• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು: ಯುಜಿನೀಟ್-2024ಕ್ಕೆ (NEET UG 2024) ಹೊಸದಾಗಿ ನೋಂದಣಿ ಮಾಡಿರುವ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪರಿಶೀಲನಾ ಪತ್ರವನ್ನು (ವೆರಿಫಿಕೇಶನ್ ಸ್ಲಿಪ್) ಪ್ರಾಧಿಕಾರದ ವೆಬ್‌ಸೈಟಿನ ಸೂಕ್ತ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಸೂಚಿಸಿದೆ.

ADVERTISEMENT

ಒಂದು ವೇಳೆ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳು ಯುಜಿ ನೀಟ್- 24ಕ್ಕೆ ಹೊಸದಾಗಿ ನೋಂದಣಿ ಮಾಡಿಸಿಕೊಂಡಿದ್ದು, ಎನ್ ಆರ್ ಐ-ವಾರ್ಡ್ ಎಂದು ಕ್ಲೇಮ್ ಮಾಡಿದ್ದಲ್ಲಿ ಅಥವಾ ಪ್ರವರ್ಗ 2ರಿಂದ ಪ್ರವರ್ಗ 8ರ ಅಡಿಯಲ್ಲಿ ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕ್ಲೇಮ್ ಮಾಡಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ದಾಖಲಾತಿ ಪರಿಶೀಲನೆಗೆ ಆಗಸ್ಟ್ 12 ಅಥವಾ 13ರಂದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಜಿ ನೀಟ್-2024ಕ್ಕೆ ಹೊಸದಾಗಿ ನೋಂದಣಿ ಮಾಡಿರುವ ಕ್ಲಾಸ್ ಬಿ, ಸಿ, ಡಿ, ಇ, ಎಫ್, ಜಿ, ಎಚ್, ಐ, ಜೆ, ಕೆ, ಎಲ್, ಎಂ, ಎನ್ ಮತ್ತು ಒ ಅಭ್ಯರ್ಥಿಗಳು ಹಾಗೂ ಒಸಿಐ/ ಪಿಐಒ / ಎನ್ ಆರ್ ಐ / ವಿದೇಶ ಪ್ರಜೆ ಅಭ್ಯರ್ಥಿಗಳು ಕೆಇಎ ಕಚೇರಿಗೆ ದಾಖಲಾತಿ ಪರಿಶೀಲನೆಗೆ ಆಗಸ್ಟ್ 12 ಅಥವಾ 13ರಂದು ಹಾಜರಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ.ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳ ಬಗ್ಗೆ ತಿಳಿಯಲು ಯುಜಿ ನೀಟ್-2024 ಮಾಹಿತಿ ಪುಸ್ತಕ ನೋಡಬಹುದು ಎಂದು ಹೇಳಲಾಗಿದೆ. ಆ.7ರಿಂದ 9ರವರೆಗೆ ನಡೆದ ದಾಖಲಾತಿ ಪರಿಶೀಲನೆಗೆ ಹಾಜರಾಗದಿದ್ದವರು ಕೂಡ ಈ ಮೇಲಿನ ದಿನಗಳಂದು ಭೇಟಿ ಕೊಡಬಹುದು ಎಂದು ತಿಳಿಸಲಾಗಿದೆ.

ಬೆಂಗಳೂರು: ಯುಜಿಸಿಇಟಿ 2024ರ (UGCET 2024) ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಬಿಡುಗಡೆ ಮತ್ತೆ ಮುಂದೂಡಿಕೆಯಾಗಿದೆ. ಆಗಸ್ಟ್ 9ರ ಸಂಜೆ ಫಲಿತಾಂಶ (KCET Mock Allotment 2024) ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಆದರೆ, ಇದೀಗ ಮತ್ತೆ ಒಂದು ದಿನ ಮುಂದೂಡಲಾಗಿದೆ. ಈ ಕುರಿತು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.ಎಂಜಿನಿಯರಿಂಗ್ (Engineering) ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆ.10ರಂದು ಸಂಜೆ 6 ಗಂಟೆಗೊಳಗೆ ಕೆಇಎ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು.

ಎಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು.

ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

Tags: Education and EmploymentEducation DepartmentGovernment of Karnataka
Previous Post

ವಿಮಾನ ಪತನ; 62 ಪ್ರಯಾಣಿಕರು ಸೇರಿ ಎಲ್ಲ 70 ಮಂದಿಯ ದುರ್ಮರಣ,

Next Post

128 ಕಿ.ಮಿ. ಕ್ರಮಿಸಿದ ಪಾದಯಾತ್ರೆ ಅಂತ್ಯ ಇಂದು ಮೈಸೂರಿನಲ್ಲಿ ದೋಸ್ತಿ ಸಮಾವೇಷ !

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

August 4, 2026
ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

August 4, 2026
ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

August 4, 2026
Next Post
128 ಕಿ.ಮಿ. ಕ್ರಮಿಸಿದ ಪಾದಯಾತ್ರೆ ಅಂತ್ಯ ಇಂದು ಮೈಸೂರಿನಲ್ಲಿ ದೋಸ್ತಿ ಸಮಾವೇಷ !

128 ಕಿ.ಮಿ. ಕ್ರಮಿಸಿದ ಪಾದಯಾತ್ರೆ ಅಂತ್ಯ ಇಂದು ಮೈಸೂರಿನಲ್ಲಿ ದೋಸ್ತಿ ಸಮಾವೇಷ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada