ನವದೆಹಲಿ: ನೀಟ್ ಪರೀಕ್ಷೆ ಗೊಂದಲದ ಗೂಡಾಗಿದ್ದು, ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ನಡೆಸುವಂತೆ ಮನವಿ ಮಾಡುತ್ತಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಗ್ಸೇರ್ ಮತ್ತು ಗ್ರೇಸ್ ಅಂಕ ಹಾಗೂ ಇತರ ಆರೋಪಗಳಿಗೆ ತುತ್ತಾಗಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್ ಯುಜಿ-2024’ ಅನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾದ ಮನವಿ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗಳಿಂದ ಪ್ರತಿಕ್ರಿಯೆ ಕೇಳಿದೆ.
ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ. ಅಹ್ಸಾನುದ್ದೀನ್ ಅಮಾನುಲ್ಲಾ ಅವರ ರಜಾಕಾಲದ ಪೀಠ, ಇಲ್ಲಿ ಪಾವಿತ್ರ್ಯಕ್ಕೆ ಧಕ್ಕೆ ಆಗಿದೆ. ಆದ್ದರಿಂದ ನಮಗೆ ಉತ್ತರಗಳು ಬೇಕಾಗುತ್ತವೆ’ ಎಂದು ಮೊನಚಾಗಿ ನುಡಿಯಿತು. ಆದಾರೂ ಪಾಸಾಗಿರುವ ಅಭ್ಯರ್ಥಿಗಳ ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶ ಕೌನ್ಸೆಲಿಂಗ್‌ಗೆ ತಡೆ ನೀಡಲು ನಿರಾಕರಿಸಿತು.
ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿರುವ ನೀಟ್-ಯುಜಿ ನಡೆಸುವ ಕೇಂದ್ರ ಮತ್ತು ಎನ್‌ಟಿಎ ಜೊತೆಗೆ ಪೀಠವು ಬಿಹಾರ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿದೆ. ನೀಟ್‌ನಲ್ಲಿ ಅಕ್ರಮ ನಡೆದಿದೆ ಎಂದು ಶಿವಾಂಗಿ ಮಿಶ್ರಾ ಮತ್ತು ಇತರ 10 ಎಂಬಿಬಿಎಸ್ ಆಕಾಂಕ್ಷಿಗಳು ಸಲ್ಲಿಸಿದ ಪ್ರತ್ಯೇಕ ಮನವಿಗಳನ್ನು ಸುಪ್ರೀಂ ಕೋರ್ಟ್ ಒಂದು ಅರ್ಜಿಯಾಗಿ ಟ್ಯಾಗ್ ಮಾಡಿತು.
ಈ ಬಾರಿ ನೀಟ್ ನಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿ 67 ವಿದ್ಯಾರ್ಥಿಗಳಿಗೆ 720ಕ್ಕೆ 720 ಅಂಕ ಬಂದಿತ್ತು. ನೀಟ್‌ನಲ್ಲಿ ಪ್ರತಿ ಪ್ರಶ್ನೆ 4 ಅಂಕದ್ದಾದರೂ ಕೆಲವು ವಿದ್ಯಾರ್ಥಿಗಳಿಗೆ 718-719 ಅಂಕ ಬಂದಿರುವುದು ಸಂದೇಹಗಳಿಗೆ ಕಾರಣವಾಗಿದೆ. ಹೀಗಾಗಿ ನೀಟ್ ಪರೀಕ್ಷೆಯಲ್ಲಿ ಗೊಂದಲ ಮೂಡಿದೆ.






