ಬೆಂಗಳೂರು : ಇಂದಿನಿಂದ ನೀಟ್ ಪರೀಕ್ಷೆ ಆರಂಭಗೊಂಡಿದ್ದು ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭಗೊಂಡಿದೆ.. ಇಂದು ಮಧ್ಯಾಹ್ನ 2 ಗಂಟೆಯಿಂದ ಪರೀಕ್ಷೆ ಆರಂಭಗೊಂಡಿದ್ದು ಸಂಜೆ 5:30ರವರೆಗೆ ನೀಟ್ ಪರೀಕ್ಷೆ ನಡೆಯಲಿದೆ.

ನೀಟ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಭಂಗ ಉಂಟಾಗದಂತೆ ರೋಡ್ ಶೋ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಅಂತೆಯೇ ಪ್ರಧಾನಿ ಮೋದಿಯ ರೋಡ್ ಶೋ ಪೂರ್ಣಗೊಂಡಿದೆ. ಚಾಮರಾಜಪೇಟೆಯ ಜ್ಞಾನೋದಯ ಪಿಯು ಕಾಲೇಜ್ನಲ್ಲಿ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟೂ 1,34,379 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶವನ್ನು ನೀಡಲು ನಡೆಸುವ ಪರೀಕ್ಷೆ ಇದಾಗಿದ್ದು ಪರೀಕ್ಷಾ ಕೇಂದ್ರದ ಸಿಬ್ಬಂದಿ ದಾಖಲೆಗಳನ್ನು ಪರಿಶೀಲನೆ ಮಾಡಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿದ್ದಾರೆ. ಸಂಜೆ 5:30ರವರೆಗೆ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ.