ನೇಹಾ (neha) ಹತ್ಯೆ ಪ್ರಕರಣ ಇಡೀ ರಾಜ್ಯಾಧ್ಯಂತ ಆಕ್ರೋಶದ ಜ್ವಾಲೆಯನ್ನು ಎಬ್ಬಿಸಿದೆ.ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ (karnataka government) ನೇಹಾ ಪ್ರಕರಣವನ್ನು ಸಿಐಡಿಗೆ (CID) ಒಪ್ಪಿಸಿತ್ತು. ಒಂದೆಡೆ ಪ್ರತಿಭಟನೆ ತೀವ್ರಗೊಂಡಿದ್ರೆ, ಮತ್ತೊಂದೆಡೆ ಸಿಐಡಿ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ಮೊನ್ನೆ ರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿದ ಸಿಐಡಿ ಎಸ್ಪಿ ವೆಂಕಟೇಶ್ (SP venkatesh) ನೇತ್ರತ್ವದ ತಂಡ, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಥಳೀಯ ಪೊಲೀಸರಿಂದ ಸಿಐಡಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪಡೆದುಕೊಂಡಿದೆ. ಇವತ್ತು ಆರೋಪಿ ಫಯಾಜ್‌ನನ್ನು (Falaz) ಕೋರ್ಟ್ ಮುಂದೆ ಹಾಜರು ಪಡಿಸಿ, ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ವಶಕ್ಕೆ ಪಡೆದ ಬಳಿಕ ಆರೋಪಿಯನ್ನು ಸ್ಥಳ ಮಹಜರಿಗೆ ಸಿಐಡಿ ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ.

ಕಳೆದ ರಾತ್ರಿ ಎಬಿವಿಪಿ (ABVP) ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು. ನೇಹಾಳ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ (capital punishment) ಆಗಬೇಕು ಅಂತ ಆಗ್ರಹಿಸಿದ್ದಾರೆ. ಇನ್ನು ಬೆಂಗಳೂರಿನಲ್ಲೂ (Bangalore) ಮೆಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯ್ತು. ಕೇಂದ್ರಸಚಿವ ಶೋಭಾ ಕರಂದ್ಲಾಹೆ (shobhs ksrandlaje)ಸಮ್ಮುಖದಲ್ಲಿ ನೂರಾರು ಜನರು ಮೇಣದ ಬತ್ತಿ ಬೆಳಗುವ ಮೂಲಕ ನೇಹಾ ಹತ್ಯೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ರು.




