗಳ ನೇಮಕಾತಿ ನಡೆಯಲಿದೆ.ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.ಪೊಲೀಸ್ ಇಲಾಖೆಗೆ ಈ ವರ್ಷ ಅತ್ಯಂತ ಸವಾಲಿನದಾಗಿತ್ತು.ಹುಬ್ಬಳ್ಳಿ ಗಲಭೆಯನ್ನು ಇಲ್ಲಿನ ಪೊಲೀಸ್ ಆಯುಕ್ತ ಲಾಭೂರಾಮ್ ನೇತೃತ್ವದ ತಂಡ ಅತ್ಯಂತ ಸಮರ್ಥವಾಗಿ ಹಾಗೂ ಕ್ಷಿಪ್ರವಾಗಿ ತಹಬಂದಿಗೆ ತರುವ ಮೂಲಕ ಇಲ್ಲಿನ ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ,ಪೊಲೀಸರ ಕಾರ್ಯದಕ್ಷತೆ ಹೆಚ್ಚಳಕ್ಕೆ ,ಮೂಲಭೂತ ಸೌಕರ್ಯಗಳುಳ್ಳ ಠಾಣೆಗಳು,ತರಬೇತಿ ಕೇಂದ್ರಗಳು‌ ಅಗತ್ಯ.ಬೆಂಗಳೂರಿನ‌ ನಂತರ ರಾಜ್ಯದ ಎರಡನೇ ಅತಿದೊಡ್ಡ ಶಹರಗಳೆನಿಸಿರುವ ಹುಬ್ಬಳ್ಳಿ ಧಾರವಾಡ ಅವಳಿನಗರದ ಸಂಚಾರ ನಿರ್ವಹಣೆಗೆ ಸ್ಥಾಪಿಸಲು ಉದ್ದೇಶಿಸಿರುವ ಟ್ರಾಫಿಕ್ ಕಮಾಂಡ್ ಕಂಟ್ರೋಲ್ ಸೆಂಟರ್ 3.93 ಕೋಟಿ ರೂ.ಬಿಡುಗಡೆಯಾಗಿದೆ.ಇನ್ನು 4 ಕೋಟಿ ರೂ.ಗಳ ಅಗತ್ಯವಿದೆ.ರಾಜ್ಯ ಸರ್ಕಾರ ಕೂಡಲೇ ಅನುದಾನ ಒದಗಿಸಿ ತ್ವರಿತವಾಗಿ ಈ ಕೇಂದ್ರ ಸ್ಥಾಪಿಸಬೇಕು.ಬಾಂಬ್ ನಿಷ್ಕ್ರಿಯ ಘಟಕವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಬೇಕು.ಸರದಿಯಾಧಾರದಲ್ಲಿ ಪೊಲೀಸರಿಗೆ ಕರ್ತವ್ಯ ವಹಿಸಿ ಅವರ ಹಿತ ಕಾಯಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ,ಹುಬ್ಬಳ್ಳಿ ಧಾರವಾಡ ಅವಳಿ ನಗರದ ರಸ್ತೆ ಸುಧಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಕಷ್ಟು ನೆರವು ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾದೇಶಿಕ‌ ಕೇಂದ್ರದ ಸ್ಥಾಪನೆಗೆ ಮುಖ್ಯಮಂತ್ರಿಯವರು ಮುತುವರ್ಜಿ ವಹಿಸಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಾಜಿ ಮುಖ್ಯಮಂತ್ರಿ,ಶಾಸಕ ಜಗದೀಶ ಶೆಟ್ಟರ್ ಮಾತನಾಡಿ,ಹುಬ್ಬಳ್ಳಿಯಲ್ಲಿ ಈಗಾಗಲೇ ಎಂಟು ತಿಂಗಳ ಅವಧಿಯಲ್ಲಿ ಎರಡು ಪೊಲೀಸ್ ಠಾಣೆಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ.ಇಂದು ಶಂಕುಸ್ಥಾಪನೆಯಾಗಿರುವ ಮೂರು ಠಾಣೆಗಳನ್ನೂ ಕೂಡ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು.ಕೋರ್ಟಿನಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಶೇ.8 ರಿಂದ 10 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗುತ್ತಿವೆ.ಸೂಕ್ತ ಸಾಕ್ಷ್ಯಾಧರಗಳನ್ನು ಒದಗಿಸಿ ಶಿಕ್ಷೆಯ ಪ್ರಮಾಣವನ್ನು ಶೇ.60 ರಿಂದ 70 ಕ್ಕೆ ಏರಿಸಬೇಕು.ಈ ಹಿಂದೆ ವಿವಿಧ ಹೋರಾಟಗಳಲ್ಲಿ ಭಾಗವಹಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳಲ್ಲಿ ಆರೋಪಮುಕ್ತರಾಗಿರುವವರು ಈವರೆಗೂ ರೌಡಿಶೀಟರ್‌ಗಳಾಗಿ ಮುಂದುವರೆದಿದ್ದಾರೆ.ಅದನ್ನು ಪರಿಶೀಲಿಸಿ ಪಟ್ಟಿಯಿಂದ ಅಂತಹ ವ್ಯಕ್ತಿಗಳನ್ನು ಕೈ ಬಿಡಬೇಕು ಎಂದರು.

ಗಣಿ,ಭೂವಿಜ್ಞಾನ ,ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ,ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ,ಪ್ರದೀಪ ಶೆಟ್ಟರ್,ಎಸ್.ವಿ.ಸಂಕನೂರ,ಶಾಸಕರಾದ ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ,ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ,ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ರಾಜೇಶ ಕೋಟೆಣ್ಣವರ,ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ್ ಈರೇಶ ಅಂಚಟಗೇರಿ,ಉಪಮೇಯರ್ ಉಮಾ ಮುಕುಂದ್,ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್,ಎಡಿಜಿಪಿ ಅರುಣ ಚಕ್ರವರ್ತಿ, ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕ,ಎನ್.ಸತೀಶಕುಮಾರ,ಜಿಲ್ಲಾಧಿಕಾರಿ ಗುರುದತ್ತ ಹೆಗಡೆ,ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಬಿ.ಜಗಲಾಸರ್,ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್,ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ,ಜಿಪಂ‌ ಸಿಇಓ ಡಾ.ಸುರೇಶ ಇಟ್ನಾಳ,ಕೆಎಸ್‌ಪಿಹೆಚ್ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಬಿ.ಎಸ್.ಮತ್ತಿತರರು ವೇದಿಕೆಯಲ್ಲಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಘನ, ದ್ರವ ತ್ಯಾಜ್ಯ ಸಂಸ್ಕರಣೆಯಲ್ಲಿ ಭಾರೀ ಪ್ರಮಾಣದ ಅಂತರ: ಪಶ್ಚಿಮ ಬಂಗಾಳ ಸರ್ಕಾರಕ್ಕೆ 3500 ಕೋಟಿ ದಂಡ

Next Post

SKMಗೆ ಯೋಗೇಂದ್ರ ಯಾದವ್ ರಾಜೀನಾಮೆ

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
SKMಗೆ ಯೋಗೇಂದ್ರ ಯಾದವ್ ರಾಜೀನಾಮೆ

SKMಗೆ ಯೋಗೇಂದ್ರ ಯಾದವ್ ರಾಜೀನಾಮೆ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada