ಟೋಕಿಯೋ ಒಲಿಂಪಿಕ್ಸ್ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಚಿನ್ನ ಗೆದ್ದ ಬಳಿಕ ಭಾರತದ ನೀರಜ್ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದಾರೆ. ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು, ಲೌಸಾನ್ ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್‌ಲೀಗ್ ನಲ್ಲಿ ಭಾಗವಹಿಸಿ ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
89.08ಮೀ.ಗಳ ಅತ್ಯುತ್ತಮ ಎಸೆತದೊಂದಿಗೆ ಲೌಸನ್ನೆ ಡೈಮಂಡ್ ಲೀಗ್ ಅನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಛೋಪ್ರಾ ಪಾತ್ರರಾಗಿದ್ದಾರೆ. ಈ ಮೂಲಕ ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ತಮ್ಮ ಬತ್ತಳಿಕೆಯಲ್ಲಿ ಮತ್ತೊಂದು ದಾಖಲೆಯನ್ನು ಸೇರಿಸಿಕೊಂಡಿದ್ದಾರೆ.

24ರ ಹರೆಯದ ನೀರಜ್ ಚೋಪ್ರಾ ಅವರು ಈ ಪ್ರಶಸ್ತಿಯ ಮೊದಲ ಪ್ರಯತ್ನದಲ್ಲಿ 89.08 ಮೀಟರ್ ದೂರ ಜಾವೆಲಿನ್ ಎಸೆದಿರುವುದು ವಿಶೇಷ.