• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಈಗ ನೀಟ್ ಕಡ್ಡಾಯ: ಡಾ. ಶರಣ ಪ್ರಕಾಶ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
April 25, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಫಿಸಿಯೋಕಾನ್‌ -25 ಸಮ್ಮೇಳನ, ಸಾವಿರಾರು ಮಂದಿ ಭಾಗಿ

ADVERTISEMENT

ಬೆಂಗಳೂರು, ಏಪ್ರಿಲ್ 25: ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ ಪೂರಕವಾಗಿರುತ್ತದೆ. ಸಾಮರ್ಥ್ಯ ಆಧಾರಿತ ಕಲಿಕೆ ಮತ್ತು ಹೆಚ್ಚುವರಿ ಕ್ಲಿನಿಕಲ್ ಮಾನ್ಯತೆಗಾಗಿ ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಫಿಸಿಯೋಥೆರಪಿಯ ಅಂತಾರಾಷ್ಟ್ರೀಯ ಸಮ್ಮೇಳನವಾದ ಕರ್ನಾಟಕ ಫಿಸಿಯೋಕಾನ್ -25 ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಭಾಷಣ ಮಾಡಿದರು.

ಫಿಸಿಯೋಥೆರಪಿ ಕೋರ್ಸ್‌ಗಳ ಪ್ರವೇಶವನ್ನು ನೀಟ್ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರದ ಬೆಂಬಲವಿದೆ. ಶೈಕ್ಷಣಿಕ ಗುಣಮಟ್ಟ ಮತ್ತು ವೃತ್ತಿಪರ ಮಾನದಂಡಗಳನ್ನು ಹೆಚ್ಚಿಸುವ ನೀಟ್ ಅಡಿಯಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳ ಏಕೀಕರಣವನ್ನು ನಾವು ಸ್ವಾಗತಿಸುತ್ತೇವೆ ಎಂದು ಅವರು ಹೇಳಿದರು.

ಗಣನೀಯ ಸೇವೆ ನೀಡುತ್ತಿರುವ ಭೌತ ಚಿಕಿತ್ಸಕರು

ಹೆರಿಗೆಯಿಂದ ವೃದ್ಧರ ಆರೈಕೆಯವರೆಗೆ, ಆರೋಗ್ಯ ರಕ್ಷಣೆಯಲ್ಲಿ ಭೌತಚಿಕಿತ್ಸಕರು ಪ್ರಮುಖ ಪಾತ್ರ ವಹಿಸುತ್ತಾರೆ. ಭೌತಚಿಕಿತ್ಸಕರು ನರ ಮತ್ತು ಮೂಳೆಚಿಕಿತ್ಸೆ ಪುನರ್‌ ಆರೈಕೆ, ಹೃದಯ ಶ್ವಾಸಕೋಶ ಆರೈಕೆ, ಮಕ್ಕಳ ಚಿಕಿತ್ಸೆ, ಅಂಗವೈಕಲ್ಯ ಚಿಕಿತ್ಸೆ, ಫಿಟ್ನೆಸ್ ಮತ್ತು ಸಮುದಾಯ ಆಧಾರಿತ ಆರೈಕೆಗೆ ಗಣನೀಯ ಕೊಡುಗೆ ನೀಡುತ್ತಾರೆ” ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ತರಬೇತಿ ಪಡೆದ ವೃತ್ತಿಪರರಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ. ಇದನ್ನು ಪೂರೈಸಲು ಹೆಚ್ಚಿನ ಸರ್ಕಾರಿ ಕಾಲೇಜುಗಳಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳನ್ನು ಪರಿಚಯಿಸುವ ಚಿಂತನೆ ಇದೆ ಎಂದು ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಪಠ್ಯಕ್ರಮ ಬದಲಾವಣೆ
ರಾಷ್ಟ್ರೀಯ ಅಲೈಡ್ & ಹೆಲ್ತ್ ಪ್ರೊಫೆಷನಲ್ಸ್ ಆಯೋಗದ ಅಧ್ಯಕ್ಷರಾದ ಡಾ. ಯಜ್ಞ ಶುಕ್ಲಾ ಮಾತನಾಡಿ, ಭೌತಚಿಕಿತ್ಸೆಯ ಶಿಕ್ಷಣದಲ್ಲಿ ಒಂದು ರಾಷ್ಟ್ರ, ಒಂದು ಪಠ್ಯಕ್ರಮ ಉಪಕ್ರಮವನ್ನು ಪರಿಚಯಿಸಲು ಆಯೋಗ ಚಿಂತನೆ ನಡೆಸಿದೆ ಎಂದು ಹೇಳಿದರು,

ಪಠ್ಯಕ್ರಮ ಸುಧಾರಣೆಗಳು ವಿದ್ಯಾರ್ಥಿಗಳು ಮತ್ತು ವೈದ್ಯರಿಗೆ ವಿಶೇಷ ಪ್ರಯೋಜನಗಳೊಂದಿಗೆ ವೃತ್ತಿಯನ್ನು ಉನ್ನತೀಕರಿಸುವ ಮಾನದಂಡವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಇಸ್ರೇಲ್, ಆಸ್ಟ್ರೇಲಿಯಾ ಮತ್ತು ನೇಪಾಳದ ಭಾಷಣಕಾರರು, ಜಾಗತಿಕ ತಜ್ಞರು ಹಾಗೂ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು, 50 ರಾಷ್ಟ್ರೀಯ ತಜ್ಞರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ 800 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಯಿತು.

ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್ ಉಪಸ್ಥಿತರಿದ್ದರು

BOX
ಹೊಸ ಕಚೇರಿ ಕಟ್ಟಡ ಉದ್ಘಾಟನೆ

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್‌ ಕೌನ್ಸಿಲ್ (ಕೆಎಸ್‌ಎಎಚ್‌ಸಿ) ನ ಹೊಸ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಎಸ್‌ಎಎಚ್‌ಸಿ ಅಧ್ಯಕ್ಷ ಡಾ. ಯು.ಟಿ. ಇಫ್ತಿಕರ್ ಫರೀದ್ ಉಪಸ್ಥಿತರಿದ್ದರು.

Tags: bachelor of physiotherapycareer in physiotherapydr sharan prakash patildr sharan prakash patil wifephysiotherapyis neet required for physiotherapyis physiotherapy a paramedical courseis physiotherapy is medical coursesminister sharan prakash patilneet score for physiotherapyphysiotherapy careerphysiotherapy coursephysiotherapy course detailsphysiotherapy course durationphysiotherapy course feesphysiotherapy course in indiaphysiotherapy coursesphysiotherapy courses after 12thsharan prakash patilsharan prakash patil against bjpsharan prakash patil agesharan prakash patil in home ministersharan prakash patil in suvarna newssharan prakash patil in suvarna news home ministersharan prakash patil latest newssharan prakash patil newssharan prakash patil pasharan prakash patil today newssharan prakash patil udagi
Previous Post

ಧ್ರುವ ಸರ್ಜಾ ಅರ್ಪಿಸುತ್ತಿರುವ ಪಪ್ಪಿ ಸಿನಿಮಾ ಮೇ1ಕ್ಕೆ ರಿಲೀಸ್‌

Next Post

ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್​ ವಿಧಿವಶ.. ನಾಳೆ ಅಂತಿಮ ದರ್ಶನ

Related Posts

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!
ವಿಶೇಷ

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

by ಪ್ರತಿಧ್ವನಿ
April 15, 2026
0

ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮೃತದೇಹಗಳ ಅಂತ್ಯಕ್ರಿಯೆಗಾಗಿ ಶವದಹನ ಅಥವಾ ಸಮಾಧಿ ಮಾಡುವ ಪದ್ಧತಿ ಸಾಮಾನ್ಯವಾಗಿದೆ. ಆದರೆ ಜಗತ್ತಿನ ಕೆಲವು ಭಾಗಗಳಲ್ಲಿ ಅಚ್ಚರಿ ಹುಟ್ಟಿಸುವ ರೀತಿಯ ವಿಭಿನ್ನ...

Read moreDetails
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್​ ವಿಧಿವಶ.. ನಾಳೆ ಅಂತಿಮ ದರ್ಶನ

ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್​ ವಿಧಿವಶ.. ನಾಳೆ ಅಂತಿಮ ದರ್ಶನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada