ಟೋಕಿಯೋ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ ಚಾಂಪಿಯನ್ಶಿಪ್ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಭಾನುವಾರ ನಡೆದ ಫೈನಲ್ ಪಂದ್ಯಾವಳಿಯಲ್ಲಿ ನೀರಜ್ ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀ ದೂರ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಅರ್ಹತಾ ಸುತ್ತಿನಲ್ಲು ಸಹ ನೀರಜ್ ಎರಡನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದ್ದರು.
ಗ್ರೆನೆಡಾದ ಆಂಡರ್ಸನ್ ಪೀಟರ್ಸ್ 90.54 ಮೀ ದೂರ ಎಸೆಯುವ ಮೂಲಕ ಚಿನ್ನದ ಪದಕ ಗೆದಿದ್ದಾರೆ. ಚೆಕ್ ಗಣರಾಜ್ಯದ ಜಾಕೂಬ್ ವಾಡ್ಲೆಚ್ 88.09 ಮೀ ದೂರ ಎಸೆಯುವ ಮೂಲಕ ಕಂಚಿನ ಪದಕ ಜಯಿಸಿದ್ದಾರೆ.
ನೀರಜ್ ಚೋಪ್ರಾ ಬೆಳ್ಳಿ ಪದಕ ಗೆಲುವ ಮೂಲಕ ಭಾರತಕ್ಕೆ 19 ವರ್ಷಗಳ ಬಳಿಕ ಪದಕ ತಂದುಕೊಟ್ಟಿದ್ದಾರೆ. 2003ರಲ್ಲಿ ಮಹಿಳೆಯರ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಅಂಜು ಬಾಬಿ ಜಾರ್ಜ್ ಕಡೆಯದಾಗಿ ಕಂಚಿನ ಪದಕ ಗೆದಿದ್ದರು.