• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪ್ರಧಾನಿಗೆ ಮನವಿ ಮಾಡಿದ ಸಿಎಂ ಬಿ.ಎಸ್.ವೈ

ಪ್ರತಿಧ್ವನಿ by ಪ್ರತಿಧ್ವನಿ
July 16, 2021
in ಕರ್ನಾಟಕ, ದೇಶ, ರಾಜಕೀಯ
0
ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪ್ರಧಾನಿಗೆ ಮನವಿ ಮಾಡಿದ ಸಿಎಂ ಬಿ.ಎಸ್.ವೈ
Share on WhatsAppShare on FacebookShare on Telegram

ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ADVERTISEMENT

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸಿನಲ್ಲಿ ಮಾತನಾಡಿದ ಅವರು, ಯುರೋಪ್ ಮತ್ತಿತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಮೂರನೇ ಅಲೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯ ಹೆಚ್ಚಿಸಬೇಕು ಎಂದು ಪ್ರಧಾನ ಮಂತ್ರಿ ಸಲಹೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಇಳಿಮುಖವಾಗಿದ್ದು, 1900 ಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ಸುಮಾರು 400ಕ್ಕೆ ಇಳಿದಿದೆ. ಪಾಸಿಟಿವಿಟಿ ದರ ಶೇ. 1.42 ರಷ್ಟಿದ್ದು, ಮರಣ ಪ್ರಮಾಣ ಶೇ. 1.25 ಕ್ಕೆ ಇಳಿದಿದೆ ಎಂದು ಮುಖ್ಯಮಂತ್ರಿಯವರು ವಿವರಿಸಿದರು.

ರಾಜ್ಯದಲ್ಲಿ ಈ ವರೆಗೆ 2.62 ಕೋಟಿ ಲಸಿಕೆ ನೀಡಲಾಗಿದ್ದು, ಪ್ರತಿ ದಿನ 5 ಲಕ್ಷ ಡೋಸ್ ಗಳಂತೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಕೋವಿಡ್ 19ರ ಪಾಸಿಟಿವಿಟಿ ದರ, ಪ್ರಕರಣಗಳ ಸಂಖ್ಯೆ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯವನ್ನು ಆಧರಿಸಿ, ನಿರ್ಬಂಧಗಳನ್ನು ವಿಧಿಸಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಕೋವಿಡ್ ಸೂಕ್ತ ನಡವಳಿಕೆಯನ್ನು ಖಾತರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಹ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಮೂರನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಎಲ್ಲ ಆರೋಗ್ಯ ಸೇವಾ ಸಂಸ್ಥೆಗಳಲ್ಲಿ ಆಕ್ಸಿಜನೇಟೆಡ್ ಬೆಡ್ ಗಳು, ವೆಂಟಿಲೇಟರ್ ಬೆಡ್ ಗಳು ಹಾಗೂ ಮಕ್ಕಳ ಐಸಿಯು ಗಳು ಮೊದಲಾದ ಸೌಲಭ್ಯ ಹೆಚ್ಚಿಸಲಾಗುತ್ತಿದ್ದು, ವೈದ್ಯರು, ಸ್ಟಾಫ್ ನರ್ಸ್, ಪ್ರಯೋಗಾಲಯ ತಂತ್ರಜ್ಞರ ಸೇವೆ ಒದಗಿಸಲಾಗುತ್ತಿದೆ. ಜೊತೆಗೆ ಕೋವಿಡ್ ಚಿಕಿತ್ಸೆಗೆ ಅಗತ್ಯ ಪರಿಕರಗಳನ್ನೂ ಸಹ ಸಾಕಷ್ಟು ಸಂಖ್ಯೆಯಲ್ಲಿ ಖರೀದಿಸಲಾಗುತ್ತಿದೆ. ಹೊಸ ಆರ್ ಟಿ ಪಿ ಸಿ ಆರ್ ಪ್ರಯೋಗಾಲಯಗಳ ಸ್ಥಾಪನೆ ಹಾಗೂ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬೊರೇಟರಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಮೂರನೇ ಅಲೆಯನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಲಸಿಕೆ ಹಂಚಿಕೆ ಹೆಚ್ಚಳ, 800 ನಿಯೊ-ನೇಟಲ್ ಮತ್ತು ಪಿಡಿಯಾಟ್ರಿಕ್ ವೆಂಟಿಲೇಟರುಗಳನ್ನು ಪಿಎಂ-ಕೇರ್ಸ್ ಅಡಿ ಒದಗಿಸುವಂತೆ ಮನವಿ ಮಾಡಲಾಯಿತು.

ಜೊತೆಗೆ, ತಾಲ್ಲೂಕು ಆಸ್ಪತ್ರೆಗಳಿಗೆ 40 ಪಿಎಸ್ ಎ ಆಕ್ಸಿಜನ್ ಉತ್ಪಾದನಾ ಘಟಕಗಳ ಹಂಚಿಕೆ ಮಾಡುವಂತೆ ಹಾಗೂ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಹಂಚಿಕೆಯ ವಿಕೇಂದ್ರೀಕರಣ ಮಾಡುವಂತೆ ಮನವಿ ಮಾಡಲಾಯಿತು. ಮ್ಯುಕೊರ್ಮೈಕೊಸಿಸ್ ಆಂಫೊಟೆರಿಸಿನ್-ಬಿ ಮತ್ತು ಮಕ್ಕಳಿಗೆ ಐವಿಐಜಿ ಹಂಚಿಕೆಯನ್ನು ಹೆಚ್ಚಿಸ ಬೇಕೆಂದು ಮನವಿ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಎಂ. ಕಾರಜೋಳ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: coronaviruscovid-19 vaccineNarendra ModiYediyurappa
Previous Post

ಆರ್ಥಿಕತೆ ಉತ್ತೇಜಿಸಲು ಉನ್ನತ ಗುಣಮಟ್ಟದ ಇನ್ಫ್ರಾಸ್ಟ್ರಕ್ಚರ್ ಮೇಲೆ ಹೂಡಿಕೆ ಮಾಡಬೇಕು: ಎನ್ಐಟಿಐ ಆಯೋಗ್ ಸಿಇಒ

Next Post

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ಮಸೂದೆ ಜಾರಿ ಕೂಗು; ಏನಿದು ಉತ್ತರ ಪ್ರದೇಶ ಸರ್ಕಾರದ ಹೊಸ ನೀತಿ?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ಮಸೂದೆ ಜಾರಿ ಕೂಗು; ಏನಿದು ಉತ್ತರ ಪ್ರದೇಶ ಸರ್ಕಾರದ ಹೊಸ ನೀತಿ?

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ಮಸೂದೆ ಜಾರಿ ಕೂಗು; ಏನಿದು ಉತ್ತರ ಪ್ರದೇಶ ಸರ್ಕಾರದ ಹೊಸ ನೀತಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada